ತಿರುವನಂತಪುರಂ: ಕೇರಳದಲ್ಲಿ ಶೀಘ್ರವೇ ತೃತೀಯಲಿಂಗಿ ಪೊಲೀಸ್ ಅಧಿಕಾರಿಗಳನ್ನು ನೇಮಕಗೊಳಿಸುವ ಸಾಧ್ಯತೆ ಇದೆ. ತೃತೀಯ ಲಿಂಗಿಗಳನ್ನು ರಾಜ್ಯ ಪೊಲೀಸ್ ಪಡೆಗೆ ಸೇರಿಸಿಕೊಳ್ಳಲು ಕೇರಳ ಸರ್ಕಾರ ಚಿಂತನೆ ನಡೆಸಿದೆ.
ಕೇರಳ ಪೊಲೀಸ್ ಅಧಿಕಾರಿಗಳ ಸಂಘ ತೃತೀಯಲಿಂಗಿಗಳನ್ನು ಪೊಲೀಸ್ ಪಡೆಗೆ ಸೇರಿಸುವ ಕ್ರಮವನ್ನು ಬೆಂಬಲಿಸುತ್ತಿರುವುದು ಗಮನಾರ್ಹ. ಮಹಿಳೆಯರನ್ನು ಶೇಕಡಾವಾರು ನೇಮಕಾತಿ ಮಾಡಲಾಗುತ್ತದೆ. ಆದರೆ ಈ ಕಾನೂನು ಸರಿಯಲ್ಲ. ತೃತೀಯಲಿಂಗಿಗಳನ್ನು ಪೊಲೀಸ್ ಪಡೆಗೆ ಸೇರಿಸಿಕೊಳ್ಳುವ ನಿರ್ಧಾರದಿಂದ ಲಿಂಗ ಭೇದ ಕಡಿಮೆಯಾಗಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಆರ್. ಬಿಜು ತಿಳಿಸಿದರು. ಇದನ್ನೂ ಓದಿ: ಒಂದು ವರ್ಷದಲ್ಲಿ 11 ಬಾರಿ ಕೊರೊನಾ ಲಸಿಕೆ ಪಡೆದ ವೃದ್ಧನ ವಿರುದ್ಧ FIR
Advertisement
Advertisement
ತೃತೀಯ ಲಿಂಗಿಗಳನ್ನು ಪೊಲೀಸ್ ಪಡೆಗೆ ಸೇರಿಸುವ ಮೊದಲು ಹಲವು ಅಂಶಗಳನ್ನು ಪರಿಗಣಿಸಬೇಕಿದೆ. ಅವರನ್ನು ಹೇಗೆ ನೇಮಕ ಮಾಡಲಾಗುತ್ತದೆ, ತರಬೇತಿ ಹೇಗೆ ನೀಡಬೇಕು ಹಾಗೂ ಅವರನ್ನು ಯಾವೆಲ್ಲಾ ಕ್ಷೇತ್ರಗಳಲ್ಲಿ ನೇಮಿಸಬಹುದು ಎಂದು ಎಡಿಜಿಪಿಗಳ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು. ಇದನ್ನೂ ಓದಿ: ಬಜೆಟ್ ಅಧಿವೇಶನಕ್ಕೂ ಮುನ್ನ ಪಾರ್ಲಿಮೆಂಟ್‌ನ 402 ಸಿಬ್ಬಂದಿಗೆ ಕೊರೊನಾ ಪಾಸಿಟಿವ್
Advertisement
ತೃತೀಯ ಲಿಂಗಿಗಳನ್ನು ಪೊಲೀಸ್ ಪಡೆಗಳಲ್ಲಿ ನೇಮಿಸಲು ಕಾನೂನು ಹಾಗೂ ಸುವ್ಯವಸ್ಥೆ ಅಡಿಯಲ್ಲಿ ಪರಿಶೀಲಿಸುವ ಸಾಧ್ಯತೆಗಳಿವೆ. ನಂತರ ಎಲ್ಲಾ ಅಭಿಪ್ರಾಯಗಳನ್ನು ಒಟ್ಟುಗೂಡಿಸಿ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸಲ್ಲಿಸಲಾಗುವುದು ಎಂದರು.