– ಕೆಜಿಹಳ್ಳಿ, ಡಿಜೆಹಳ್ಳಿ ಪ್ರಕರಣದಲ್ಲಿ ಗೃಹಸಚಿವರ ನಡೆಗೆ ಶಾಸಕ ಅಸಮಾಧಾನ
ಬೆಂಗಳೂರು: ಕೆಜಿಹಳ್ಳಿ (KG Halli), ಡಿಜೆಹಳ್ಳಿ (DJ Halli) ಪೊಲೀಸ್ ಠಾಣೆಯ ಮೇಲೆ ನಡೆದ ಗೂಂಡಾ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಕೈ ಬಿಡುವಂತೆ ಸೂಚಿಸಿರುವುದು ಸಂಪೂರ್ಣ ಕಾನೂನು ಬಾಹಿರ ಎಂದು ಶಾಸಕ ಸುನೀಲ್ ಕುಮಾರ್ (Sunil Kumar) ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.
ಕೆಜಿಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆಯ ಮೇಲೆ ನಡೆದ ಗೂಂಡಾ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಪ್ರಕರಣವನ್ನು ಕೈ ಬಿಡುವಂತೆ ಶಾಸಕ ತನ್ವೀರ್ ಸೇಠ್ ಬರೆದ ಪತ್ರ ಆಧರಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಪೊಲೀಸ್ ಇಲಾಖೆಗೆ ಬರೆದ ಪತ್ರ ಸಂಪೂರ್ಣವಾಗಿ ಕಾನೂನು ಬಾಹಿರ. (1/2) pic.twitter.com/xJNBvSIRSd
— Sunil Kumar Karkala (@karkalasunil) July 26, 2023
ಶಾಸಕ ತನ್ವೀರ್ ಸೇಠ್ ಬರೆದ ಪತ್ರ ಆಧರಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ (G. Parameshwara) ಪೊಲೀಸ್ ಇಲಾಖೆಗೆ ಬರೆದ ಪತ್ರ ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ. ಸರ್ಕಾರ ಮುಸ್ಲಿಂ ಓಲೈಕೆಗಾಗಿ ಸಂವಿಧಾನಬಾಹಿರವಾಗಿ ವರ್ತಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಕರ್ನಾಟಕದ ಪೊಲೀಸರು ಆಳುವ ಸರ್ಕಾರದ ಆಳುಗಳಂತೆ ವರ್ತಿಸುವುದಕ್ಕೆ ಮುನ್ನ ಆ ದಿನ ನಡೆದ ಭೀಬತ್ಸ ಘಟನೆಯನ್ನು ನೆನಪು ಮಾಡಿಕೊಳ್ಳಲಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕಳೆದ 24 ಗಂಟೆಯಲ್ಲಿ ಕೆಆರ್‌ಎಸ್ ಡ್ಯಾಂಗೆ ಹರಿದು ಬಂದ 4 ಟಿಎಂಸಿ ನೀರು – 104 ಅಡಿಗೆ ಏರಿಕೆ
ಗೃಹ ಸಚಿವ ಪರಮೇಶ್ವರ್ ಲೆಟರ್ ಹೆಡ್‍ನಲ್ಲಿರುವ ಟಿಪ್ಪಣಿ ಕುರಿತ ಪತ್ರ ಲಗ್ಗತಿಸಿ ಉಗ್ರ ಮನಸ್ಥಿತಿಯ ವ್ಯಕ್ತಿಗಳಿಗೆ ಅಮಾಯಕರ ಪಟ್ಟ ಕಟ್ಟಿ ದೇಶವನ್ನು ಸಿರಿಯಾ ಮಾಡುತ್ತೀರಾ? ಇದು ಗೃಹ ಸಚಿವರು ಸೂಚಿಸಿರುವುದು ನಿಜವೇ ಎಂದು ಅವರು ಪ್ರಶ್ನಿಸಿದ್ದಾರೆ.
ಹಂಚಿಕೊಂಡ ಪತ್ರದಲ್ಲೇನಿದೆ?
ಶ್ರೀ ತಸ್ವೀರ್ ಸೇಠ್, ಮಾನ್ಯ ಶಾಸಕರು ಹಾಗೂ ಮಾಜಿ ಸಚಿವರು. ನರಸಿಂಹರಾಜ ಕ್ಷೇತ್ರ ಇವರು ಸಲ್ಲಿಸಿರುವ ಮನವಿಯನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಮನವಿಯಲ್ಲಿ, ಬೆಂಗಳೂರು ನಗರದ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಇತರೆ ಕಡೆಗಳಲ್ಲಿ ನಡೆದ ಪ್ರತಿಭಟನೆ ಹಾಗೂ ಗಲಭೆಗಳಲ್ಲಿ ಅಮಾಯಕ ಯುವಕರು ಹಾಗೂ ವಿದ್ಯಾರ್ಥಿಗಳು, ಸುಳ್ಳು ಮೊಕದ್ದಮೆಗಳಲ್ಲಿ ಬಂಧಿತರಾಗಿದ್ದು, ಸದರಿ ಮೊಕದ್ದಮೆಗಳನ್ನು ಮರು ಪರಿಶೀಲಿಸಿ ನಿಯಮಾನುಸಾರ ಹಿಂಪಡೆಯಲು ಕ್ರಮಕೈಗೊಳ್ಳುವಂತೆ ಕೋರಲಾಗಿದೆ. ಈ ಬಗ್ಗೆ ಪರಿಶೀಲಿಸಿ, ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಕೌಟುಂಬಿಕ ಕಲಹ ಸರಿ ಮಾಡ್ತೀನಿ ಅಂತ ಬಂದ ಜ್ಯೋತಿಷಿ – ಚಿನ್ನ, ಹಣ ದೋಚಿ ಬೀರುವಿನಲ್ಲಿ ನಿಂಬೆಹಣ್ಣು ಇಟ್ಟು ಹೋದ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]