ತಿರುವನಂತಪುರಂ: ಶಬರಿಮಲೆ (Sabarimala) ಅಯ್ಯಪ ದೇಗುಲ ತೆರೆಯುತ್ತಿದ್ದಂತೆಯೇ ಪೊಲೀಸರ ಕೈಪಿಡಿಯೊಂದು ವಿವಾದ ಸೃಷ್ಟಿಸಿದೆ.
ಹೌದು, ಶಬರಿಮಲೆ ದೇವಾಲಯದ ಭದ್ರತೆಗೆ ನಿಯೋಜಿಸಲ್ಪಟ್ಟ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ಕೈಪಿಡಿಯನ್ನು ಹಿಂದಕ್ಕೆ ಪಡೆದು ಪರಿಷ್ಕೃತ ಕೈಪಿಡಿಯನ್ನು ನೀಡಲು ಕೇರಳ ಸರ್ಕಾರ (Kerala government) ನಿರ್ಧರಿಸಿದೆ. ಈಗ ಹಿಂತೆಗೆದುಕೊಂಡಿರುವ ಕೈಪಿಡಿಯಲ್ಲಿ 2018ರಲ್ಲಿ ಸುಪ್ರೀಂ ಕೋರ್ಟ್ (Supreme Court) ನೀಡಿದ್ದ ತೀರ್ಪಿನ ಪ್ರಕಾರ ಶಬರಿಮಲೆಗೆ ಎಲ್ಲಾ ಭಕ್ತರಿಗೆ ಪ್ರವೇಶಕ್ಕೆ ಅವಕಾಶವಿದೆ ಎಂದು ಬರೆಯಲಾಗಿದೆ.
Advertisement
Advertisement
2018ರಲ್ಲಿ ಸರ್ವೋಚ್ಚ ನ್ಯಾಯಾಲಯವು 10ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ತೆಗೆದು ಹಾಕಿತ್ತು. ಋತುಮತಿ ಆಗುವ ವಯಸ್ಸಿನ ಮಹಿಳೆಯರು ದೇವಾಲಯ ಪ್ರವೇಶಿಸಬಹುದು ಎಂದು ಹೇಳಿತ್ತು. ಈಗ ಕೂಡ ಇದೇ ಆದೇಶವನ್ನು ಪರೋಕ್ಷವಾಗಿ ಕೈಪಿಡಿಯಲ್ಲಿ ಉಲ್ಲೇಖಿಸಿ, ಎಲ್ಲ ಭಕ್ತರಿಗೂ ದೇವಾಲಯ ಪ್ರವೇಶಕ್ಕೆ ಅನುಮತಿಸಲಾಗಿದೆ ಎಂದು ಬರೆಯಲಾಗಿದೆ. ಇದನ್ನೂ ಓದಿ: ಅಮೆರಿಕ ಹೌಸ್ ಸ್ಪೀಕರ್ ಆಗಿ ಐತಿಹಾಸಿಕ ಅವಧಿ ಕೊನೆಗೊಳಿಸಿದ ನ್ಯಾನ್ಸಿ ಪೆಲೋಸಿ
Advertisement
Advertisement
ಆದರೆ ದೇವಾಲಯವು ತನ್ನ ಪ್ರಾಚೀನ ಸಂಪ್ರದಾಯದ ಪ್ರಕಾರ 10-50 ವಯಸ್ಸಿನ ಮಹಿಳೆಯರಿಗೆ ಪ್ರವೇಶವನ್ನು ನಿರ್ಬಂಧಿಸಿದೆ. ಏಕೆಂದರೆ ಅಯಪ್ಪ ಸ್ವಾಮಿ ಶಾಶ್ವತ ಬ್ರಹ್ಮಚಾರಿ ಎಂದು ಪರಿಗಣಿಸಲಾಗಿದೆ. ಹೀಗಾಗಿ ಕೋರ್ಟ್ ಈ ಆದೇಶ ನೀಡಿದ್ದರೂ ಭಕ್ತರ ಭಾವನೆ ಪರಿಗಣಿಸಿ ಅದರ ಜಾರಿಗೆ ಸರ್ಕಾರ ಮುಂದಾಗಿರಲಿಲ್ಲ. ಈ ನಡುವೆ ಕೈಪಿಡಿಯಲ್ಲಿ ಮತ್ತೆ ಈಗ ತೀರ್ಪಿನ ವಿಚಾರ ಕೆದಕಿರುವುದಕ್ಕೆ ಬಿಜೆಪಿ, ಈ ಕೈಪಿಡಿಯಲ್ಲಿನ ಮಾರ್ಗಸೂಚಿಗಳ ಹಿಂದೆ ದುರುದ್ಧೇಶವಿದೆ. ಕೂಡಲೇ ಇದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿದ ದೇವಸ್ವಂ ಸಚಿವ ಕೆ.ರಾಧಾಕೃಷ್ಣನ್ ಅವರು, ಪ್ರಕರಣ ಸುಪ್ರೀಂ ಕೋರ್ಟ್‍ನಲ್ಲಿದೆ, ಅಲ್ಲೇ ನಿರ್ಧಾರ ತೆಗೆದುಕೊಳ್ಳಬೇಕು, ಸರ್ಕಾರ ಯಾವುದೇ ಹೊಸ ನಿರ್ಧಾರ ಕೈಗೊಂಡಿಲ್ಲ, ಕಳೆದ ವರ್ಷ ಮಾಡಿದ್ದನ್ನೇ ಅನುಸರಿಸುತ್ತೇವೆ. ಇದು ಮೊದಲೇ ಮುದ್ರಣಗೊಂಡ ಹಳೆಯ ಕೈಪಿಡಿ. ಪ್ರಮಾದವಶಾತ್ ವಿತರಣೆ ಆಗಿದೆ. ಕೈಪಿಡಿ ಹಿಂಪಡೆಯಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನವೆಂಬರ್ ಅಂತ್ಯಕ್ಕೆ ಶ್ರೀರಂಗಪಟ್ಟಣ-ಮದ್ದೂರು ಬೈಪಾಸ್ ಓಪನ್