ತಿರುವನಂತಪುರಂ: ಕೇರಳದ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ (Padmanabhaswamy Temple) 78 ಗ್ರಾಂ ಚಿನ್ನಾಭರಣಗಳು ಹಾಗೂ ಅಮೂಲ್ಯ ವಜ್ರಾಭರಣ ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ದೇವಸ್ಥಾನದ ಅಮೂಲ್ಯ ಖಜಾನೆಯ ಭದ್ರತೆ ಕುರಿತು ಇದೀಗ ಗಂಭೀರ ಪ್ರಶ್ನೆಗಳು ಕೇಳಿಬಂದಿವೆ.
ಪೊಲೀಸ್ ಮಹಾನಿರ್ದೇಶಕರು ಗೃಹ ಕಾರ್ಯದರ್ಶಿಗೆ ಸಲ್ಲಿಸಿರುವ ವರದಿ ಪ್ರಕಾರ, ದೇವಸ್ಥಾನದ ಸಂಗ್ರಹದಲ್ಲಿದ್ದ ಸುಮಾರು 78 ಗ್ರಾಂ ಚಿನ್ನಾಭರಣಗಳು ಹಾಗೂ ‘ವೈರಂ ನಾಮ’ ಎಂದು ಕರೆಯಲಾಗುವ ವಜ್ರಾಭರಣ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ದೇವಸ್ಥಾನದಲ್ಲಿನ ಪ್ರಸ್ತುತ ಭದ್ರತಾ ವ್ಯವಸ್ಥೆ ಬಗ್ಗೆ ಕೂಡ ವರದಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ. ಇದನ್ನೂ ಓದಿ: ವಿಜಯ್ ದೇವರಕೊಂಡ ಹೃದಯದಲ್ಲಷ್ಟೇ ಅಲ್ಲ, ಕತ್ತಲ್ಲಿಯೂ `R’
ದೇವಸ್ಥಾನದ ದಾಖಲೆಗಳ ಪ್ರಕಾರ, ವೈರಂ ನಾಮ ವಜ್ರಾಭರಣವನ್ನು ಕೆಲವು ತಿಂಗಳುಗಳ ಹಿಂದೆ ದುರಸ್ತಿಗಾಗಿ ತೆಗೆದುಕೊಂಡು ಹೋಗಲಾಗಿತ್ತು. ಆದರೆ ಇದುವರೆಗೆ ಅದನ್ನು ದೇವಸ್ಥಾನಕ್ಕೆ ಮರಳಿ ತಂದಿಲ್ಲ. ಅದೇ ರೀತಿ, ಆರು ತಿಂಗಳ ಹಿಂದೆ ದುರಸ್ತಿಗೆ ಕಳುಹಿಸಿದ್ದ ಚಿನ್ನದ ದೀಪವೂ ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸಿಂಹಗಳಂತೆ ಗರ್ಜಿಸಿದ್ದೀರಿ – ಆರ್‌ಸಿಬಿಗೆ ವಿಜಯ್ ಮಲ್ಯ ಸ್ಪೆಷಲ್ ವಿಶ್
ಶತಮಾನಗಳ ಇತಿಹಾಸ ಹೊಂದಿರುವ ದೇವಸ್ಥಾನದ ಅಮೂಲ್ಯ ವಸ್ತುಗಳು ಕಾಣೆಯಾಗಿರುವುದು ಭಕ್ತರು ಹಾಗೂ ಅಧಿಕಾರಿಗಳಲ್ಲಿ ಆತಂಕ ಮೂಡಿಸಿದೆ. ದೇವಸ್ಥಾನದ ಖಜಾನೆ ನಿರ್ವಹಣೆ ಹಾಗೂ ಮೇಲ್ವಿಚಾರಣೆ ಬಗ್ಗೆ ಈಗ ಪ್ರಶ್ನೆಗಳು ಎದ್ದಿವೆ. ಇದನ್ನೂ ಓದಿ: ಕರ್ತವ್ಯನಿರತ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವು
ದೇವಸ್ಥಾನದ ಭದ್ರತೆ ಬಲಪಡಿಸಲು ಪೊಲೀಸ್ ಮಹಾನಿರ್ದೇಶಕರು ಹಲವು ಶಿಫಾರಸುಗಳನ್ನು ನೀಡಿದ್ದಾರೆ. ದೇವಸ್ಥಾನದ ಚಿನ್ನ ಹಾಗೂ ಬೆಳ್ಳಿ ವಸ್ತುಗಳನ್ನು ಸುರಕ್ಷಿತ ಭೂಗತ ಕೊಠಡಿಗಳಿಗೆ ಸ್ಥಳಾಂತರಿಸುವುದು, ಭಕ್ತರ ಕಾಣಿಕೆಗಳನ್ನು ವಿಶೇಷ ಲಾಕರ್‌ಗಳಲ್ಲಿ ಇಡುವುದು ಹಾಗೂ ದೇವಸ್ಥಾನದ ಎಲ್ಲಾ ಪ್ರವೇಶ ದ್ವಾರಗಳಲ್ಲಿ ಕಡ್ಡಾಯ ಭದ್ರತಾ ತಪಾಸಣೆ ನಡೆಸುವಂತೆ ಸಲಹೆ ನೀಡಲಾಗಿದೆ. ಇದನ್ನೂ ಓದಿ: ನಿಕೇತ್ ಮೌರ್ಯ, ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್ ನೀಡಿದ ಡಿಕೆಶಿ
ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನವು ವಿಷ್ಣುವಿಗೆ ಸಮರ್ಪಿತವಾಗಿರುವ ಪ್ರಸಿದ್ಧ ಹಿಂದೂ ದೇವಾಲಯವಾಗಿದೆ. ಈ ದೇವಸ್ಥಾನ ಶ್ರೀ ವೈಷ್ಣವ ಸಂಪ್ರದಾಯದ 108 ದಿವ್ಯ ದೇಶಗಳು(108 ದಿವ್ಯ ದೇಶಗಳು ಎಂದರೆ ಶ್ರೀ ವೈಷ್ಣವ ಸಂಪ್ರದಾಯದಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲಾದ 108 ವಿಷ್ಣು ದೇವಾಲಯಗಳು) ಪಟ್ಟಿಯಲ್ಲಿ ಬರುತ್ತದೆ. ಇದನ್ನೂ ಓದಿ: ನಾಳೆ ಬೆಳಗ್ಗೆ 11:30ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
