ತಿರುವನಂತಪುರಂ: ಎರಡು ಡೋಸ್ ಕೊವೀಡ್ ಲಸಿಕೆ ಪಡೆದರೂ ಮತ್ತೆ ವ್ಯಾಕ್ಸಿನ್ ಬೇಕೆಂದು ಕೇರಳದ ವ್ಯಕ್ತಿಯೊಬ್ಬರು ಕೋರ್ಟ್ ಮೊರೆ ಹೋಗಿದ್ದಾರೆ.
ಕೇರಳದಲ್ಲಿ ಕೋವ್ಯಾಕ್ಸಿನ್ 2 ಡೋಸ್ ಪಡೆದ ವ್ಯಕ್ತಿಯೋರ್ವ ತನಗೆ ಮತ್ತೊಮ್ಮೆ ಕೋವಿಶೀಲ್ಡ್ ಲಸಿಕೆ ಹಾಕಬೇಕೆಂದು ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಕೇರಳದ 50 ವರ್ಷದ ಗಿರಿಕುಮಾರ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.
ನನಗೆ ಕೊವ್ಯಾಕ್ಸಿನ್ ಲಸಿಕೆಯಿಂದ ಆರೋಗ್ಯ ಸುಧಾರಿಸಿಲ್ಲ. ಸೌದಿ ಅರೇಬಿಯಾದಲ್ಲಿ ಕೆಲಸದಲ್ಲಿರುವ ನಾನು ಆಗಸ್ಟ್ 30ರೊಳಗೆ ಅಲ್ಲಿಗೆ ವಾಪಸ್ ಹೋಗಬೇಕು. ಇಲ್ಲವಾದರೆ ನನ್ನ ಉದ್ಯೋಗ ಕಳೆದುಕೊಳ್ಳಬೇಕಾಗುತ್ತದೆ. ಸೌದಿ ಅರೇಬಿಯಾದಲ್ಲಿ ಕೋವ್ಯಾಕ್ಸಿನ್ ಲಸಿಕೆಗೆ ಮಾನ್ಯತೆ ಇಲ್ಲದ ಕಾರಣ ನನಗೆ ಕೋವಿಶೀಲ್ಡ್ ಲಸಿಕೆ ಹಾಕಿ ಎಂದು ಕೋರ್ಟ್ ನಲ್ಲಿ ಅವರು ಮನವಿ ಮಾಡಿದ್ದಾರೆ.
ಯಾವುದೇ ಕೊರೊನಾ ಲಸಿಕೆ ಹಾಕಿಸಿಕೊಳ್ಳುವಾಗಲೂ ಎರಡನೇ ಡೋಸ್ ಕೂಡ ಅದೇ ಲಸಿಕೆಯನ್ನು ಹಾಕಿಸಿಕೊಳ್ಳಬೇಕೆಂಬ ನಿಯಮವಿದೆ. ಒಮ್ಮೆ ಕೋವಿಶೀಲ್ಡ್ ಮತ್ತೊಮ್ಮೆ ಕೋವ್ಯಾಕ್ಸಿನ್ ಹಾಕಿಸಿಕೊಳ್ಳಲು ಅವಕಾಶವಿಲ್ಲ. ಕೇರಳದಲ್ಲಿ ಕೋವ್ಯಾಕ್ಸಿನ್ 2 ಡೋಸ್ ಪಡೆದ ವ್ಯಕ್ತಿಯೋರ್ವ ತನಗೆ ಮತ್ತೊಮ್ಮೆ ಕೋವಿಶೀಲ್ಡ್ ಲಸಿಕೆ ಹಾಕಬೇಕೆಂದು ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಆದರೆ ಈಗಾಗಲೇ ಎರಡು ಡೋಸ್ ಕೊರೊನಾ ಲಸಿಕೆ ಹಾಕಿಸಿಕೊಂಡವರಿಗೆ ಮತ್ತೆ ಲಸಿಕೆ ಹಾಕಿಸಿಕೊಳ್ಳಲು ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ಖಚಿತಪಡಿಸಿದೆ.
ಎರಡು ಡೋಸ್ ಕೊರೊನಾ ಲಸಿಕೆ ಹಾಕಿಸಿಕೊಂಡರೂ ಆ ವ್ಯಕ್ತಿಗೆ ಆರೋಗ್ಯದ ಸಮಸ್ಯೆಗಳು ಉಂಟಾಗಿತ್ತು. ಹೀಗಾಗಿ ಆತ ಕೋವ್ಯಾಕ್ಸಿನ್ ಲಸಿಕೆಯಿಂದ ಏನೂ ಪ್ರಯೋಜನವಾಗಿಲ್ಲ ಎಂದು ಮತ್ತೆ ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ಹಾಕಬೇಕೆಂದು ಒತ್ತಾಯಿಸಿ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾನೆ. ಆದರೆ ಓರ್ವ ವ್ಯಕ್ತಿಗೆ ಎರಡು ಡೋಸ್‍ಗಿಂತ ಹೆಚ್ಚು ಕೊರೊನಾ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿರುವುದರಿಂದ ಆತನಿಗೆ ನಿರಾಸೆಯಾಗಿದೆ. ಇದನ್ನೂ ಓದಿ: ಭಾರತದಲ್ಲಿ ಹಿಂದೂ ಟೆರರ್ ಇದೆ ಅಂದವರಿಗೆ ಪ್ರಣಿತಾ ತಿರುಗೇಟು
ಎರಡಕ್ಕಿಂತ ಹೆಚ್ಚು ಡೋಸ್ ಕೊರೊನಾ ಲಸಿಕೆಯನ್ನು ಪಡೆಯುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಮತ್ತೊಮ್ಮೆ ಕೊರೊನಾ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇರಳದ 50 ವರ್ಷದ ಗಿರಿಕುಮಾರ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದವರು. ನನಗೆ ಕೋವ್ಯಾಕ್ಸಿನ್ ಲಸಿಕೆಯಿಂದ ಆರೋಗ್ಯ ಸುಧಾರಿಸಿಲ್ಲ ಎಂದು ಮನವಿ ಮಾಡಿದ್ದಾರೆ. ಕಳೆದ ಜನವರಿಯಲ್ಲಿ ಸೌದಿ ಅರೇಬಿಯಾದಿಂದ ಕೇರಳಕ್ಕೆ ಬಂದಿದ್ದ ಗಿರಿ ಕುಮಾರ್ ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದರು. ಆದರೆ ಸೌದಿಯಲ್ಲಿ ಕೋವ್ಯಾಕ್ಸಿನ್‍ಗೆ ಮಾನ್ಯತೆ ಇಲ್ಲ ಎಂದು ಗೊತ್ತಾದ ಬಳಿಕ ಚಿಂತಿತರಾದ ಅವರು ಕೋವಿಶೀಲ್ಡ್ ಹಾಕಿಸಿಕೊಳ್ಳಲು ಮುಂದಾಗಿದ್ದರು.