ತಿರುವನಂತಪುರಂ: ಸರ್ಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಋತುಚಕ್ರ (Periods Leave) ದ ರಜೆ ನೀಡಿ ಕೇರಳ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಇಂತದೊಂದು ಮಹತ್ವದ ನಿರ್ಧಾರವನ್ನು ಸಿಎಂ ಪಿಣರಾಯಿ ವಿಜಯನ್ (Pinarayi Vijayan) ತೆಗೆದುಕೊಂಡಿದ್ದಾರೆ.
Advertisement
ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ, ವಿದ್ಯಾರ್ಥಿಗಳಿಗಿರುವ 75% ಹಾಜರಾತಿಯನ್ನು ವಿದ್ಯಾರ್ಥಿನಿಯರಿಗಾಗಿ 73% ಇಳಿಕೆ ಮಾಡಿದೆ. ಇದಲ್ಲದೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿನಿಯರು 60 ದಿನಗಳ ಗರ್ಭಧಾರಣೆಯ ರಜೆಯನ್ನು ಪಡೆಯಬಹುದು ಎಂದು ಆದೇಶದಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಬೆಂಬಲಿಗರು ಮಾಡುತ್ತಿರೋ ಸಮಾವೇಶಕ್ಕೆ ಹೋಗಲ್ಲ: ಸಂಜಯ್ ಪಾಟೀಲ್
Advertisement
Advertisement
ಸರ್ಕಾರದ ಆದೇಶದ ಬೆನ್ನಲ್ಲೆ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ಕುಸಾಟ್) ನಿಯಮ ಜಾರಿ ಮಾಡಿದೆ. ಈ ಬಗ್ಗೆ ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ರಾಜ್ಯ ಸಚಿವ ಆರ್ ಬಿಂದು (R Bindu) ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ರಾಜ್ಯಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಲ್ಲಿ ಇದೇ ರೀತಿಯ ನೀತಿಯನ್ನು ಜಾರಿಗೆ ತರಲು ರಾಜ್ಯವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ದಂಧೆ – ಕೆಎಂಸಿ ಆಸ್ಪತ್ರೆಯ ವೈದ್ಯರು ವಜಾ, ವಿದ್ಯಾರ್ಥಿಗಳು ಅಮಾನತು
Advertisement
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಬಗ್ಗೆ ಟ್ವೀಟ್ ಮಾಡಿ, ಮುಟ್ಟಿನ ರಜೆ ನಿರ್ಧಾರದ ಮೂಲಕ ಮತ್ತೊಮ್ಮೆ ಕೇರಳವು ರಾಷ್ಟ್ರಕ್ಕೆ ಮಾದರಿಯಾಗಿದೆ ಮತ್ತು ಪ್ರಸ್ತುತ ನಿರ್ಧಾರವು ಲಿಂಗ ನ್ಯಾಯಯುತ ಸಮಾಜವನ್ನು ಸಾಕಾರಗೊಳಿಸುವ ಎಡ ಪ್ರಜಾಸತ್ತಾತ್ಮಕ ರಂಗ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದು ಹೇಳಿದ್ದರು.
ಕಾಕತಾಳೀಯ ಎನ್ನುವಂತೆ ಕಳೆದ ವಾರವಷ್ಟೇ ಸುಪ್ರೀಂಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದ್ದು, ಭಾರತದಾದ್ಯಂತ ಮಹಿಳಾ ವಿದ್ಯಾರ್ಥಿಗಳು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ನೋವು ರಜೆ ಅಥವಾ ಅವಧಿ ರಜೆಯನ್ನು ಪರಿಚಯಿಸಲು ಕರೆ ನೀಡಲಾಯಿತು. ಕೆಲವು ಸಂಸ್ಥೆಗಳು ಮತ್ತು ರಾಜ್ಯ ಸರ್ಕಾರಗಳನ್ನು ಹೊರತುಪಡಿಸಿ, ಸಮಾಜ, ಶಾಸಕಾಂಗ ಮತ್ತು ಇತರ ಮಧ್ಯಸ್ಥಗಾರರಿಂದ ಮುಟ್ಟಿನ ಅವಧಿಗಳನ್ನು ತಿಳಿದೋ ಅಥವಾ ತಿಳಿಯದೆಯೋ ನಿರ್ಲಕ್ಷಿಸಲಾಗಿದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿತ್ತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k