– ಮೊದಲ ಪತಿಯ ಮಗಳಿಗೆ ವಿಷ ಹಾಕಿದ್ದ ಜ್ಯೂಲಿ
– ಹೆಣ್ಣು ಮಗು ಇದೆ ಅನ್ನೋ ಕಾರಣಕ್ಕೆ 2 ಬಾರಿ ಗರ್ಭಪಾತ
ತಿರುವನಂತಪುರಂ: ತನ್ನದೇ ಕುಟುಂಬಸ್ಥರನ್ನು ಹಂತ ಹಂತವಾಗಿ ಕೊಲ್ಲುತ್ತಾ ಆಸ್ತಿಯನ್ನು ಅನುಭವಿಸುವ ಪ್ಲಾನ್ ಮಾಡಿದ್ದ ಕೇರಳ ಸೈನೈಡ್ ಕಿಲ್ಲರ್ ಜ್ಯೂಲಿ ತನಿಖೆ ವೇಳೆ ಆಘಾತಕಾರಿ ವಿಷಯ ಬಿಚ್ಚಿಟ್ಟಿದ್ದಾಳೆ. ತನಗೆ ಹೆಣ್ಣು ಮಕ್ಕಳನ್ನು ಕಂಡರೆ ಆಗುತ್ತಿರಲಿಲ್ಲ ಎಂದು ಬಾಯ್ಬಿಟ್ಟಿದ್ದಾಳೆ.
Advertisement
ಮಂಗಳವಾರ ವಿಶೇಷ ತನಿಖಾ ತಂಡ(ಎಸ್‍ಐಟಿ) ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾಗ, ಜ್ಯೂಲಿ ಹೆಣ್ಣು ಮಕ್ಕಳನ್ನು ದ್ವೇಷಿಸುತ್ತಾಳೆ ಎನ್ನುವ ಬಗ್ಗೆ ತಿಳಿದುಬಂದಿದೆ. ಜ್ಯೂಲಿ ಹೆಣ್ಣು ಮಕ್ಕಳ ಮೇಲೆ ಎಷ್ಟರ ಮಟ್ಟಿಗೆ ದ್ವೇಷ ಇಟ್ಟುಕೊಂಡಿದ್ದಳು ಎಂದರೆ, ತನ್ನ ಮೊದಲ ಪತಿಯ 2 ವರ್ಷದ ಹೆಣ್ಣು ಮಗುವನ್ನು ಜ್ಯೂಲಿ ವಿಷ ಹಾಕಿ ಕೊಲ್ಲಲು ಯತ್ನಿಸಿದ್ದಳು. ಅಲ್ಲದೆ ಆಕೆ ಗರ್ಭಿಣಿಯಾಗಿದ್ದಾಗ ತನ್ನ ಹೊಟ್ಟೆಯಲ್ಲಿ ಇರುವುದು ಹೆಣ್ಣು ಮಗು ಎಂದು ತಿಳಿದಾಗ, ಎರಡು ಬಾರಿ ಗರ್ಭಪಾತ ಕೂಡ ಮಾಡಿಸಿಕೊಂಡಿದ್ದಳು ಎಂದು ಎಸ್‍ಐಟಿ ಅಧಿಕಾರಿ ತಿಳಿಸಿದ್ದಾರೆ. ಈಗಾಗಲೇ ಜ್ಯೂಲಿಯ ಹೇಳಿಕೆಗಳನ್ನು ಎಸ್‍ಐಟಿ ಅಧಿಕಾರಿಗಳು ದಾಖಲಿಸಿಟ್ಟುಕೊಂಡಿದ್ದು, ಕ್ರೈಂ ಬ್ರಾಂಚ್ ಪೊಲೀಸರು ಈ ಸಂಬಂಧ ದೂರುದಾರರ ವಿಚಾರಣೆಯನ್ನು ಕೂಡ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.
Advertisement
Advertisement
ಈ ಸೈನೈಡ್ ಕೊಲೆ ಪ್ರಕರಣ ವಿಚಾರಣೆ ನಡೆಸುತ್ತಿರುವ ಎಸ್‍ಐಟಿ ತನಿಖಾಧಿಕಾರಿಗಳು ಮೃತರ ಶವಗಳ ಪತ್ತೆಗಾಗಿ ದೇಶದಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯಗಳ ಸಹಾಯವನ್ನು ಕೋರಿದ್ದಾರೆ. ಜೊತೆಗೆ ಅಗತ್ಯವಿದ್ದರೆ ವಿದೇಶಿ ಪ್ರಯೋಗಾಲಯಗಳ ಸಹಾಯವನ್ನೂ ಕೂಡ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.
Advertisement
ಏನಿದು ಪ್ರಕರಣ?
ಕೇರಳದ ಕೊಜ್ಹಿಕೊಡೆ ಜಿಲ್ಲೆಯಲ್ಲಿ ಶನಿವಾರ ಪೊಲೀಸರು ಹಂತಕಿ ಜ್ಯೂಲಿಯ ಜೊತೆಗೆ 2ನೇ ಪತಿ ಹಾಗೂ ಮತ್ತೊಬ್ಬನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಹಂತಕಿ ಜ್ಯೂಲಿ ತನ್ನ ಕುಟುಂಬಸ್ಥರನ್ನು ಕೊಲ್ಲುವುದರ ಜೊತೆಗೆ ಸಂಬಂಧಿ ಮಹಿಳೆಯನ್ನು ಕೊಂದು ಆಕೆಯ ಪತಿಯನ್ನ ಮದುವೆ ಆಗಿದ್ದಳು. ಎರಡು ಕುಟುಂಬಗಳ ಆಸ್ತಿಯನ್ನು ಅನುಭವಿಸಲು ಹಂತಕಿ ಜ್ಯೂಲಿ ಮತ್ತು ಆಕೆಯ ಎರಡನೇ ಗಂಡ ಶಜು 2002 ರಿಂದ 2016ರ ಅವಧಿಯಲ್ಲಿ ಕ್ಯಾಥೋಲಿಕ್ ಕುಟುಂಬದ 6 ಮಂದಿಯನ್ನು ಬಲಿಪಡೆದಿದ್ದಾರೆ.
ಹಂತ ಹಂತವಾಗಿ ಕೊಲೆ: 2002 ರಿಂದ 2016ರ ಅವಧಿಯಲ್ಲಿ ಕ್ಯಾಥೊಲಿಕ್ ಕುಟುಂಬದ 6 ಮಂದಿಯನ್ನು ಜ್ಯೂಲಿ ಕೊಲೆ ಮಾಡಿದ್ದಾಳೆ. ನಿವೃತ್ತ ಶಿಕ್ಷಕಿ ಅಣ್ಣಮ್ಮ ಥಾಮಸ್ (57) 2002ರಲ್ಲಿ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದರು. ಈ ವೇಳೆ ಅವರ ಸಾವನ್ನ ಸಹಜಸಾವು ಎಂದು ತಿಳಿದ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿದ್ದರು. 6 ವರ್ಷದ ಬಳಿಕ ಅಣ್ಣಮ್ಮ ಥಾಮಸ್ ಪತಿ ಟಾಮ್ ಥಾಮಸ್ (66) ಹೃದಯಘಾತದಿಂದ ಸಾವನ್ನಪ್ಪಿದ್ದರು. 2001 ರಲ್ಲಿ ದಂಪತಿಯ ಪುತ್ರ ರಾಯ್ ಥಾಮಸ್ (40) ಕೂಡ ಇದೇ ರೀತಿ ಮೃತ ಪಟ್ಟಿದ್ದರು. ಈ ವೇಳೆ ಅವರನ್ನು ವಿಷ ಉಣಿಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು. ಆ ಬಳಿಕ ಅಣ್ಣಮ್ಮ ಸಹೋದರ ಮ್ಯಾಥ್ಯೂ ಮಂಜಡಿಯಿಲ್ (67) 2014 ರಲ್ಲಿ ಸಾವನ್ನಪ್ಪಿದ್ದರು. ಎಲ್ಲರನ್ನು ಒಂದೇ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು.
ಎರಡರ ಕಂದಮ್ಮ ಬಲಿ: 2016 ರಲ್ಲಿ ಇದೇ ಕುಟುಂಬದ ಸಂಬಂಧಿಯ 2 ವರ್ಷದ ಮಗಳು ಅಲ್ಫೋನ್ಸ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಳು. ಇದಾದ ಕೆಲ ತಿಂಗಳ ಅಂತರದಲ್ಲೇ ಅಲ್ಫೋನ್ಸ ತಾಯಿ 27 ವರ್ಷದ ಸಿಲಿ ಕೂಡ ಸಾವನ್ನಪ್ಪಿದ್ದರು. ಇತ್ತ ಪತಿ ಮರಣದ ಬಳಿಕ ಪತ್ನಿ ಜ್ಯೂಲಿ ಮೃತ ಸಿಲಿ ಪತಿಯನ್ನು ಮದುವೆಯಾಗಿ ಕುಟುಂಬ ಅಸ್ತಿ ತಮಗೆ ಸೇರಬೇಕು ಎಂದು ಕಾನೂನಿನ ಅನ್ವಯ ಮನವಿ ಸಲ್ಲಿಸಿದ್ದರು. ಆದರೆ ಅಮೆರಿಕದಲ್ಲಿ ನೆಲೆಸಿರುವ ಟಾಮ್ ಥಾಮಸ್ ಕಿರಿಯ ಪುತ್ರ ಮೆಜೊ ಆಕ್ಷೇಪಣೆ ಸಲ್ಲಿಸಿ ಕುಟುಂಬ ಸರಣಿ ಸಾವಿನ ಕುರಿತು ಕ್ರೈಂ ಬ್ರಾಂಚ್‍ಗೆ ದೂರು ನೀಡಿದ್ದರು.
ಪ್ರಕರಣದ ದಾಖಲಿಸಿ ವಿಚಾರಣೆ ಆರಂಭಿಸಿದ ಅಪರಾಧದಳ ಪೊಲೀಸರಿಗೆ ವಿಚಾರಣೆ ವೇಳೆ ಶಾಕಿಂಗ್ ಅಂಶಗಳು ತಿಳಿದು ಬಂದಿದ್ದವು. ಈ ಪ್ರಕರಣ ಕೇರಳದಲ್ಲಿ ಸಂಚಲನವನ್ನು ಉಂಟು ಮಾಡಿತ್ತು. ಪ್ರತಿ ಬಾರಿ ಕುಟುಂಬ ಸದಸ್ಯರನ್ನು ಕೊಲೆ ಮಾಡುವ ವೇಳೆ ಜ್ಯೂಲಿ ಸೂಕ್ತ ಪ್ಲಾನ್ ಮಾಡಿ ಯಾರಿಗೂ ಅನುಮಾನಬಾರದಂತೆ ಕೃತ್ಯ ಎಸಗುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳಾಗಿರುವ ಮೃತರ ವೈಜ್ಞಾನಿಕ ಪರೀಕ್ಷೆಗಳ ವರದಿಗೆ ಪೊಲೀಸರು ಕಾಯುತ್ತಿದ್ದಾರೆ. ವಿಚಾರಣೆ ವೇಳೆ ಮೃತ 6 ಮಂದಿ ಸಾವಿನ ವೇಳೆ ಜ್ಯೂಲಿ ಸ್ಥಳದಲ್ಲಿ ಇರುವುದು ಖಚಿತವಾಗಿದೆ. ಈ ಪ್ರಕರಣ ತಮಗೆ ಹೆಚ್ಚು ಚಾಲೆಂಜಿಂಗ್ ಆಗಿತ್ತು ಎಂದು ಪೊಲೀಸರು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಸಿಕ್ಕಿ ಬಿದ್ದಿದ್ದು ಹೇಗೆ?
ಪ್ರಕರಣವನ್ನು ಬೇದಿಸಲು ಪೊಲೀಸರು ಜೂಲಿ ಹಾಗೂ ಆಕೆಯ 2ನೇ ಪತಿ ಶಾಜುನನ್ನು 8 ಬಾರಿ ತೀವ್ರ ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದರು. ಎಂಟು ಬಾರಿ ವಿಚಾರಣೆಯಲ್ಲಿಯೂ ಇಬ್ಬರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಅಲ್ಲದೇ ಜೂಲಿಯ ಫೋನ್ ವಿವರ ಪಡೆದ ವೇಳೆ ಆಕೆ ಶಾಜುನೊಂದಿಗೆ ನಿರಂತರ ಸಂಪರ್ಕದಲ್ಲಿ ಇರುವುದು ತಿಳಿದು ಬಂದಿತ್ತು. ಅಂದಹಾಗೇ ಜೂಲಿ ವಾಣಿಜ್ಯ ಪದವೀಧರೆಯಾಗಿದ್ದು, ಇಂಜಿನಿಯರಿಂಗ್ ಪದವಿ ಪಡೆದಿದ್ದೇನೆ ಎಂದು ಹೇಳಿ ಕೆಲಸ ಪಡೆದಿದ್ದಳು.
ಕೊಲೆಗೆ ಸೈನೈಡ್ ಬಳಕೆ: ಜೂಲಿ ತನ್ನ ಕುಟುಂಬದ 6 ಮಂದಿಯನ್ನು ಕೊಲೆ ಮಾಡಲು ನಿಧಾನವಾಗಿ ಸಾಯಿಸುವ ಸೈನೈಡನ್ನು ಬಳಕೆ ಮಾಡಿದ್ದಳು. ಮೃತ ದೇಹಗಳನ್ನು ಹೊರ ತೆಗೆದು ಪರೀಕ್ಷೆ ನಡೆಸಿದ ವೇಳೆ ಮೃತರ ದೇಹದಲ್ಲಿ ವಿಷ ಇರುವುದು ವೈಜ್ಞಾನಿಕ ಪರೀಕ್ಷೆಗಳಲ್ಲಿ ಖಚಿತವಾಗಿತ್ತು. ಜೂಲಿಗೆ ಸೈನೈಡ್ ಪೂರೈಕೆ ಮಾಡುತ್ತಿದ್ದ ಆರೋಪದ ಅಡಿ ಅಭರಣದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಜಿಕುಮಾರ್ ಹಾಗೂ ಎಂಎಸ್ ಮ್ಯಾಥ್ಯೂರನ್ನು ಬಂಧಿಸಿದ್ದಾರೆ.