ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ (Kerala) ಕೊಚ್ಚಿಯಲ್ಲಿ (Kochi) ನಡೆದಿದೆ.
ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ (Thumboli) ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ ನಿವಾಸಿ ಶರೋನ್ ವಿವಾಹ ಶುಕ್ರವಾರ ನಿಗದಿಯಾಗಿತ್ತು. ಈ ಹಿನ್ನೆಲೆ ವಧು ಅವನಿ ಮೇಕಪ್ ಮಾಡಿಸಿಕೊಳ್ಳಲೆಂದು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವನಿಯ ಬೆನ್ನುಮೂಳೆಗೆ ತೀವ್ರ ಗಾಯವಾಗಿ ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಗೆ (VPS Lakeshore Hospital) ದಾಖಲಾಗಿದ್ದಾರೆ. ಇದನ್ನೂ ಓದಿ: ದೆಹಲಿ ಸ್ಫೋಟ ಕೇಸ್; 6.5 ಲಕ್ಷಕ್ಕೆ ಎಕೆ-47 ರೈಫಲ್ ಖರೀದಿಸಿದ್ದ ಪ್ರಮುಖ ಆರೋಪಿ ಮುಜಾಮ್ಮಿಲ್
ಆಸ್ಪತ್ರೆಗೆ ಬಂದ ಶರೋನ್ ಹಾಗೂ ಅವನಿ ಕುಟುಂಬಸ್ಥರು ಪೂರ್ವ ನಿಗದಿಯಾಗಿದ್ದಂತೆ ಶುಕ್ರವಾರ ಮಧ್ಯಾಹ್ನ 12:15 ರಿಂದ 12:30ರ ನಡುವೆ ಮದುವೆ ನೆರವೇರಿಸಲು ಅವಕಾಶ ಕಲ್ಪಿಸುವಂತೆ ಆಸ್ಪತ್ರೆಯವರಲ್ಲಿ ಮನವಿ ಮಾಡಿದ್ದರು. ಅದರಂತೆ ಆಸ್ಪತ್ರೆಯ ಐಸಿಯುನಲ್ಲೇ ಶರೋನ್ ಅವನಿ ಕುತ್ತಿಗೆಗೆ ತಾಳಿ ಕಟ್ಟಿದ್ದಾರೆ. ಕುಟುಂಬ ಸದಸ್ಯರು ಈ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್‌ನ 4ನೇ ಮಹಡಿಯಿಂದ ಜಿಗಿದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಆಸ್ಪತ್ರೆಯಲ್ಲಿಯೇ ಸಮಾರಂಭ ನಡೆಸಬೇಕೆಂದು ವರನ ಕುಟುಂಬ ಮನವಿ ಮೇರೆಗೆ ಇಲ್ಲಿಯೇ ಮದುವೆ ನಡೆಸಿದ್ದೇವೆ ಎಂದು ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಇಂದು (ಶನಿವಾರ) ಅವನಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ನರಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸುಧೀಶ್ ಕರುಣಾಕರನ್ ತಿಳಿಸಿದ್ದಾರೆ. ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಸುಪಾರಿ ಕೊಟ್ಟು ಹತ್ಯೆ – 7 ವರ್ಷಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ
