ತಿರುವನಂತಪುರ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET)ಯ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಿದ ಮಹಿಳೆಯರ ಒಳ ಉಡುಪುಗಳನ್ನು ತೆಗೆಯುವಂತೆ ಸಿಬ್ಬಂದಿ ಒತ್ತಾಯಿಸಿದ ಘಟನೆಗೆ ಸಂಬಂಧಿಸಿ ಇಂದು ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಲ್ಲಂ ಜಿಲ್ಲೆಯ ಆಯುರ್‌ನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ನಡೆದ ನೀಟ್ ಪರೀಕ್ಷೆಗೆ ಹಾಜರಾಗುವ ವೇಳೆ ಅಲ್ಲಿರುವ ಅಧಿಕಾರಿಗಳ ತಂಡವು ಪರೀಕ್ಷ ಬರೆಯುವಾಗ ಒಳ ಉಡುಪನ್ನು ತೆಗೆದಿಟ್ಟು ಪರೀಕ್ಷೆಯನ್ನು ಬರೆಯಲು ತಿಳಿಸಿದ್ದಾರೆ.
Advertisement
Advertisement
ಇದರಿಂದಾಗಿ ಪರೀಕ್ಷೆಗೆ ಹಾಜರಾದ ಯುವತಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ, ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ಮಹಿಳಾ ಅಧಿಕಾರಿಗಳ ತಂಡ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ತನ್ನ ಪ್ರಾಣ ಅರ್ಪಿಸಲು ಸಿದ್ಧವೆಂದು ಭಯೋತ್ಪಾದನಾ ಗುಂಪಿಗೆ ಬೆಂಬಲ ಸೂಚಿಸಿದ್ದ ವಿದ್ಯಾರ್ಥಿ ಅರೆಸ್ಟ್
Advertisement
Advertisement
ಚಾತಮಂಗಲಂನಲ್ಲಿರುವ ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು ನನ್ನ ಮಗಳು ಸೇರಿದಂತೆ ಮಹಿಳಾ ನೀಟ್ ಆಕಾಂಕ್ಷಿಗಳು ತಮ್ಮ ಒಳಉಡುಪುಗಳನ್ನು ತೆಗೆಯುವಂತೆ ಸಿಬ್ಬಂದಿ ಹೇಳಿದ್ದಾರೆ. ಇದರಿಂದ ಪರೀಕ್ಷೆ ಬರೆಯಲು ಮಹಿಳಾ ಆಕಾಂಕ್ಷಿಗಳಿಗೆ ಮಾನಸಿಕವಾಗಿ ಹಿಂಸೆಯಾಗಿದೆ ಎಂದು 17 ವರ್ಷದ ಯುವತಿಯ ತಂದೆ ನಿನ್ನೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಮಾನವ ಹಕ್ಕುಗಳ ಆಯೋಗವು ಕೊಲ್ಲಂ ಗ್ರಾಮಾಂತರ ಎಸ್‍ಪಿಗೆ ಈ ಬಗ್ಗೆ ತನಿಖೆ ನಡೆಸಿ 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಇದನ್ನೂ ಓದಿ: examನೀಟ್ ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ಬ್ರಾಗಳನ್ನು ತೆಗೆದುಹಾಕಲು ಒತ್ತಾಯ – ತನಿಖೆಗೆ ಆದೇಶ
ಈ ಕುರಿತು ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್ ಬಿಂದು ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು, ಕೊಲ್ಲಂ ಜಿಲ್ಲೆಯ NEET ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮೊದಲು ವಿದ್ಯಾರ್ಥಿನಿಯರ ಒಳಉಡುಪುಗಳನ್ನು ತೆಗೆಯುವಂತೆ ಒತ್ತಾಯಿಸಿದ ಏಜೆನ್ಸಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.