ಬೆಂಗಳೂರು: ಲೋಕಸಭಾ ಚುನಾವಣೆ (LokSabha Elections) ಹಿನ್ನೆಲೆಯಲ್ಲಿ ಈ ಬಾರಿ ಅವಧಿಗೆ ಮುಂಚಿತವಾಗಿಯೇ ವಿದ್ಯುತ್ ದರ ಪರಿಷ್ಕರಣೆ ಮಾಡಲು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ ಮುಂದಾಗಿದೆ.
ಇಂದು (ಬುಧವಾರ) ಸಂಜೆಯೇ ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ (KERC) ವಿದ್ಯುತ್ ದರ ಪರಿಷ್ಕರಣೆ ಪ್ರಕಟಿಸಲಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಪರಿಷತ್‌ನಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಗದ್ದಲ – ಕಾಂಗ್ರೆಸ್ ಸರ್ಕಾರ ವಜಾಕ್ಕೆ ಬಿಜೆಪಿ ಒತ್ತಾಯ
Advertisement
Advertisement
ಪ್ರತಿ ವರ್ಷ ಏರ್ಪಿಲ್‌ನಲ್ಲಿ ವಿದ್ಯುತ್ ದರ (Electricity Price) ಪರಿಷ್ಕರಣೆಯಾಗುತ್ತಿತ್ತು. ಆದ್ರೆ ಈ ಬಾರಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವಧಿಗೆ ಮುಂಚಿತವಾಗಿಯೇ ವಿದ್ಯುತ್ ದರ ಪರಿಷ್ಕರಣೆಯಾಗಲಿದೆ. ಬುಧವಾರ ಪರಿಷ್ಕೃತ ದರ ಪ್ರಕಟವಾದರೂ ಏಪ್ರಿಲ್‌ನಿಂದ ಅನ್ವಯವಾಗಲಿದೆ. ಗೃಹಜ್ಯೋತಿ (Gruha Jyothi Scheme) ನಡುವೆಯೂ ವಿದ್ಯುತ್ ದರ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
Advertisement
ಕಳೆದ ವರ್ಷ ಆಗಸ್ಟ್ 5ರಂದು ಗೃಹಜ್ಯೋತಿ ಯೋಜನೆಗೆ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿತ್ತು. ವಿದ್ಯುತ್ ಪೂರೈಕೆಗಾಗಿ ಬೆಸ್ಕಾಂ 235.07 ಮೆಸ್ಕಾಂ 52.73, ಹೆಸ್ಕಾಂ 82.02, ಜೆಸ್ಕಾಂ 53.46, ಚೆಸ್ಕಾಂ 51.26, ಹುಕ್ಕೇರಿ 1.46 ಕೋಟಿ ರೂ. ಸಹಾಯಧನ ಬಿಡುಗಡೆ ಮಾಡಿತ್ತು. ಇದನ್ನೂ ಓದಿ: ಪಾಕ್ ಪರ ಘೋಷಣೆ ಆರೋಪ; ಎಫ್‌ಎಸ್‌ಎಲ್‌ಗೆ ವೀಡಿಯೋ ಕಳುಹಿಸಲು ಪೊಲೀಸರ ತಯಾರಿ
Advertisement
ಗೃಹಜ್ಯೋತಿಗೆ ಇರುವ ಷರತ್ತುಗಳೇನು?
ಗೃಹಜ್ಯೋತಿ ಯೋಜನೆಗೆ ವಾರ್ಷಿಕ ಸರಾಸರಿ ಮಾನದಂಡವಿದೆ. 12 ತಿಂಗಳ ಸರಾಸರಿ ಪಡೆದುಕೊಂಡು ಅದರ ಮೇಲೆ 10% ರಷ್ಟು ವಿದ್ಯುತ್ ಉಚಿತವಾಗಿ ನೀಡಲಾಗುವುದು. ಯಾರು ಎಷ್ಟು ವಿದ್ಯುತ್ ಬಳಸುತ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ 10% ರಷ್ಟು ವಿದ್ಯುತ್ ಉಚಿತವಾಗಿ ಕೊಡಲಾಗುವುದು. ಉದಾಹರಣೆಗೆ, 70 ಯೂನಿಟ್ ಬಳಸುವವರು ಅದಕ್ಕೆ 10% (ಅಂದರೆ ಒಟ್ಟು 80%) ಬಳಕೆ ಮಾಡಬಹುದು. ಕಳೆದ ವರ್ಷ ಸರಾಸರಿ ತಿಂಗಳಿಗೆ 100 ಯೂನಿಟ್ ಬಳಸಿದ್ದವರು ಈಗ 110 ಯೂನಿಟ್ ಬಳಸಿದ್ರೆ ವಿದ್ಯುತ್ ಉಚಿತವಾಗಿ ಸಿಗುತ್ತದೆ. ಒಂದು ವೇಳೆ 110ಕ್ಕಿಂತ ಹೆಚ್ಚು ಯೂನಿಟ್ ಬಳಸಿದ್ರೆ ಹೆಚ್ಚುವರಿ ಯೂನಿಟ್‌ಗೆ ಬಿಲ್ ಕಟ್ಟಬೇಕು. ಹೀಗೆ 200 ಯೂನಿಟ್ ವರೆಗೆ ವಿದ್ಯುತ್ ಬಳಸುವವರು ಬಿಲ್ ಕಟ್ಟುವಂತಿಲ್ಲ. 200 ಯೂನಿಟ್ ಉಚಿತ ಅಂತ ಎಲ್ಲರೂ ಬೇಕಾಬಿಟ್ಟಿ ವಿದ್ಯುತ್ ಬಳಸುವಂತಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಅಬ್ದುಲ್ ಕಲಾಂ ವಸತಿ ಪ್ರಾಂಶುಪಾಲರ ಎಡವಟ್ಟು- ಕ್ರೂಸರ್ ಟಾಪ್‍ನಲ್ಲಿ ಮಕ್ಕಳ ಡೇಂಜರ್ ಜರ್ನಿ