ITI ವಿದ್ಯಾರ್ಥಿನಿಯರಿಗೆ ತಿಂಗಳಲ್ಲಿ 2 ದಿನ ಮುಟ್ಟಿನ ರಜೆ ಘೋಷಿಸಿದ ಕೇರಳ ಸರ್ಕಾರ

Public TV
1 Min Read
Menstrual Leave 1

ತಿರುವನಂತಪುರ: ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ITI) ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು ಎರಡು ದಿನಗಳ ಮುಟ್ಟಿನ ರಜೆ (Menstrual Leave) ನೀಡುವ ಮಹತ್ವದ ನಿರ್ಧಾರವನ್ನು ಕೇರಳ (Kerala) ಸರ್ಕಾರ ಗುರುವಾರ ಪ್ರಕಟಿಸಿದೆ.

ರಾಜ್ಯ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಈ ನಿರ್ಧಾರವನ್ನು ಪ್ರಕಟಿಸಿದರು. ದೈಹಿಕ ಶ್ರಮ ಬೇಡುವ ಅನೇಕ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ. ಇಂದಿನ ಯುಗದಲ್ಲಿ, ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಈ ಅಂಶಗಳನ್ನು ಪರಿಗಣಿಸಿ ಐಟಿಐ ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು ಎರಡು ದಿನಗಳ ಋತುಚಕ್ರದ ರಜೆಯನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಜನವರಿಯಲ್ಲಿ ಸಂಪುಟಕ್ಕೆ ಸರ್ಜರಿ – ಕೆಪಿಸಿಸಿ ಪಟ್ಟ ಬಿಡಲು ಡಿಕೆಶಿ ಷರತ್ತು?

Menstrual Leave

ಕೇರಳದ 100ಕ್ಕೂ ಹೆಚ್ಚು ಐಟಿಐ ಕಾಲೇಜುಗಳಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯಲಿದ್ದಾರೆ. ಪ್ರಯೋಜನ ಪಡೆಯುವ ವಿದ್ಯಾರ್ಥಿಗಳ ನಿಖರ ಸಂಖ್ಯೆಯನ್ನು ಕಂಡುಹಿಡಿಯಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚಿನ್ಮಯ್ ಕೃಷ್ಣ ದಾಸ್‌ರನ್ನು ಅನ್ಯಾಯವಾಗಿ ಬಂಧಿಸಲಾಗಿದೆ – ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಖಂಡನೆ

ಇನ್ನು ಶನಿವಾರ ಎಲ್ಲಾ ಐಟಿಐ ಕಾಲೇಜುಗಳಿಗೆ ರಜೆ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆ ತರಬೇತಿ ಸಮಯವನ್ನು ಸರಿದೂಗಿಸಲು, ಐಟಿಐ ಶಿಫ್ಟ್ಗಳನ್ನು ಮರುಹೊಂದಿಸಲಾಗುತ್ತದೆ. ಮೊದಲ ಪಾಳಿಯು ಬೆಳಿಗ್ಗೆ 7:30ರಿಂದ ಮಧ್ಯಾಹ್ನ 3 ರವರೆಗೆ ಮತ್ತು ಎರಡನೇ ಶಿಫ್ಟ್ ಬೆಳಿಗ್ಗೆ 10 ರಿಂದ ಸಂಜೆ 5:30 ರವರೆಗೆ ಇರುತ್ತದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಹಿಂದಿ ಒಲವಿಗೆ ಕನ್ನಡ ಅಭಿಮಾನಿಗಳ ಆಕ್ರೋಶ

Share This Article