ನವದೆಹಲಿ: ಚಿನ್ನ ಕಳ್ಳಸಾಗಣೆ ಪ್ರಕರಣವನ್ನು (Gold Smuggling Case) ಕರ್ನಾಟಕಕ್ಕೆ (Karnataka) ವರ್ಗಾಯಿಸಲು ಕೋರಿರುವ ಜಾರಿ ನಿರ್ದೇಶನಾಲಯದ (ED) ಮನವಿಗೆ ನಮ್ಮ ವಿರೋಧವಿದೆ. ತನಿಖಾ ಸಂಸ್ಥೆಯ ಮನವಿಯು ಆಧಾರರಹಿತ ಆರೋಪಗಳ ಮೂಲಕ ಸರ್ಕಾರಕ್ಕೆ ಕಳಂಕ ತರುವುದಾಗಿದೆ ಎಂದು ಕೇರಳ (Kerala) ಸರ್ಕಾರ ಸುಪ್ರೀಂ ಕೋರ್ಟ್‌ಗೆ (Supreme Court) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದೆ.
ಕೇರಳ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಪಿಎಂಎಲ್‌ಎ ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸುವಂತೆ ಕೋರಿ ಇಡಿ ಸಲ್ಲಿಸಿರುವ ಅರ್ಜಿಯು ಆಧಾರರಹಿತ ಆರೋಪಗಳನ್ನು ಎತ್ತುವ ಮೂಲಕ ಕೇರಳ ಸರ್ಕಾರಕ್ಕೆ ಕಳಂಕ ತರುವ ದುರುದ್ದೇಶದಿಂದ ಕೂಡಿದೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ನೀವು ಒಬ್ಬರನ್ನ ಮದ್ವೆಯಾಗಿ ಮೂವರನ್ನ ಇಟ್ಟುಕೊಳ್ತೀರಾ – ಹಿಂದೂಗಳ ಟೀಕಿಸಿದ್ದ ಶೌಕತ್ ಅಲಿ ವಿರುದ್ಧ ಕೇಸ್
Advertisement
Advertisement
ಪ್ರಕರಣ ವರ್ಗಾವಣೆಗೆ ಕೋರಿರುವ ಮನವಿಯಲ್ಲಿ ಉಲ್ಲೇಖಿಸಿರುವ ಅಂಶಗಳು ಆಧಾರರಹಿತವಾದದ್ದು, ಊಹಾಪೋಹಗಳಿಂದ ಕೂಡಿದೆ. ಪ್ರಕರಣದ ವಿಚಾರಣೆಯನ್ನು ಕೇರಳದಿಂದ ಕರ್ನಾಟಕಕ್ಕೆ ವರ್ಗಾಯಿಸಲು ವರ್ಗಾವಣೆ ಅರ್ಜಿಯಲ್ಲಿ ಯಾವುದೇ ನೈಜ ಕಾರಣಗಳನ್ನು ಹೇಳಲಾಗಿಲ್ಲ ಎಂದು ಸರ್ಕಾರ ಆರೋಪಿಸಿದೆ.
Advertisement
ರಾಜ್ಯ ಪೊಲೀಸರು ಮತ್ತು ಕೇರಳ ಸರ್ಕಾರವು ಜಾರಿ ನಿರ್ದೇಶನಾಲಯವು ನಡೆಸುತ್ತಿರುವ ತನಿಖೆಯಲ್ಲಿ ಮಧ್ಯಪ್ರವೇಶಿಸುತ್ತಿದೆ ಎಂಬುದು ಸುಳ್ಳು. ಇಡಿ ತನಿಖಾಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಒಂದೇ ಒಂದು ಘಟನೆಯೂ ನಡೆದಿಲ್ಲ ಎಂದು ಅಫಿಡವಿಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: 10ರ ಬಾಲಕಿಯನ್ನು ರೇಪ್ ಮಾಡಿ ಕೊಲೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ
Advertisement
ಎರ್ನಾಕುಲಂನ ಪಿಎಂಎಲ್‌ಎ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ರಾಜ್ಯದ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲು ಜಾರಿ ನಿರ್ದೇಶನಾಲಯವು ಮನವಿ ಸಲ್ಲಿಸಿತ್ತು.