ಚಿಕ್ಕಮಗಳೂರು: ಕೇರಳದಲ್ಲಿ ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಮಹಿಳೆ ಸೇರಿ ಇಬ್ಬರು ನಕ್ಸಲರು ಮೃತಪಟ್ಟಿದ್ದಾರೆ.
ಮೃತಪಟ್ಟವನ್ನು ಶ್ರೀಮತಿ ಮತ್ತು ಸುರೇಶ್ ಅಲಿಯಾಸ್ ಮಹೇಶ್ ಎಂದು ಗುರುತಿಸಲಾಗಿದೆ. ಸೋಮವಾರ ಕೇರಳದ ಪಾಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರ ಗುಂಡಿಗೆ ಮೂವರು ಮಾವೋವಾದಿಗಳು ಹತರಾಗಿದ್ದರು. ಈ ಮೂವರಲ್ಲಿ ಶ್ರೀಮತಿ ಮತ್ತು ಸುರೇಶ್ ಕೂಡ ಇದ್ದರು ಎಂಬ ಮಾಹಿತಿ ಸಿಕ್ಕಿದೆ.
Advertisement
Advertisement
ಶೃಂಗೇರಿ ತಾಲೂಕಿನ ಬೆಳಗೋಡು ಕೂಡಿಗೆ ಗ್ರಾಮದವಳಾದ ಶ್ರೀಮತಿ 2008ರಲ್ಲಿ ನಕ್ಸಲ್ ಚಟುವಟಿಕೆಗೆ ಸೇರಿದಳು. ಈಕೆಯ ವಿರುದ್ಧ ಸುಮಾರು 10 ರಿಂದ 12 ಪ್ರಕರಣಗಳಿವೆ. ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದವನಾದ ಸುರೇಶ್ ಕೂಡ 2004ರಲ್ಲೇ ನಕ್ಸಲ್ ಗುಂಪಿಗೆ ಸೇರಿಕೊಂಡಿದ್ದು, ಇತನ ವಿರುದ್ಧ 40 ಪ್ರಕರಣಗಳಿವೆ. ಈಗ ಇಬ್ಬರೂ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ.
Advertisement
ಸೋಮವಾರ ಬೆಳಗ್ಗೆ ಪಾಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರ ಗುಂಡಿಗೆ ಮೂವರು ಮಾವೋವಾದಿಗಳು ಹತರಾಗಿದ್ದರು. ಕೇರಳದ ಥಂಡರ್ ಬೋಲ್ಟ್ ಕಮಾಂಡೋ ತಂಡವು ಈ ಕಾರ್ಯಚರಣೆ ನಡೆಸಿದ್ದು, ಯಶಸ್ವಿಯಾಗಿ ಮೂವರನ್ನು ಹತ್ಯೆ ಮಾಡಿತ್ತು.
Advertisement
ಇತ್ತೀಚಿಗೆ ಮಾವೋವಾದಿಗಳ ಉಪಟಳ ಕೇರಳದಲ್ಲಿ ಜಾಸ್ತಿಯಾಗಿದ್ದು, ಇವರನ್ನು ಸದೆಬಡಿಯಲು ಕೇರಳ ಪೊಲೀಸರು ಕಾದು ಕುಳಿತಿದ್ದರು. ಅದರಂತೆ ಸೋಮವಾರ ಬೆಳಗ್ಗೆ ಮಾವೋವಾದಿಗಳು ಪಾಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದರು. ಈ ವೇಳೆ ಪಾಲಕ್ಕಾಡ್ ಅರಣ್ಯದ ಮಂಚಕತ್ತಿ ಎಂಬ ಪ್ರದೇಶದಲ್ಲಿ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿಯಾಗಿ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಕರ್ನಾಟಕ ತಮಿಳುನಾಡು ಮತ್ತು ಕೇರಳದಲ್ಲಿ ಮಾವೋವಾದಿಗಳು ತಮ್ಮ ಪ್ರಾಬಲ್ಯವನ್ನು ಸ್ಥಾಪಿಸಲು ಪ್ರಯತ್ನ ಪಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದ್ದರಿಂದ ಕೆಲ ಸೂಕ್ಷ್ಮ ಪ್ರದೇಶದ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು. ಆದರೆ ಕೇರಳದಲ್ಲಿ ಬಿಟ್ಟರೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮಾವೋವಾದಿಗಳು ಕಾಣಿಸಿಕೊಂಡಿರಲಿಲ್ಲ. 2014 ರಿಂದ 2017ರವರೆಗೆ ಕೇರಳದಲ್ಲಿ ಮಾವೋವಾದಿಗಳ ವಿರುದ್ಧ 23 ವಿವಿಧ ಕೇಸ್‍ಗಳು ದಾಖಲಾಗಿದ್ದವು.