ತಿರುವನಂತಪುರಂ: ಕೇರಳದಲ್ಲಿ (Kerala) ಮತ್ತೊಮ್ಮೆ ನಿಫಾ ವೈರಸ್ (Nipah Virus) ಆತಂಕ ಸೃಷ್ಟಿಸಿದ್ದು, ಕೋಯಿಕ್ಕೋಡ್ (Kozhikode) ಜಿಲ್ಲೆಯ 43 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿರುವುದು ಪ್ರಾಥಮಿಕ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಕೇರಳ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದ್ದು, ಅಂತಿಮ ದೃಢೀಕರಣಕ್ಕಾಗಿ ರೋಗಿಯ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಶೀಘ್ರದಲ್ಲೇ ಅಂತಿಮ ವರದಿ ಲಭ್ಯವಾಗುವ ನಿರೀಕ್ಷೆಯಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದನ್ನೂ ಓದಿ: 102 GW ಸಾಮರ್ಥ್ಯದ ʼತೇಲುವ ಸೌರ ಯೋಜನೆʼ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಕಟ
ಫೆರೋಕ್ ಮೂಲದ ಉದ್ಯಮಿಯಾಗಿರುವ ಈ ವ್ಯಕ್ತಿ ಮೊದಲಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಸದ್ಯ ವೆಂಟಿಲೇಟರ್ ಸಹಾಯದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಎಥೆನಾಲ್ ಮಿಶ್ರಿತ ಪೆಟ್ರೋಲ್ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ
ಸೋಂಕು ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ರೋಗಿಯ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಪ್ರತ್ಯೇಕಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ತ್ವರಿತಗತಿಯಲ್ಲಿ ಆರಂಭಿಸಿದೆ. ರೋಗಿಯ ಸಂಪರ್ಕದಲ್ಲಿದ್ದ ಆರೋಗ್ಯ ಸಿಬ್ಬಂದಿ ಹಾಗೂ ಇತರರಿಗೆ ಕ್ವಾರೆಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: TMC Crisis | ರಾಜ್ಯಸಭಾ ಸದಸ್ಯತ್ವಕ್ಕೆ ಮತ್ತೊಬ್ಬ ಟಿಎಂಸಿ ಸಂಸದ ರಾಜೀನಾಮೆ
ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಕೆ.ಮುರಳೀಧರನ್, ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳು ಹಾಗೂ ಚಿಕಿತ್ಸಾ ಸೌಲಭ್ಯಗಳನ್ನು ಸಜ್ಜುಗೊಳಿಸಲಾಗಿದೆ. ಪರಿಸ್ಥಿತಿಯನ್ನು ಆರೋಗ್ಯ ಇಲಾಖೆ ನಿಕಟವಾಗಿ ಗಮನಿಸುತ್ತಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.12 ಕೋಟಿ ಮೌಲ್ಯದ ಚಿನ್ನ, ಮಾದಕ ವಸ್ತು ಜಪ್ತಿ
ಕೇರಳದಲ್ಲಿ ಈ ಹಿಂದೆ ಹಲವು ಬಾರಿ ನಿಫಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೆಚ್ಚಿನ ಎಚ್ಚರಿಕೆ ವಹಿಸಿದ್ದು, ಸೋಂಕು ನಿಯಂತ್ರಣಕ್ಕೆ ವಿಶೇಷ ತಂಡಗಳನ್ನು ನಿಯೋಜಿಸಿದೆ. ಇದನ್ನೂ ಓದಿ: ಮಾವನ ಜೊತೆ ಜೇನು ಮುರಿಯಲು ಹೋಗಿದ್ದ ಬಾಲಕ ಶವವಾಗಿ ಪತ್ತೆ – ಕೊಲೆ ಶಂಕೆ
