ಲಕ್ನೋ: ಹತ್ರಾಸ್ ಕಾಲ್ತುಳಿತ (Hathras Stampede) ಪ್ರಕರಣದ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್‌ನನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು (Magistrate Court) 14 ದಿನಗಳ ನ್ಯಾಯಾಂಗ ಬಂಧನಕ್ಕೆ (Judicial Custody) ನೀಡಿ ಶನಿವಾರ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಶಂಕಿತ ಆರೋಪಿ ಸಂಜು ಯಾದವ್‌ನನ್ನು 14 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು ಮಧುಕರ್ ಮತ್ತು ಇತರ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆಯಲು ಪೊಲೀಸರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು ಎಂದು ಹತ್ರಾಸ್ ಪೊಲೀಸ್ ವರಿಷ್ಠಾಧಿಕಾರಿ ನಿಪುನ್ ಅಗರ್ವಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ಸೂರತ್‌ನಲ್ಲಿ ಕುಸಿದು ಬಿದ್ದ 6 ಅಂತಸ್ತಿನ ಕಟ್ಟಡ – ಮಹಿಳೆ ರಕ್ಷಣೆ, 15 ಮಂದಿಗೆ ಗಾಯ
Advertisement
Advertisement
Advertisement
ದೇವಪ್ರಕಾಶ್ ಮಧುಕರ್ ಮತ್ತು ಸಂಜು ಯಾದವ್ ಅವರನ್ನು ಇಂದು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇಬ್ಬರನ್ನೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಸಹಾಯಕ ಪ್ರಾಸಿಕ್ಯೂಷನ್ ಅಧಿಕಾರಿ ಉಮಾ ಶಂಕರ್ ಯಾದವ್ ಹೇಳಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಂತೆ ಗುಜರಾತ್‌ನಲ್ಲೂ ಬಿಜೆಪಿ ಸೋಲಿಸುತ್ತೇವೆ: ರಾಹುಲ್ ಗಾಂಧಿ ಶಪಥ
Advertisement
ಕಾಲ್ತುಳಿತ ಪ್ರಕರಣದಲ್ಲಿ ಬಂಧಿತನಾಗಿರುವ ರಾಮಪ್ರಕಾಶ್ ಶಾಕ್ಯಾ ಅವರನ್ನು ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಪಿಒ ಹೇಳಿದ್ದಾರೆ. ಮಧುಕರ್ ಮತ್ತು ಯಾದವ್‌ನನ್ನು ನಂತರ ಬಂಧಿಸಲಾಗಿದ್ದು, ಕೆಲವು ಪೊಲೀಸ್ ವಿಚಾರಣೆಗಳು ಬಾಕಿ ಉಳಿದಿವೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಮತ್ತೊಂದು ಝಿಕಾ ವೈರಸ್ ಕೇಸ್ ಪತ್ತೆ – ಡೆಂಗ್ಯೂ ನಡುವೆ ಹೆಚ್ಚಾಯ್ತು ಆತಂಕ!
ಹತ್ರಾಸ್ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡವು ಶುಕ್ರವಾರ ತಡರಾತ್ರಿ ದೆಹಲಿಯ ನಜಾಫ್‌ಗಢ ಪ್ರದೇಶದಿಂದ ಮಧುಕರ್‌ನನ್ನು ಬಂಧಿಸಿದೆ. ಶಾಕ್ಯಾ ಮತ್ತು ಯಾದವ್ ಅವರನ್ನು ಶನಿವಾರ ಹತ್ರಾಸ್‌ನಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇಯಲ್ಲಿ ತಡೆಗೋಡೆಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಚಾಲಕ ಗಂಭೀರ
ಎಫ್‌ಐಆರ್‌ನಲ್ಲಿ ಮಧುಕರ್ ಒಬ್ಬನೇ ಪ್ರಮುಖ ಆರೋಪಿಯಾಗಿದ್ದು, ಸತ್ಸಂಗದ ಹಲವಾರು ಅಪರಿಚಿತ ಸಂಘಟಕರನ್ನು ಶಂಕಿತ ಆರೋಪಿಗಳೆಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಗಿರಿತಾಣ, ಶಿಖರಗಳಿಗೆ ಚಾರಣ ನಿಷೇಧ
ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಅಲಿಯಾಸ್ ಭೋಲೆಬಾಬಾನ ಸತ್ಸಂಗ ಕಾರ್ಯಕ್ರಮದ ನಂತರ ನಡೆದ ಕಾಲ್ತುಳಿತದಲ್ಲಿ 121 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ಹೆಚ್ಚಿನವರು ಮಹಿಳೆಯರೇ ಆಗಿದ್ದಾರೆ. ಇದನ್ನೂ ಓದಿ: ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ