ತಿರುವನಂತಪುರಂ: ತಮ್ಮ ಗುಂಪಿನ ಕೆಲ ನಕ್ಸಲರನ್ನು ಕೊಂದಿದ್ದಕ್ಕೆ ಕೇರಳದ ಸಿಎಂ ಪಿಣರಾಯಿ ವಿಜಯನ್‍ಗೆ ಮಾವೋವಾದಿಗಳು ಜೀವ ಬೆದರಿಕೆ ಪತ್ರ ರವಾನಿಸಿದ್ದಾರೆ.
ಕೆಳೆದ ಅಕ್ಟೋಬರ್ ತಿಂಗಳಲ್ಲಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಅಗಾಲಿ ಕಾಡುಗಳಲ್ಲಿ ಮಾವೋವಾದಿಗಳು ಮತ್ತು ಕೇರಳ ವಿಶೇಷ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳು ಮೃತಪಟ್ಟಿದ್ದರು. ಈ ಸಾವಿನ ಪ್ರತೀಕಾರವನ್ನು ತೀರಿಸಿಕೊಳ್ಳಲು ಮುಖ್ಯಮಂತ್ರಿ ಅವರನ್ನು ಕೊಲ್ಲುತ್ತೇವೆ ಎಂದು ಪತ್ರ ಬರೆಯಲಾಗಿದೆ.
Advertisement
Advertisement
ಈ ಪತ್ರವನ್ನು ಕೇರಳದ ವಡಕಾರ ಪೊಲೀಸ್ ಠಾಣೆಗೆ ಕಳುಹಿಸಿದ್ದು, ಹತ್ಯೆಗೀಡಾದ ಮಾವೋವಾದಿಗಳಿಗೆ ಬಂದ ಪರಿಸ್ಥಿತಿಯನ್ನೇ ಸಿಎಂ ವಿಜಯನ್ ಮುಂದೆ ಎದುರಿಸಬೇಕಾಗುತ್ತದೆ ಎಂದು ನಕ್ಸಲರ ತಂಡದ ಕಬಿನಿಡಾಲ್ ಕ್ರಿಯಾ ಸಮಿತಿಯ ಉಪಾಧ್ಯಕ್ಷ ಬೇಡರ್ ಮೂಸಾ ಸಹಿ ಮಾಡಿದ ಪತ್ರದಲ್ಲಿ ತಿಳಿಸಲಾಗಿದೆ. ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳನ್ನು ಒಳಗೊಂಡಂತೆ ಕಳೆದ ತಿಂಗಳು ದಟ್ಟ ಕಾಡುಗಳಲ್ಲಿ ತಮ್ಮ ನಾಲ್ವರು ಸ್ನೇಹಿತರು ಸಾವನ್ನಪ್ಪಿದ ನಂತರ ಮಾವೋವಾದಿಗಳು ವಿಜಯನ್ ಸರ್ಕಾರದಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
Advertisement
2016 ರಲ್ಲಿ ಪಿಣರಾಯಿ ವಿಜಯನ್ ಕೇರಳ ಸಿಎಂ ಆದ ನಂತರ ಕೇರಳ ರಾಜ್ಯದಲ್ಲಿ ಏಳು ಮಾವೋವಾದಿಗಳನ್ನು ತಟಸ್ಥಗೊಳಿಸಲಾಗಿದೆ. ಆದ್ದರಿಂದ ಮಲಯಾಳಂ ಭಾಷೆಯಲ್ಲಿ ಬರೆದಿರುವ ಪತ್ರದಲ್ಲಿ ಕೇರಳ ಸಿಎಂ ತಮ್ಮ ಏಳು ಮಂದಿ ಸ್ನೇಹಿತರ ಹತ್ಯೆಗೆ ಸೂಕ್ತ ಶಿಕ್ಷೆ ಅನುಭವಿಸಬೇಕಾಗುತ್ತದೆ. ಇವರ ಜೊತೆಗೆ ಜನರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೆರಂಬರ ಸಬ್ ಇನ್ಸ್‍ಪೆಕ್ಟರ್ ಹರೀಶ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.
Advertisement
ಅಕ್ಟೋಬರ್ 28 ರಂದು ಬೆಳಗ್ಗೆ ಪಾಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರ ಗುಂಡಿಗೆ ನಾಲ್ವರು ಮಾವೋವಾದಿಗಳು ಹತರಾಗಿದ್ದರು. ಕೇರಳದ ಥಂಡರ್ ಬೋಲ್ಟ್ ಕಮಾಂಡೋ ತಂಡವು ಈ ಕಾರ್ಯಚರಣೆ ನಡೆಸಿದ್ದು, ಯಶಸ್ವಿಯಾಗಿ ನಾಲ್ವರನ್ನು ಹತ್ಯೆ ಮಾಡಿತ್ತು.
ಇತ್ತೀಚಿಗೆ ಮಾವೋವಾದಿಗಳ ಉಪಟಳ ಕೇರಳದಲ್ಲಿ ಜಾಸ್ತಿಯಾಗಿದ್ದು, ಇವರನ್ನು ಸದೆಬಡಿಯಲು ಕೇರಳ ಪೊಲೀಸರು ಕಾದು ಕುಳಿತಿದ್ದರು. ಅದರಂತೆ ಸೋಮವಾರ ಬೆಳಗ್ಗೆ ಮಾವೋವಾದಿಗಳು ಪಾಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದರು. ಈ ವೇಳೆ ಪಾಲಕ್ಕಾಡ್ ಅರಣ್ಯದ ಮಂಚಕತ್ತಿ ಎಂಬ ಪ್ರದೇಶದಲ್ಲಿ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿಯಾಗಿ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಕರ್ನಾಟಕ ತಮಿಳುನಾಡು ಮತ್ತು ಕೇರಳದಲ್ಲಿ ಮಾವೋವಾದಿಗಳು ತಮ್ಮ ಪ್ರಾಬಲ್ಯವನ್ನು ಸ್ಥಾಪಿಸಲು ಪ್ರಯತ್ನ ಪಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದ್ದರಿಂದ ಕೆಲ ಸೂಕ್ಷ್ಮ ಪ್ರದೇಶದ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು. ಆದರೆ ಕೇರಳದಲ್ಲಿ ಬಿಟ್ಟರೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮಾವೋವಾದಿಗಳು ಕಾಣಿಸಿಕೊಂಡಿರಲಿಲ್ಲ. 2014 ರಿಂದ 2017ರವರೆಗೆ ಕೇರಳದಲ್ಲಿ ಮಾವೋವಾದಿಗಳ ವಿರುದ್ಧ 23 ವಿವಿಧ ಕೇಸ್‍ಗಳು ದಾಖಲಾಗಿತ್ತು.