ರಾಕಿಂಗ್ ಸ್ಟಾರ್ ಯಶ್ ಅವರು (Yash) ಮಧ್ಯ ಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ (Mahakaleshwar) ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ‘ರಾಮಾಯಣ’ ಸಿನಿಮಾ (Ramayana) ಶೂಟಿಂಗ್‌ಗೂ ಮುನ್ನ ಯಶ್ ಶಿವನ ಮೊರೆ ಹೋಗಿದ್ದಾರೆ. ಇದನ್ನೂ ಓದಿ:ಪತ್ನಿ ರಾಧಿಕಾ ಪಂಡಿತ್ ಜೊತೆ ಮುಂಬೈನಲ್ಲಿ ಯಶ್
ಸದ್ಯ ಯಶ್ ‘ರಾಮಾಯಣ’ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈ ಹಿನ್ನೆಲೆ ಚಿತ್ರೀಕರಣಕ್ಕೆ ಭಾಗಿಯಾಗುವ ಮುನ್ನ ಯಶ್ ಶಿವನ ದೇಗುಲಕ್ಕೆ ಭೇಟಿ ನೀಡಿದ್ದಾರೆ. ದೇವರ ದರ್ಶನದ ಬಳಿನ ನಟ ಮಾತನಾಡಿ, ಬಹಳ ಖುಷಿ ಆಗುತ್ತಿದೆ. ಶಿವನ ಆಶೀರ್ವಾದ ಪಡೆಯಲು ಬಂದೆ. ನಾನು ಚಿಕ್ಕಂದಿನಿಂದ ಶಿವನ ದೊಡ್ಡ ಭಕ್ತ. ನಾವು ಮನೆದೇವರು ಎಂದು ಕರೆಯುತ್ತೇನೆ. ನಮ್ಮ ಕುಲದೇವರು ಶಿವ. ಇಲ್ಲಿಗೆ ಬಂದಿರುವುದು ಸಂತಸ ತಂದಿದೆ. ದೇವರ ಸನ್ನಿಧಿಯಲ್ಲಿ ಧ್ಯಾನ ಮಾಡುತ್ತಾ ಕುಳಿತಾಗ ಸಮಯ ಕಳೆದಿದ್ದೇ ಗೊತ್ತಾಗಲಿಲ್ಲ. ಅದ್ಭುತ ಅನುಭವ ಸಿಕ್ಕಿದೆ ಎಂದು ಯಶ್ ಹೇಳಿದ್ದಾರೆ. ಇದನ್ನೂ ಓದಿ:ಕನ್ನಡಕ್ಕೆ ಬಂದ್ರು ಕುಡ್ಲದ ಬೆಡಗಿ- ಸುದೀಪ್ ಸಿನಿಮಾದಲ್ಲಿ ಪೂಜಾ ಹೆಗ್ಡೆ
ಅಂದಹಾಗೆ, ಶೀಘ್ರದಲ್ಲೇ ‘ರಾಮಾಯಣ’ ಸಿನಿಮಾ ಶೂಟಿಂಗ್‌ನಲ್ಲಿ ಯಶ್ ಭಾಗಿಯಾಗಲಿದ್ದಾರೆ. ಇದರಲ್ಲಿ ಯಶ್ ರಾವಣನಾಗಿ ಅಬ್ಬರಿಸಲಿದ್ದಾರೆ. ಅದಷ್ಟೇ ಅಲ್ಲ, ಈ ಸಿನಿಮಾಗೆ ಸಹ-ನಿರ್ಮಾಪಕನಾಗಿ ಕೂಡ ಸಾಥ್ ನೀಡಿದ್ದಾರೆ. ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲಿವಿ ನಟಿಸುತ್ತಿದ್ದಾರೆ. ಎರಡು ಭಾಗಗಳಲ್ಲಿ ‘ರಾಮಾಯಣ’ ಮೂಡಿ ಬರಲಿದೆ.