ಮಡಿಕೇರಿ: ಇದೇ ಅ.17ರಂದು ಜರುಗುವ ಕೊಡಗಿನ ಪವಿತ್ರ ಕಾವೇರಿ ತೀರ್ಥೋದ್ಭವ ವೀಕ್ಷಣೆಗೆ ತಲಕಾವೇರಿ ಕ್ಷೇತ್ರಕ್ಕೆ ಭಕ್ತರಿಗೆ ಮುಕ್ತ ಅವಕಾಶ ಕಲ್ಪಿಸಲಾಗುವುದೆಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.
Advertisement
ಈ ಕುರಿತು ಪ್ರತಿಕ್ರಿಯಿಸಿದ ಅವರು, ಜಿಲ್ಲೆಯ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲಾಗಿದೆ. ಈ ವೇಳೆ ತೀರ್ಥೋದ್ಭವ ಸಂದರ್ಭದಲ್ಲಿ ಭಕ್ತರಿಗೆ ಭಾಗವಹಿಸಲು ಕೋವಿಡ್ ನಿಯಮದಂತೆ ಮುಕ್ತ ಅವಕಾಶ ನೀಡುವಂತೆ ಬೇಡಿಕೆ ಸಲ್ಲಿಸಲಾಗಿದೆ. ಇದಕ್ಕೆ ಸಿಎಂ ಸಮ್ಮತಿಸಿದ್ದು, ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹಾಗಾಗಿ ಈ ಬಾರಿ ಅವಕಾಶ ಸಿಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಗಣೇಶೋತ್ಸವದಂತೆ ದುರ್ಗಾದೇವಿ ಪ್ರತಿಷ್ಠಾಪನೆಗೂ ಪಾಲಿಕೆ ನಿರ್ಬಂಧ
Advertisement
Advertisement
ಈ ಸಂಬಂಧ ನಿನ್ನೆಯೇ ಉಸ್ತುವಾರಿ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ಸಚಿವರು ಇಂದು ಜಿಲ್ಲೆಗೆ ಭೇಟಿ ನೀಡಿ ಸಭೆ ನಡೆಸಿ, ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆಂದು ತಿಳಿಸಿದರು. ಇದನ್ನೂ ಓದಿ: ಮೂವತ್ತು ಮನೆಗಳಿಗೆ ನುಗ್ಗಿದ ನೀರು- ರಸ್ತೆ ಮಧ್ಯಕ್ಕೆ ಉರುಳಿದ ಬೃಹತ್ ಮರ
Advertisement
ಪೂರ್ವ ಸಿದ್ಧತಾ ಸಭೆ!
ಪ್ರಸ್ತುತ ತಲಕಾವೇರಿ – ಭಗಂಡೇಶ್ವರ ವ್ಯವಸ್ಥಾಪನಾ ಸಮಿತಿ ಇಲ್ಲದೆ ಇರುವುದರಿಂದ ಸಂಪ್ರದಾಯದಂತೆ ತುಲಾ ಸಂಕ್ರಮಣ ಜಾತ್ರೆಯ ಜವಾಬ್ದಾರಿ ವಹಿಸುವ ನಿಟ್ಟಿನಲ್ಲಿ 7ರಂದು ಭಾಗಮಂಡಲದಲ್ಲಿ ಪೂರ್ವ ಸಿದ್ಧತಾ ಸಭೆ ಏರ್ಪಡಿರುವುದಾಗಿ ಅವರು ಸ್ಪಷ್ಟಪಡಿಸಿದರು.