ಮುಂಬೈ: ಕೋಝಿಕ್ಕೋಡ್‍ನಿಂದ ಬಹ್ರೇನ್‍ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿದ್ದ (Air India Express Flight) ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಮುಂಬೈ (Mumbai) ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳ (Kerala) ಮೂಲದ ಅಬ್ದುಲ್ ಮುಸಾವಿರ್ ನಡುಕಂಡಿ (25) ಎಂದು ಗುರುತಿಸಲಾಗಿದೆ. ಆರೋಪಿ ಕೋಝಿಕ್ಕೋಡ್‍ನಿಂದ ವಿಮಾನ ಟೇಕಾಫ್ ಆಗುವಾಗ ತಕ್ಷಣವೇ ವಿಮಾನದ ಹಿಂಭಾಗಕ್ಕೆ ತೆರಳಿ ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಐಎಎಸ್ ಅಧಿಕಾರಿಗಳ ಪುತ್ರಿ ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ
ಭದ್ರತಾ ದೃಷ್ಟಿಯಿಂದ ಪೈಲಟ್ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (CSMIA) ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 336 (ಜೀವಕ್ಕೆ ಹಾನಿ ಉಂಟುಮಾಡುವ ಬೆದರಿಕೆ), 504 (ಶಾಂತಿ ಭಂಗಕ್ಕೆ ಯತ್ನ), 506 (ಬೆದರಿಕೆ) ಮತ್ತು 323 (ಹಲ್ಲೆ) ಮತ್ತು ವಿಮಾನದ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಅನ್ಯಕೋಮಿನ ಯುವತಿಯನ್ನ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ