ವರಾಹರೂಪಂ ವಿವಾದ – ಹೊಂಬಾಳೆ ಫಿಲ್ಮ್ಸ್‌ ಅರ್ಜಿಯನ್ನು ವಜಾಗೊಳಿಸಿದ ಕೇರಳ ಹೈಕೋರ್ಟ್‌

Advertisements

ತಿರುವನಂತಪುರಂ: ಕಾಂತಾರ ಚಿತ್ರದ ʼವರಾಹರೂಪಂʼ ಹಾಡಿನ ಬಳಕೆಗೆ ನೀಡಲಾಗಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಬೇಕೆಂದು ಕೋರಿ ಹೊಂಬಾಳೆ ಫಿಲ್ಮ್ಸ್‌ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್‌ ವಜಾಗೊಳಿಸಿದೆ.

Advertisements

ನ್ಯಾಯಮೂರ್ತಿ ಸಿಎಸ್ ಡಯಾಸ್ ಅವರ ಏಕಸದಸ್ಯ ಪೀಠವು, ಅರ್ಜಿದಾರರು ಭಾರತದ ಸಂವಿಧಾನದ 227ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಸಿವಿಲ್ ಪ್ರಕ್ರಿಯಾ ಸಂಹಿತೆಯಲ್ಲಿ ಸೂಚಿಸಲಾದ ಕಾರ್ಯವಿಧಾನವನ್ನು ಸಂಪೂರ್ಣವಾಗಿ ಬೈಪಾಸ್ ಮಾಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

Advertisements

ಕೆಳ ನ್ಯಾಯಾಲಯಗಳು ಹೊರಡಿಸಿದ ಪ್ರತಿಯೊಂದು ಮಧ್ಯಂತರ ಆದೇಶಗಳಿಗೆ ನಾವು ಆದೇಶವನ್ನು ನೀಡಲು ಸಾಧ್ಯವಿಲ್ಲ. ಒಂದು ವೇಳೆ ಆದೇಶ ನೀಡಿದರೆ ಮೂಲ ನ್ಯಾಯವ್ಯಾಪ್ತಿಯ ನ್ಯಾಯಾಲಯಗಳು ಮತ್ತು ಮೇಲ್ಮನವಿ ನ್ಯಾಯಾಲಯಗಳು ನಿಷ್ಕ್ರಿಯವಾಗುತ್ತವೆ. ಈ ನ್ಯಾಯಾಲಯವು ಇಂತಹ ಕೇಸ್‌ಗಳಿಂದ ತುಂಬಿ ತುಳುಕುತ್ತದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.

ಈ ಅರ್ಜಿಯನ್ನು ಈಗ ವಿಚಾರಣೆಗೆ ಪರಿಗಣಿಸಲಾಗದು ಎಂದ ಕೋರ್ಟ್‌ ಕಾನೂನಿನಲ್ಲಿ ಲಭ್ಯವಿರುವ ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತೆ ಹೊಂಬಾಳೆ ಫಿಲ್ಮ್ಸ್‌ನವರಿಗೆ ಸಲಹೆಯನ್ನು ನೀಡಿತು. ಇದನ್ನೂ ಓದಿ: ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಸಿಹಿ ಸುದ್ದಿ

Advertisements

ಏನಿದು ಪ್ರಕರಣ?
ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್’(Thaikkudam Bridge) ಕಾಂತಾರ ಸಿನಿಮದ ʼವರಾಹರೂಪಂʼ ಕೃತಿಚೌರ್ಯದ ಆರೋಪ ಮಾಡಿ ಕೇಸ್‌ ದಾಖಲಿಸಿದೆ. ಅರ್ಜಿಯನ್ನು ಮಾನ್ಯ ಮಾಡಿದ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯ ಮತ್ತು ಕೋಝಿಕ್ಕೋಡ್ ಪ್ರಧಾನ ಜಿಲ್ಲಾ ನ್ಯಾಯಾಲಯ ಕಾಂತಾರ ನಿರ್ಮಾಪಕರಿಗೆ ವರಾಹರೂಪಂ ಹಾಡನ್ನು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಇದನ್ನೂ ಓದಿ: ಗುರೂಜಿ ಮಾಡಿದ ಆ ಒಂದು ತಪ್ಪಿನಿಂದ, ಮನೆ ಮಂದಿಗೆ ಬಿಗ್ ಬಾಸ್ ಗುನ್ನ

ತಡೆಯಾಜ್ಞೆಯ ಆದೇಶದಂತೆ ಹೊಂಬಾಳೆ ಫಿಲ್ಮ್ಸ್ ಮುಂದಿನ ಆದೇಶದವರೆಗೆ ಸಿಂಕ್ರೊನೈಸ್ ಮಾಡಿದ ವರಾಹರೂಪಂ ಗೀತೆಯೊಂದಿಗೆ ಕಾಂತಾರ ಚಿತ್ರದ ಪ್ರದರ್ಶನ, ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ, ಸ್ಟ್ರೀಮಿಂಗ್ ಮಾಡದಂತೆ ನಿರ್ಬಂಧ ವಿಧಿಸಲಾಗಿದೆ. ಈ ಆದೇಶವನ್ನು ಪ್ರಶ್ನಿಸಿ ಹೊಂಬಾಳೆ ಫಿಲ್ಮ್ಸ್‌ ಹೈಕೋರ್ಟ್‌ ಮೊರೆ ಹೋಗಿತ್ತು.

ಸೆಪ್ಟೆಂಬರ್ 30 ರಂದು ಬಿಡುಗಡೆಯಾದ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾದ ಕ್ಲೈಮ್ಯಾಕ್ಸ್‌ನಲ್ಲಿರುವ ವರಾಹರೂಪಂ ಹಾಡು ಭಾರೀ ಜನಪ್ರಿಯತೆ ಪಡೆದಿದೆ. ಈಗಾಗಲೇ ಒಟ್ಟು 400 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿರುವ ಕಾಂತಾರ ಸಿನಿಮಾದ ವರಾಹರೂಪಂ ಹಾಡಿಗೆ ಅಜನೀಶ್‌ ಲೋಕನಾಥ್‌ ಸಂಗೀತ ನೀಡಿದ್ದಾರೆ.

Live Tv

Advertisements
Exit mobile version