ಭಾರೀ ಮಳೆಗೆ ಅಸ್ಸಾಂ-ಮೇಘಾಲಯ ರಸ್ತೆ ಸಂಪರ್ಕ ಕಡಿತ – 2 ದಿನದಲ್ಲಿ 30 ಮಂದಿ ಸಾವು!

Public TV
1 Min Read
Assam Meghalaya Road 1

ಗುವಾಹಟಿ: ಭಾರೀ ಮಳೆಯಿಂದಾಗಿ ಈಶಾನ್ಯ ಭಾಗದಲ್ಲಿ ಪ್ರವಾಹ (Flood) ಹಾಗೂ ಭೂಕುಸಿತ (Landslide) ಉಂಟಾಗಿದ್ದು, ಜನಜೀವನ ಮತ್ತು ಸಂಚಾರ ಅಸ್ತವ್ಯಸ್ತಗೊಂಡಿದೆ. ಮಳೆಯ ಪರಿಣಾಮ ಮೇಘಾಲಯ (Meghalaya) ಹಾಗೂ ಅಸ್ಸಾಂ (Assam) ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಭಾರೀ ಮಳೆಯಿಂದಾಗಿ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ರಸ್ತೆಗಳು ಹಾನಿಗೊಂಡಿವೆ. ರಾಷ್ಟ್ರೀಯ ಹೆದ್ದಾರಿ-17ರ ತುರಾ ಮತ್ತು ಗುವಾಹಟಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಹಲವಾರು ಟ್ರಕ್‌ಗಳು ಮತ್ತು ಘನ ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿವೆ. ಇದನ್ನೂ ಓದಿ: ಗೈಡೆಡ್ ಟೂರ್ ಶುರು – ಇಂದಿನಿಂದ ವಿಧಾನಸೌಧ ವೀಕ್ಷಣೆಗೆ ಮುಕ್ತ ಅವಕಾಶ; ಯಾರಿಗೆ ಉಚಿತ, ಯಾರಿಗೆ ಟಿಕೆಟ್‌ ಖಚಿತ?

Arunachal Pradesh Landslide

2 ದಿನಗಳಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ಅಸ್ಸಾಂನಲ್ಲಿ 8 ಮಂದಿ, ಅರುಣಾಚಲ ಪ್ರದೇಶದಲ್ಲಿ 9 ಮಂದಿ ಸೇರಿ ಒಟ್ಟು 30 ಮಂದಿ ಸಾವನ್ನಪ್ಪಿದ್ದಾರೆ. ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಅಸ್ಸಾಂನ ಕೆಲವು ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ 12 ಜಿಲ್ಲೆಗಳು ಪ್ರವಾಹ ಹಾಗೂ ಭೂಕುಸಿತದಿಂದ ನಷ್ಟ ಅನುಭವಿಸಿದೆ. ಇದನ್ನೂ ಓದಿ: ಬೆಳಗಾವಿ | ಅಪ್ರಾಪ್ತೆ ಮೇಲೆ 2 ಬಾರಿ ಗ್ಯಾಂಗ್ ರೇಪ್ – ಇಬ್ಬರು ಅರೆಸ್ಟ್

ಮಳೆಯ ಪರಿಣಾಮ ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ- 13ರಲ್ಲಿ ಭೂಕುಸಿತ ಸಂಭವಿಸಿದೆ. ಪರಿಣಾಮ ವಾಹನವೊಂದು ಕೊಚ್ಚಿಹೋಗಿದ್ದು, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Bengaluru | ಮಗುವನ್ನು ನೋಡಿಕೊಳ್ಳಲು ಬಂದ ಯುವತಿ 30 ನಿಮಿಷದಲ್ಲಿ 32,000 ರೂ. ಪಡೆದು ಎಸ್ಕೇಪ್

Share This Article