ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam TerroristAttack) 27 ಹಿಂದೂಗಳನ್ನು ಕೊಂದಿರುವ ಉಗ್ರರ ನೀಚತನದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ (Yash) ರಿಯಾಕ್ಟ್ ಮಾಡಿದ್ದಾರೆ. ಮುಗ್ಧ ಜನರ ಕ್ರೂರ ಹತ್ಯೆಯಿಂದ ತೀವ್ರ ದುಃಖವಾಗಿದೆ ಎಂದು ಯಶ್ ಹೇಳಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ಉಗ್ರರ ಹೇಯ ಕೃತ್ಯ ಖಂಡಿಸಿದ ಶಿವಣ್ಣ, ರಶ್ಮಿಕಾ ಮಂದಣ್ಣ, ಅನುಷ್ಕಾ ಶರ್ಮಾ
ಯಶ್ ಎಕ್ಸ್‌ನಲ್ಲಿ ಪಹಲ್ಗಾಮ್‌ನಲ್ಲಿ ಮುಗ್ಧ ಜನರ ಕ್ರೂರ ಹತ್ಯೆಯಿಂದ ತೀವ್ರ ದುಃಖವಾಗಿದೆ. ಮುಗ್ಧ ಜನರ ಮೇಲಿನ ದಾಳಿಯನ್ನು ಊಹಿಸಲು ಸಾಧ್ಯವಿಲ್ಲ. ಈ ಭೀಕರ ದುರಂತದಲ್ಲಿ ಸಂತ್ರಸ್ತರ ಕುಟುಂಬಗಳು ಮತ್ತು ರಾಷ್ಟ್ರದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ಆಗಿದೆ: ಉಗ್ರರ ಕೃತ್ಯದ ಬಗ್ಗೆ ಅನುಪಮ್ ಖೇರ್ ಆಕ್ರೋಶ
Deeply saddened by the brutal killings of innocent people in Pahalgam. An attack on innocent individuals is beyond comprehension. Standing firmly with the victims’ families and the nation as we mourn this terrible tragedy.🙏
— Yash (@TheNameIsYash) April 23, 2025
ಮುಗ್ಧ ಜೀವಗಳು ಪಹಲ್ಗಾಮ್‌ನಲ್ಲಿ ಬಲಿಯಾಗಿರೋದು ಕೇಳಿ ಆಘಾತವಾಗಿದೆ. ಈ ದುರಂತದಲ್ಲಿ ದುಃಖದಲ್ಲಿರುವ ಕುಟುಂಬಕ್ಕೆ ನನ್ನ ಪ್ರಾರ್ಥನೆಗಳು ಎಂದು ನಟಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.