ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಮತ್ತು ಜ್ಯೂ.ಎನ್ಟಿಆರ್ (Jr.NTR) ಹೊಸ ಚಿತ್ರದ ಶೂಟಿಂಗ್ ಕುಮಟಾದ ಬೀಚ್ನಲ್ಲಿ ನಡೆಯುತ್ತಿದೆ. ಕುಮಟಾದ ಬೀಚ್ ಬಳಿ ಪ್ರಶಾಂತ್ ನೀಲ್ ಹಾಗೂ ತಾರಕ್ ಮಾತನಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ:ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅನುಷ್ಕಾ ಶೆಟ್ಟಿ ಬ್ಯುಸಿ
ಉತ್ತರ ಕನ್ನಡದ ಕಡಲ ಕಿನಾರೆಯಲ್ಲಿ ಜ್ಯೂ.ಎನ್ಟಿಆರ್ ಹೊಸ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಕುಮಟಾದ ಸುತ್ತಮುತ್ತಲಿನ ಕೆಲ ಸ್ಥಳಗಳಲ್ಲಿ ಅದ್ಧೂರಿಯಾಗಿ ಸೆಟ್ ಹಾಕಿ ಶೂಟಿಂಗ್ ಮಾಡಲಾಗುತ್ತಿದೆ. ಅದಷ್ಟೇ ಅಲ್ಲ, ಜ್ಯೂ.ಎನ್ಟಿಆರ್ ಬಗ್ಗೆ ಬಿಗ್ ಅಪ್ಡೇಟ್ವೊಂದು ಸಿಕ್ಕಿದೆ. ಈ ಚಿತ್ರಕ್ಕಾಗಿ ನಟ ದೇಹ ದಂಡಿಸಿದ್ದಾರೆ. ಈ ಪಾತ್ರಕ್ಕಾಗಿ 5 ತಿಂಗಳಲ್ಲಿ ಬರೋಬ್ಬರಿ 18 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಇದನ್ನೂ ಓದಿ: ಪ್ರಶಾಂತ್ ನೀಲ್, ಜ್ಯೂ.ಎನ್ಟಿಆರ್ ಸಿನಿಮಾದಲ್ಲಿ ಶ್ರುತಿ ಹಾಸನ್?
ಅಂದಹಾಗೆ, ಈ ಚಿತ್ರದ ಬಗ್ಗೆ ಮತ್ತೊಂದು ಇಂಟ್ರೆಸ್ಟಿಂಗ್ ವಿಚಾರವೊಂದು ಹರಿದಾಡುತ್ತಿದೆ. ಜ್ಯೂ.ಎನ್ಟಿಆರ್ ಜೊತೆ ಶ್ರುತಿ ಸ್ಪೆಷಲ್ ಸಾಂಗ್ಗೆ ಹೆಜ್ಜೆ ಹಾಕಲಿದ್ದಾರಂತೆ. ಹಾಗಂತ ಟಾಲಿವುಡ್ ಗಲ್ಲಿಯಲ್ಲಿ ಈ ವಿಷ್ಯ ಚರ್ಚೆಯಾಗ್ತಿದೆ. ಈ ಸುದ್ದಿ ನಿಜನಾ ಎಂಬುದನ್ನು ಚಿತ್ರತಂಡವೇ ಸ್ಪಷ್ಟಪಡಿಸಬೇಕಿದೆ.
Two MASS ENGINES ready to wreck it all from tomorrow 💥💥#NTRNeel will shake the shorelines of Indian cinema 🔥🔥
MAN OF MASSES @tarak9999 #PrashanthNeel @MythriOfficial @NTRArtsOfficial @NTRNeelFilm @TSeries @tseriessouth pic.twitter.com/psHgfYWuF1
— Mythri Movie Makers (@MythriOfficial) April 21, 2025
ಈಗಾಗಲ್ಲೇ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ನಲ್ಲಿ ಶ್ರುತಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಹೀಗಾಗಿ ತಾರಕ್ ಸಿನಿಮಾದಲ್ಲೂ ಅವರು ಕಾಣಿಸಿಕೊಂಡ್ರೆ ಪಡ್ಡೆಹುಡುಗರಿಗೆ ಹಬ್ಬ ಎಂದೇ ಹೇಳಬಹುದು. ಎಲ್ಲದ್ದಕ್ಕೂ ಚಿತ್ರತಂಡ ಘೋಷಿಸುವರೆಗೂ ಕಾದುನೋಡಬೇಕಿದೆ.
ಈ ಸಿನಿಮಾದಲ್ಲಿ ಜ್ಯೂ.ಎನ್ಟಿಆರ್ಗೆ ಕನ್ನಡದ ನಟಿ ರುಕ್ಮಿಣಿ ವಸಂತ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನಲಾದ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆಯೂ ಚಿತ್ರತಂಡದ ಕಡೆಯಿಂದ ಅಫಿಷಿಯಲ್ ಅಪ್ಡೇಟ್ ಸಿಕ್ಕಿಲ್ಲ. ಮುಂದಿನ ವರ್ಷ ಜ.9ರಂದು ಸಿನಿಮಾ ರಿಲೀಸ್ ಮಾಡೋದಾಗಿ ಚಿತ್ರತಂಡ ತಿಳಿಸಿದೆ.