ಹಿಜಬ್ ಕುರಿತಾಗಿ ಕುರಾನ್‍ನಲ್ಲಿ ಯಾವುದೇ ಉಲ್ಲೇಖ ಕಾಣುವುದಿಲ್ಲ : ಮೊಹಮ್ಮದ್ ಖಾನ್

Public TV
1 Min Read
mohammad khan

– ಮುಸ್ಲಿಂ ಮಹಿಳೆಯರನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ

ತಿರುವನಂತಪುರಂ: ಕರ್ನಾಟಕದಲ್ಲಿ ಆರಂಭಗೊಂಡ ಹಿಜಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸುದ್ದಿ ಮಾಡುತ್ತಿದೆ. ಮುಸ್ಲಿಂ ಸಮುದಾಯದಲ್ಲಿ ಹಿಜಬ್ ಅನಿವಾರ್ಯವಲ್ಲ. ಹಿಜಬ್ ಕುರಿತಾಗಿ ಕುರಾನ್‍ನಲ್ಲಿ ಯಾವುದೇ ಉಲ್ಲೇಖವನ್ನು ಕಾಣುವುದಿಲ್ಲ ಎಂದು ಕೇರಳ ಗವರ್ನರ್ ಮೊಹಮ್ಮದ್ ಖಾನ್ ಹೇಳಿದ್ದಾರೆ.

SHIVAMOGGA COLLEGE KEASRI HIJAB 2

ಹಿಜಬ್ ವಿವಾದದ ಹಿನ್ನೆಲೆಯಲ್ಲಿ ಮಾತನಾಡಿ, ಹಿಜಬ್ ಇಸ್ಲಾಂನ ಆಚರಣೆಯಲ್ಲಿ ಅಂತರ್ಗತವಾಗಿಲ್ಲ. ಸಿಖ್ಖರಿಗೆ ಟರ್ಬನ್ ರೀತಿಯಲ್ಲಿ ಮುಸ್ಲಿಂ ಮಹಿಳೆಯರಿಗೆ ಹಿಜಬ್ ಅನಿವಾರ್ಯವಲ್ಲ. ಕೆಲವು ಕಾಲೇಜುಗಳು ಮತ್ತು ಶಾಲೆಗಳಲ್ಲಿ ಸಿಖ್ಖರಿಗೆ ಟರ್ಬನ್ ಧರಿಸಲು ಅವಕಾಶವಿದೆ. ಮುಸ್ಲಿಂ ಮಹಿಳೆಯರು ಹಿಜಬ್ ಧರಿಸುವುದನ್ನು ನಿಷೇಧಿಸಿದೆ ಎಂಬ ವಾದವು ಅಸಂಬದ್ಧ ಎಂದು ಹೇಳಿದರು. ಇದನ್ನೂ ಓದಿ: ಹಿಜಬ್ ವಿವಾದ ಕಂಡ ರಾಜ್ಯಗಳು – ಅಲ್ಲಿನ ಹೈಕೋರ್ಟ್‌ಗಳ ತೀರ್ಪುಗಳೇನು? ಇಲ್ಲಿದೆ ಮಾಹಿತಿ

 

 

hijab 3

ಕೆಲವು ಯುವ ಮುಸ್ಲಿಂ ಮಹಿಳೆಯರನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ಮುಸ್ಲಿಂ ಮಹಿಳೆಯರನ್ನು ಅಂಧಕಾರ ಯುಗಕ್ಕೆ ತಳ್ಳಲು ಬಯಸುತ್ತವೆ. ಹೊರಗಿನವರ ಪ್ರಚೋದನೆಗೆ ಒಳಗಾಗಬೇಡಿ, ಓದಿನ ಕಡೆ ಗಮನ ಹರಿಸಿ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದ್ದಾರೆ. ಸಿಖ್ ಧರ್ಮದಲ್ಲಿ, ಪೇಟವನ್ನು ಧರ್ಮಕ್ಕೆ ಅತ್ಯಗತ್ಯವೆಂದು ಪರಿಗಣಿಸಲಾಗಿದೆ ಮತ್ತು ಸ್ವೀಕರಿಸಲಾಗಿದೆ.  ಹಿಜಬ್ ಕುರಿತಾಗಿ ಕುರಾನ್‍ನಲ್ಲಿ ಯಾವುದೇ ಉಲ್ಲೇಖ ಕಾಣುವುದಿಲ್ಲ ಎಂದು ಹೇಳಿದ್ದಾರೆ.

Share This Article