ತಿರುವನಂತಪುರಂ: ತೃತೀಯ ಲಿಂಗಿ ಎಂದು ಮನೆಯಿಂದ ಹೊರಹಾಕಲ್ಪಟ್ಟ ಮಗನನ್ನು ಕೇರಳ ಸರ್ಕಾರ ಕಮರ್ಷಿಯಲ್ ಪೈಲಟ್ ಮಾಡಲು ಮುಂದಾಗಿದೆ.
ಕೇರಳದ 20 ವರ್ಷದ ತೃತೀಯ ಲಿಂಗಿ ಆಡಂ ಹ್ಯಾರಿಯನ್ನು ಆತನ ಪೋಷಕರು ಮನೆಯಿಂದ ಹೊರ ಹಾಕಿದ್ದಾರೆ. ಆಡಂ ಈಗ ದೇಶದ ಮೊದಲ ತೃತೀಯ ಲಿಂಗಿ ಕಮರ್ಷಿಯಲ್ ಪೈಲಟ್ ಆಗಲಿದ್ದಾರೆ. ಅಲ್ಲದೆ ಕೇರಳ ಸರ್ಕಾರ ಆಡಂ ಟ್ರೈನಿಂಗ್ ಖರ್ಚು ನೋಡಿಕೊಳ್ಳುವುದಾಗಿ ತಿಳಿಸಿದೆ.
Advertisement
Advertisement
ಆಡಂ ಬಳಿ ಈಗಾಗಲೇ ಪ್ರೈವೆಟ್ ಪೈಲಟ್ ಲೈಸೆನ್ಸ್ ಇದೆ. ಆದರೆ ಪ್ರಯಾಣಿಕರ ವಿಮಾನವನ್ನು ಚಲಾಯಿಸಲು ಕಮರ್ಷಿಯಲ್ ಲೈಸೆನ್ಸ್ ಬೇಕಾಗಿದೆ. ಕುಟುಂಬಸ್ಥರು ಮನೆಯಿಂದ ಹೊರಹಾಕಿದ ಕಾರಣ ಆಡಂ ಬಳಿ ತರಬೇತಿಯ ಶುಲ್ಕ ಪಾವತಿಸಲು ಹಣವಿರಲಿಲ್ಲ. ಆಡಂನ 3 ವರ್ಷಗಳ ತರಬೇತಿಗಾಗಿ ಕೇರಳ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ 23.34 ಲಕ್ಷ ರೂ. ಬಿಡುಗಡೆ ಮಾಡಿದೆ.
Advertisement
ಆಡಂ ಈಗ ತಿರುವನಂತಪುರಂನ ರಾಜೀವ್ ಗಾಂಧಿ ಏವಿಯೇಷನ್ ಟೆಕ್ನಾಲಜಿ ಅಕಾಡೆಮಿಯಲ್ಲಿ ಯಾವುದೇ ಅಡೆತಡೆಯಿಲ್ಲದೆ ಅಧ್ಯಯನ ಮಾಡಲಿದ್ದಾರೆ. ಇದನ್ನೂ ಓದಿ: ಎಲ್ಲೆಂದರಲ್ಲಿ ಭಿಕ್ಷೆ ಬೇಡದೆ ಇತರರಿಗೆ ಮಾದರಿಯಾದ ತೃತೀಯ ಲಿಂಗಿ
Advertisement
ಈ ಬಗ್ಗೆ ಪ್ರತಿಕ್ರಿಯಿಸಿದ ಆಡಂ ಹ್ಯಾರಿ, ಈ ಸಹಾಯಕ್ಕಾಗಿ ಕೇರಳ ಸರ್ಕಾರಕ್ಕೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ನನ್ನ ಬಾಲ್ಯದ ಕನಸು ನನಸಾಗುತ್ತಿರುವುದ್ದಕ್ಕೆ ನನಗೆ ಖುಷಿಯಾಗುತ್ತಿದೆ ಎಂದು ಹೇಳಿದ್ದಾರೆ.
ಕಮರ್ಷಿಯಲ್ ಲೈಸೆನ್ಸ್ ಬೇಕೆಂದರೆ ಪೈಲಟ್‍ಗೆ 200 ಗಂಟೆಗಳ ಕಾಲ ವಿಮಾನ ಹಾರಾಟ ನಡೆಸಿರುವ ಅನುಭವ ಬೇಕಾಗುತ್ತದೆ. ಆಡಂ ಕೇರಳದ ತ್ರಿಶೂರ್ ಜಿಲ್ಲೆಯವರಾಗಿದ್ದು, ಪ್ರೈವೇಟ್ ಪೈಲಟ್ ಲೈಸೆನ್ಸ್ ಪಡೆದ ದೇಶದ ಮೊದಲ ತೃತೀಯ ಲಿಂಗಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಡಂ 2017ರಲ್ಲಿ ಜೋಹಾನ್ಸ್‍ಬರ್ಗ್‍ನಲ್ಲಿ ತರಬೇತಿ ಪಡೆದ ನಂತರ ಅವರಿಗೆ ಲೈಸೆನ್ಸ್ ನೀಡಲಾಗಿತ್ತು.