ತಿರುವನಂತಪುರಂ: ರೈಲಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಪೊಲೀಸ್ ಅಧಿಕಾರಿಯೊಬ್ಬರು ಮನಬಂದಂತೆ ಥಳಿಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೈರಲ್ ವೀಡಿಯೋ ನೋಡಿದ ನೆಟ್ಟಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಯ ಅಮಾನತಿಗೆ ಕಾರಣವಾಗಿದೆ. ಈ ವೀಡಿಯೋ 20 ಸೆಕೆಂಡ್‍ಗಳಿದ್ದು, ಇದರಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಪ್ರಯಾಣಿಕನೊಬ್ಬರಿಗೆ ಕಾಲಿನಲ್ಲಿ ಒದೆಯುತ್ತಿದ್ದಾರೆ. ಪ್ರಯಾಣಿಕನ ಕೈಯನ್ನು ಕಟ್ಟಿ ಹಾಕಲಾಗಿದೆ. ಆತನ ಅಸಹಾಯಕ ಸ್ಥಿತಿಯಲ್ಲಿ ಕುಳಿತಿದ್ದಾನೆ. ಆತನಿಗೆ ಆ ಪೊಲೀಸ್ ಅಧಿಕಾರಿ ಮನಬಂದಂತೆ ಥಳಿಸುತ್ತಿದ್ದಾರೆ.
Advertisement
Advertisement
ಮಾವಲಿ ಎಕ್ಸ್‍ಪ್ರೆಸ್‍ನಲ್ಲಿ ಈ ಘಟನೆ ನಡೆದಿದೆ. ಟಿಕೆಟ್ ಪರಿಶೀಲಿಸಲು ಪೊಲೀಸರು ರೈಲನ್ನು ಹತ್ತುತ್ತಾರೆ. ಆಗ ವ್ಯಕ್ತಿಯು ಟಿಕೆಟ್‍ನ್ನು ತೋರಿಸಲು ಸಾಧ್ಯವಾಗದೇ ಪರಿತಪಿಸುತ್ತಾನೆ. ಆತ ಕುಡಿದಿದ್ದಾನೆ ಎಂದುಕೊಂಡ ಪೊಲೀಸರು ಆತನಿಗೆ ಹೊಡೆದಿದ್ದಾರೆ. ಇದನ್ನೂ ಓದಿ: ಸೊಸೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ಮಾವ ಎಸ್ಕೇಪ್
Advertisement
Kerala is the most literate state in India , which is very much higher than other states???? . But this video seems not looking good for other people????, how a policeman of kerala kicking a passenger who travelling in a train without ticket ???? pic.twitter.com/sk5cewu3Xx
— Kartik Sharma (@KartikS90824800) January 4, 2022
Advertisement
ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆ ಕುರಿತು ನೆಟ್ಟಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಪೊಲೀಸ್ ಮನಬಂದಂತೆ ಥಳಿಸುತ್ತಿದ್ದರೂ, ಅವರನ್ನು ತಡೆಯದೇ ನೋಡುತ್ತಿದ್ದ ಟಿಟಿಯನ್ನು ಅಮಾನತು ಮಾಡಲು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಆರ್‌ಬಿಐ ಪರಿಶೀಲನೆ ವೇಳೆ ನಕಲಿ ನೋಟುಗಳು ಪತ್ತೆ
ಘಟನೆ ಸಂಬಂಧಿಸಿ ವಿರೋಧ ಪಕ್ಷಗಳು ತೀವ್ರ ಟೀಕೆಯನ್ನು ವ್ಯಕ್ತಪಡಿಸಿದ್ದಾರೆ. ಪೊಲೀಸರು ಕ್ರಿಮಿನಲ್‍ಗಳನ್ನು ಬಂಧಿಸುವುದರ ಬದಲು ಸಾಮಾನ್ಯ ಜನರಿಗೆ ತೊಂದರೆ ನೀಡುತ್ತಿದ್ದಾರೆ. ಪ್ರಯಾಣಿಕನ ಮೇಲೆ ನಡೆದ ಹಲ್ಲೆಯನ್ನು ಕಾನೂನು ಬದ್ಧವಾಗಿ ಇತ್ಯರ್ಥ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ತನಿಖೆ ಕೈಗೊಂಡಿದೆ.