– ದೇಶದಲ್ಲಿ 20ಕ್ಕೆ ಏರಿದ ಸಾವಿನ ಸಂಖ್ಯೆ
– ಸಾವಿನ ಸಂಖ್ಯೆ ‘ಮಹಾ’ ಟಾಪ್
ತಿರುವನಂತಪುರಂ: ಹೆಮ್ಮಾರಿ ಕೊರೊನಾ ವೈರಸ್‍ಗೆ ಕೇರಳದಲ್ಲಿ ಮೊದಲ ಸಾವು ಸಂಭವಿಸಿದೆ. ಕೊಚ್ಚಿಯ ಕಲಾಮಸ್ಸೆರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ 69 ವರ್ಷದ ವೃದ್ಧ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಕೊಚ್ಚಿಯ ಚುಲ್ಲಿಕಲ್ ನಿವಾಸಿ ವೃದ್ಧ ಮಾರ್ಚ್ 16ರಂದು ದುಬೈನಿಂದ ಮರಳಿದ್ದರು. ಅವರೊಂದಿಗೆ ಸಂಪರ್ಕ ಹೊಂದಿದ್ದ ಪತ್ನಿ ಹಾಗೂ ಚಾಲಕನಿಗೂ ಸೋಂಕು ತಗುಲಿದ್ದು, ಅವರನ್ನು ಕೂಡ ಕಲಾಮಸ್ಸೆರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.
Advertisement
A 69-year-old man died due to #Coronavirus, at Kochi Medical College today: Ernakulam District Medical Officer Dr NK Kuttappan
This is the first death in Kerala, due to Coronavirus. pic.twitter.com/uwJlI6XmGz
— ANI (@ANI) March 28, 2020
Advertisement
ಶುಕ್ರವಾರ ಸಂಜೆವರೆಗೂ ಕೇರಳದಲ್ಲಿ 176 ಪ್ರಕರಣಗಳು ಪತ್ತೆಯಾಗಿದ್ದು, 12 ಜನರು ಚೇತರಿಸಿಕೊಂಡಿದ್ದಾರೆ. ಆದರೆ ಮೃತ ವೃದ್ಧ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಕೇರಳ ಸರ್ಕಾರ ಹೇಳಿದೆ.
Advertisement
ವೃದ್ಧ ಮಾರ್ಚ್ 16ರಂದು ದುಬೈನಿಂದ ಮರಳಿದ್ದಾಗ ಅವರಲ್ಲಿ ಸೋಂಕು ತಗುಲಿರುವ ಲಕ್ಷಣಗಳು ಕಂಡು ಬಂದಿದ್ದವು. ಹೀಗಾಗಿ ಹೋಮ್ ಕ್ವಾರೆಂಟೈನ್ ಇರುವಂತೆ ಸೂಚನೆ ನೀಡಲಾಗಿತ್ತು. ಮಾರ್ಚ್ 22ರಂದು ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ವೆಂಟಿಲೇಟರ್ ಮೇಲೆ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
Advertisement
ಭಾರತದಲ್ಲಿ ಈವರೆಗೂ ಒಟ್ಟು 20 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಕೇರಳ, ದೆಹಲಿ, ಹಿಮಾಚಾಲ, ತಮಿಳುನಾಡು, ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಜಮ್ಮು ಕಾಶ್ಮೀರಗಳಲ್ಲಿ ತಲಾ ಒಂದು, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ ಮೂರು, ಮಧ್ಯಪ್ರದೇಶದಲ್ಲಿ ಎರಡು ಮತ್ತು ಮಹಾರಾಷ್ಟ್ರದಲ್ಲಿ ಐದು ಜನರು ಮೃತಪಟ್ಟಿದ್ದಾರೆ.
ಕೇರಳದ ಅಂಕಿ-ಅಂಶ:
ಕೇರಳದ ವಿವಿಧ ಆಸ್ಪತ್ರೆಗಳಲ್ಲಿ ಬುಧವಾರ 112 ಕೊರೊನಾ ಶಂಕಿರತನ್ನು ವೀಕ್ಷಣೆಗಾಗಿ ದಾಖಲಿಸಲಾಗಿದೆ. ಆಸ್ಪತ್ರೆಗಳಲ್ಲಿ ಈವರೆಗೂ 616 ಜನರು ಚಿಕಿತ್ಸೆ ಪಡೆಯುತ್ತಿದ್ದರೆ, 1,09,683 ಜನ ಹೋಮ್ ಕ್ವಾರೆಂಟೈನ್‍ನಲ್ಲಿದ್ದಾರೆ. ಹೆಚ್ಚಿನ ಸಂಖ್ಯೆಯ ಸೋಂಕಿತರು ಕಾಸರಗೋಡುನಲ್ಲಿರುವುದರಿಂದ ಈಗಿರುವ ನಿರ್ಬಂಧಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಮುಂದುವರಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೂಚನೆ ನೀಡಿದ್ದಾರೆ.
ಇಲ್ಲಿಯವರೆಗೆ ವೇಳೆಗೆ ರಾಜ್ಯದಲ್ಲಿ 1,10,299 ಜನರನ್ನು ನಿಗಾದಲ್ಲಿ ಇಡಲಾಗಿದ್ದು, ಈ ಪೈಕಿ 616 ಜನರನ್ನು ರಾಜ್ಯದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಒಟ್ಟು 5,679 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 4,448 ಮಂದಿಯ ರಿಪೋರ್ಟ್ ನೆಗೆಟಿವ್ ಬಂದಿದೆ ಎಂದು ಪಿಣರಾಯಿ ವಿಜಯನ್ ಖಚಿತಪಡಿಸಿದ್ದಾರೆ.