ತಿರುವನಂತಪುರ: ತಮಿಳುನಾಡು ಮೇಕೆದಾಟು ಕ್ಯಾತೆ ಬೆನ್ನಲ್ಲೇ ಇತ್ತ ಕೇರಳ ಸರ್ಕಾರ ಬಂಡೀಪುರ (Bandipur) ರಕ್ಷಿತಾರಣ್ಯದಲ್ಲಿ ರಾತ್ರಿ ಸಂಚಾರದ ಮೇಲಿನ ನಿಷೇಧ ತೆರವು ಮಾಡುವಂತೆ ಕೋರಿದೆ. ಈ ಸಂಬಂಧ ಕೇರಳ ಸಿಎಂ ವಿ.ಡಿ.ಸತೀಶನ್ (VD Satheesan) ಅವರು ಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಜೊತೆ ಚರ್ಚೆಗೆ ಮುಂದಾಗಿದ್ದಾರೆ.
ನಿಷೇಧ ಹಿಂಪಡೆಯುವಂತೆ ಈ ಹಿಂದೆ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದರು. ಇದೀಗ ಎರಡೂ ರಾಜ್ಯಗಳಲ್ಲಿ ಹೊಸದಾಗಿ ಕಾಂಗ್ರೆಸ್ ಸರ್ಕಾರಗಳು ಅಧಿಕಾರಕ್ಕೆ ಬಂದಿರುವುದರಿಂದ ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿರುವ ಈ ಸಮಸ್ಯೆಗೆ ಪರಿಹಾರ ಸಿಗಬಹುದು ಎನ್ನುವ ಲೆಕ್ಕಾಚಾರದಲ್ಲಿ ಕೇರಳ ಸರ್ಕಾರವಿದೆ. ಇದನ್ನೂ ಓದಿ: ಪುನರ್ವಸತಿ ಕೇಂದ್ರ ಮಾಲೀಕನ ಕೊಲೆ – ರಿಹ್ಯಾಬ್ ಮಾಲೀಕರಿಗೆ ಶುರುವಾಯ್ತು ಭಯ

ವಿ.ಡಿ.ಸತೀಶನ್ ಈ ಕುರಿತು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಸಮಸ್ಯೆಗೆ ಪ್ರಿಯಾಂಕಾ ಗಾಂಧಿ ಕೂಡ ಬೆಂಬಲ ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ತರಬೇಕು, ಯತ್ನಾಳ್‌ರನ್ನ ವಿಪಕ್ಷ ನಾಯಕನನ್ನಾಗಿ ಮಾಡಬೇಕು: ಕುಮಾರ್ ಬಂಗಾರಪ್ಪ
ಈಗಾಗಲೇ ಕೇರಳದ ಹಿರಿಯ ಸಂಸದ ರಾಘವನ್, ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದು ಸಕರಾತ್ಮಕ ಸ್ಪಂದನೆ ಸಿಕ್ಕಿದೆ. ಮೇಲ್ಸೇತುವೆ ನಿರ್ಮಾಣದಂತಹ ಶಾಶ್ವತ ಪರಿಹಾರಗಳ ಬಗ್ಗೆ ಕೇರಳ ಮತ್ತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ನಾಳೆ NEET-UG ಮರುಪರೀಕ್ಷೆ, ಇಂದು ಮೆಗಾ ಮಾಕ್‌ಡ್ರಿಲ್ – 15,000 ಅರೆಸೈನಿಕ ಸಿಬ್ಬಂದಿ ಪತ್ರಿಕೆ ರವಾನೆ
