ತಿರುವನಂತಪುರಂ: ಕೇರಳ (Kerala) ಸರ್ಕಾರವು ತನ್ನ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ (Mask) ಅನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಕೋವಿಡ್ (Covid-19) ಪ್ರಕರಣಗಳ ಏರಿಕೆಯ ಅಪಾಯದಲ್ಲಿರುವುದರಿಂದ ಕೇರಳ ಮತ್ತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ ಸಮಾರಂಭಗಳಲ್ಲಿ ಜನರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರ ಜನರಿಗೆ ತನ್ನ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: ಟ್ರಾಫಿಕ್‍ನಲ್ಲಿ ಅಂಬುಲೆನ್ಸ್‌ಗಳು ಸಿಲುಕಿ ಕಿರಿಕಿರಿ- ಎಚ್ಚೆತ್ತ ಪೊಲೀಸರಿಂದ ಅಡಾಪ್ಟಿವ್ ಸಿಗ್ನಲ್ ಅಳವಡಿಕೆ
Advertisement
Advertisement
ಜನರಿಗೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಲು ಸರ್ಕಾರ ಅಂಗಡಿಗಳು, ಚಿತ್ರಮಂದಿರಗಳು ಮತ್ತು ವಿವಿಧ ಕಾರ್ಯಕ್ರಮಗಳ ಸಂಘಟಕರಿಗೆ ನಿರ್ದೇಶನ ನೀಡಿದೆ. ಕೋವಿಡ್ ಹೆಚ್ಚಳದ ಆತಂಕದ ನಡುವೆ ಹೊರಡಿಸಲಾದ ಈ ಆದೇಶ ಮುಂದಿನ 30 ದಿನಗಳವರೆಗೆ ಕೇರಳ ರಾಜ್ಯದ ಎಲ್ಲಾ ಭಾಗಗಳಲ್ಲೂ ಜಾರಿಯಲ್ಲಿರಲಿದೆ. ಇದನ್ನೂ ಓದಿ: ವೋಲ್ವೋ ಬಸ್‌ಗಳನ್ನು ಅಂತರ್ ಜಿಲ್ಲೆ ವಿಸ್ತರಣೆಗೆ ಬಿಎಂಟಿಸಿ ಮೆಗಾ ಪ್ಲಾನ್
Advertisement
ನೆರೆಯ ಚೀನಾದಲ್ಲಿ ಕೋವಿಡ್-19 ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿದ್ದು, ಇದರ ಅಪಾಯ ಭಾರತಕ್ಕೂ ಇರುವುದರಿಂದ ಕೇರಳ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k