ಕೊಚ್ಚಿ: ಕೇರಳದಲ್ಲಿ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ.
ಇಂದು ಬೆಳಗ್ಗೆ ಪಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರ ಗುಂಡಿಗೆ ಮೂವರು ಮಾವೋವಾದಿಗಳು ಹತರಾಗಿದ್ದಾರೆ. ಕೇರಳದ ಥಂಡರ್ಬೋಲ್ಟ್ ಕಮಾಂಡೋ ತಂಡವು ಈ ಕಾರ್ಯಚರಣೆ ನಡೆಸಿದ್ದು, ಯಶಸ್ವಿಯಾಗಿ ಮೂವರನ್ನು ಹತ್ಯೆ ಮಾಡಿದೆ.
Advertisement
Advertisement
ಇತ್ತೀಚಿಗೆ ಮಾವೋವಾದಿಗಳ ಉಪಟಳ ಕೇರಳದಲ್ಲಿ ಜಾಸ್ತಿಯಾಗಿದ್ದು, ಇವರನ್ನು ಸದೆಬಡಿಯಲು ಕೇರಳ ಪೊಲೀಸರು ಕಾದು ಕುಳಿತಿದ್ದರು. ಅದರಂತೆ ಇಂದು ಬೆಳಗ್ಗೆ ಮಾವೋವಾದಿಗಳು ಪಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ. ಈ ವೇಳೆ ಪಲಕ್ಕಾಡ್ ಅರಣ್ಯದ ಮಂಚಕತ್ತಿ ಎಂಬ ಪ್ರದೇಶದಲ್ಲಿ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ.
Advertisement
ಹಿರಿಯ ಪೊಲೀಸ್ ಅಧಿಕಾರಿಗಳೆಲ್ಲ ಸ್ಥಳಕ್ಕೆ ಬಂದಿದ್ದು, ಪರೀಶಿಲನೆ ಮಾಡುತ್ತಿದ್ದಾರೆ. ಸದ್ಯ ಸಾವನ್ನಪ್ಪಿದ ಮಾವೋವಾದಿಗಳ ಗುರುತು ಪತ್ತೆಯಾಗಿಲ್ಲ. ಇನ್ನೂ ಅಪಾರ ಪ್ರಮಾಣದಲ್ಲಿ ಮಾವೋವಾದಿಗಳು ಈ ಪ್ರದೇಶದಲ್ಲಿ ಅಡಗಿರಬಹುದು ಎಂದು ಕೊಂಬಿಂಗ್ ಕಾರ್ಯ ಮುಂದುವರೆದಿದೆ. ಉಳಿದ ಮಾವೋವಾದಿಗಳಿಗಾಗಿ ಕೇರಳ ಪೊಲೀಸರು ಶೋಧ ಕಾರ್ಯ ಮಾಡುತ್ತಿದ್ದಾರೆ.
Advertisement
ಕೆಳೆದ ಕೆಲ ವರ್ಷಗಳಿಂದ ಕರ್ನಾಟಕ ತಮಿಳುನಾಡು ಮತ್ತು ಕೇರಳದಲ್ಲಿ ಮಾವೋವಾದಿಗಳು ತಮ್ಮ ಪ್ರಾಬಲ್ಯವನ್ನು ಸ್ಥಾಪಿಸಲು ಪ್ರಯತ್ನ ಪಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಅದ್ದರಿಂದ ಕೆಲ ಸೂಕ್ಷ್ಮ ಪ್ರದೇಶದ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು. ಆದರೆ ಕೇರಳದಲ್ಲಿ ಬಿಟ್ಟರೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮಾವೋವಾದಿಗಳು ಕಾಣಿಸಿಕೊಂಡಿರಲಿಲ್ಲ. 2014 ರಿಂದ 2017 ರ ವರೆಗೆ ಕೇರಳದಲ್ಲಿ ಮಾವೋವಾದಿಗಳಿಂದ 23 ವಿವಿಧ ಕೇಸ್‍ಗಳು ದಾಖಲಾಗಿದ್ದವು.