ಗಾಂಧಿನಗರ: ಗುಜರಾತ್‍ನ (Gujarat) ರಾಜ್‍ಕೋಟ್‍ನ ಟಿಆರ್‌ಪಿ ಗೇಮಿಂಗ್ ಝೋನ್‌ನಲ್ಲಿ (Rajkot Game Zone Fire) 27 ಮಂದಿಯ ಸಾವಿಗೆ ಕಾರಣವಾದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಧವಲ್ ಠಕ್ಕರ್ (Dhawal Thakkar) ರಾಜಸ್ಥಾನದ ಅಬು ರಸ್ತೆಯಲ್ಲಿ ಬಂಧಿಸಲಾಗಿದೆ. ಈತ ರಾಜಸ್ಥಾನದ ಸಂಬಂಧಿಕರ ಮನೆಯಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಮಾಹಿತಿಯ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ ಪ್ರಕರಣ – 7 ಅಧಿಕಾರಿಗಳು ಅಮಾನತು
ಗೇಮಿಂಗ್ ಝೋನ್‍ನ ಆರು ಪಾಲುದಾರರ ವಿರುದ್ಧವೂ ಎಫ್‍ಐಆರ್ ದಾಖಲಿಸಲಾಗಿದೆ. ಈ ವಲಯವನ್ನು ನಿರ್ವಹಿಸುತ್ತಿದ್ದ ರೇಸ್‍ವೇ ಎಂಟರ್‌ಪ್ರೈಸಸ್ ಇಬ್ಬರು ಪಾಲುದಾರರಾದ ಯುವರಾಜ್‍ಸಿಂಹ ಸೋಲಂಕಿ ಮತ್ತು ರಾಹುಲ್ ರಾಥೋಡ್ ಮತ್ತು ವ್ಯವಸ್ಥಾಪಕ ನಿತಿನ್ ಜೈನ್‍ನನ್ನು ಇಂದು ಮುಂಜಾನೆ (ಮೇ 28) ಬಂಧಿಸಲಾಗಿದೆ. ಬಂಧಿತ ಮೂವರನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಈ ವೇಳೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ತುಷಾರ್ ಗೋಕನಿ ಆರೋಪಿಗಳ ಬಳಿ ಗೇಮಿಂಗ್ ಝೋನ್‍ನ ದಾಖಲೆಗಳನ್ನು ಕೇಳಿದಾಗ ಬೆಂಕಿಯಲ್ಲಿ ಸುಟ್ಟುಹೋಗಿವೆ ಎಂದಿದ್ದಾರೆ.
ಹೆಚ್ಚಿನ ತನಿಖೆಗಾಗಿ ಸರ್ಕಾರ ನೇಮಿಸಿದ ವಿಶೇಷ ತನಿಖಾ ತಂಡ (SIT) ಟಿಆರ್‌ಪಿ ಗೇಮಿಂಗ್ ಝೋನ್‍ಗೆ ಸಂಬಂಧಿಸಿದ ಎಲ್ಲಾ ಫೈಲ್‍ಗಳನ್ನು ವಶಪಡಿಸಿಕೊಂಡಿದೆ ಎಂದು ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ್ ಸಾಂಘ್ವಿ (Harsh Sanghavi) ಹೇಳಿದ್ದಾರೆ.
ರಾಜ್‍ಕೋಟ್‍ನ ಟಿಆರ್‌ಪಿ ಗೇಮಿಂಗ್ ಝೋನ್‍ನಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಮುನ್ಸಿಪಲ್ ಕಾರ್ಪೋರೇಷನ್ ಅನ್ನು ಗುಜುರಾತ್ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಅಧಿಕಾರಿಗಳ ನಿರ್ಲಕ್ಷ್ಯ ಆಡಳಿತ ಯಂತ್ರದ ಮೇಲಿನ ನಂಬಿಕೆಯನ್ನು ಪ್ರಶ್ನಿಸುವಂತಾಗಿದೆ ಎಂದು ಹೇಳಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ. ಬಿರೇನ್ ವೈಷ್ಣವ್ ಮತ್ತು ನ್ಯಾ.ದೇವನ್ ದೇಸಾಯಿ ಅವರನ್ನೊಳಗೊಂಡ ವಿಶೇಷ ಪೀಠ, ಗೇಮಿಂಗ್ ವಲಯ ನಿರ್ವಾಹಕರು ರಾಜ್‍ಕೋಟ್ ಮುನ್ಸಿಪಲ್ ಕಾರ್ಪೋರೇಷನ್‌ನಿಂದ ಕಡ್ಡಾಯ ಅನುಮತಿಗಳು ಮತ್ತು ಪರವಾನಗಿಗಳನ್ನು ತೆಗೆದುಕೊಂಡಿಲ್ಲ ಎಂದು ವರದಿಯಾಗಿದೆ. ಅಧಿಕಾರಿಗಳು ಏನು ನಿದ್ದೆ ಮಾಡುತ್ತಿದ್ದಾರಾ ಎಂದು ಖಾರವಾಗಿ ಪ್ರಶ್ನಿಸಿತ್ತು. ಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳಲ್ಲಿ ಸರ್ಕಾರ 7 ಅಧಿಕಾರಿಗಳನ್ನ ಅಮಾನತುಗೊಳಿಲಾಗಿದೆ. ಇದನ್ನೂ ಓದಿ: ಮಡಿಕೇರಿಯಲ್ಲಿ 5 ವರ್ಷ ಕಳೆದರೂ ನೆರೆಸಂತ್ರಸ್ತರಿಗೆ ಸಿಗದ ಶಾಶ್ವತ ಸೂರು – ಸರ್ಕಾರದ ವಿರುದ್ಧ ಆಕ್ರೋಶ