ಬೆಂಗಳೂರು/ತಿರುವನಂತಪುರಂ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾನೆ. ರಾಜ್ಯಕ್ಕೆ ಈಗ ನಿಫಾ ವೈರಸ್ (Nipah Virus) ಭೀತಿ ಎದುರಾಗಿದೆ.
24 ವರ್ಷದ ವಿದ್ಯಾರ್ಥಿ ನಿಫಾದಿಂದ ಸಾವನ್ನಪ್ಪಿದ್ದಾನೆ. ಈತ ಕೇರಳದ (Kerala) ಮಲಪುರಂ ಮೂಲದ ವಿದ್ಯಾರ್ಥಿ. ಕಾಲಿಗೆ ಪೆಟ್ಟು ಬಿದ್ದ ಕಾರಣ ಆ.25 ರಂದು ಬೆಂಗಳೂರಿನಿಂದ ಕೇರಳಕ್ಕೆ ತೆರಳಿದ್ದ. ಇದನ್ನೂ ಓದಿ: ರಾಹುಲ್ ಗಾಂಧಿ ಭಾರತದ ನಂ.1 ಭಯೋತ್ಪಾದಕ: ಕೇಂದ್ರ ಸಚಿವ ವಿವಾದಾತ್ಮಕ ಹೇಳಿಕೆ
ಸೆ.5 ರಂದು ವಿದ್ಯಾರ್ಥಿಗೆ ಜ್ವರ ಕಾಣಿಸಿಕೊಂಡಿತ್ತು. ಸಮೀಪದ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದ. ಸೆ.6 ರಂದು ವಾಂತಿಯಾಗಿತ್ತು. ಬಳಿಕ ಆತನ ಆರೋಗ್ಯ ಗಂಭೀರ ಸ್ಥಿತಿ ತಲುಪಿತು. ತಕ್ಷಣ ಯುವಕನನ್ನು ಎಂಇಎಸ್ ಪ್ರೈವೇಟ್ ಮೆಡಿಕಲ್ ಕಾಲೇಜಿನ ಐಸಿಯುಗೆ ಶಿಫ್ಟ್ ಮಾಡಲಾಗಿತ್ತು.
ವಿದ್ಯಾರ್ಥಿಗೆ ಅಕ್ಯೂಟ್ ರೆಸ್ಪಿರೇಟರಿ ಡಿಸ್ಟ್ರೆಸ್ ಸಿಂಡ್ರೋಮ್ ಇತ್ತು. ಆದರೆ ಸೆ.8 ರಂದು ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾನೆ. ವಿದ್ಯಾರ್ಥಿ ರಕ್ತ ಹಾಗೂ ಸಿರಂ ಸ್ಯಾಂಪಲ್‌ನಲ್ಲಿ ನಿಫಾ ಪಾಸಿಟಿವ್ ದೃಢಪಟ್ಟಿತ್ತು. ಇದನ್ನೂ ಓದಿ: ಗದಗ: ಮಾನವ ಸರಪಳಿ ವೇಳೆ ಜನರ ಮೇಲೆ ಹೆಜ್ಜೇನು ದಾಳಿ – ಸ್ಥಳದಿಂದ ಚದುರಿದ ಜನ
ಈ ವಿದ್ಯಾರ್ಥಿ 151 ಜನರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಂಬುದು ತಿಳಿದುಬಂದಿದೆ. ಈತ ನಾಲ್ಕು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಸ್ನೇಹಿತರೊಂದಿಗೆ ಪ್ರಯಾಣ ಬೆಳೆಸಿದ್ದ. ಅವರ ವಿವರಗಳನ್ನು ಸಂಗ್ರಹಿಸಲಾಗಿದೆ. ಅವರೊಂದಿಗೆ ನೇರ ಸಂಪರ್ಕಕ್ಕೆ ಬಂದವರನ್ನು ಪ್ರತ್ಯೇಕಿಸಲಾಗಿದೆ ಎಂದು ಕೇರಳ ಆರೋಗ್ಯ ಸಚಿವರು ತಿಳಿಸಿದ್ದಾರೆ.