‘ಕೆಜಿಎಫ್ 2′ ಹಿಟ್ ಆದ್ಮೇಲೆ ಸಂಜಯ್ ದತ್‌ಗೆ (Sanjay Dutt) ಸೌತ್‌ನಲ್ಲಿ ಬೇಡಿಕೆ ಹೆಚ್ಚಾಗಿದೆ. ಬಾಲಿವುಡ್‌ಗಿಂತ ದಕ್ಷಿಣದ ಸಿನಿಮಾಗಳಿಗೆ ನಟ ಹೆಚ್ಚು ಪ್ರಾಮುಖ್ಯತೆ ಕೊಡ್ತಿದ್ದಾರೆ. ಸದ್ಯ ಪ್ರಭಾಸ್ (Prabhas) ನಟನೆಯ ಹೊಸ ಸಿನಿಮಾದಲ್ಲಿ ಸಂಜಯ್ ದತ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾದ ಸುದ್ದಿಯೊಂದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:’ಸಿಕಂದರ್’ ಚಿತ್ರದ ಟ್ರೈಲರ್‌ನಲ್ಲಿ ಮಿಂಚಿದ ಕನ್ನಡಿಗ ಕಿಶೋರ್
ಸೌತ್‌ನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಸಂಜಯ್ ದತ್ ಬ್ಯುಸಿಯಾಗಿದ್ದಾರೆ. ಸದ್ಯ ‘ಅನಿಮಲ್’ (Animal) ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ನಲ್ಲಿ ಪ್ರಭಾಸ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಸಿನಿಮಾದಲ್ಲಿ ಸಂಜಯ್ ದತ್ ಅವರು ಪ್ರಭಾಸ್‌ಗೆ ಅಣ್ಣನಾಗಿ ಬಣ್ಣ ಹಚ್ಚಲಿದ್ದಾರೆ ಎನ್ನಲಾದ ಸುದ್ದಿಯೊಂದು ಟಾಲಿವುಡ್‌ನಲ್ಲಿ ಕೇಳಿ ಬರುತ್ತಿದೆ.
ಸಂದೀಪ್ ಮಾರ್ಕ್ ಅನ್ನೋ ಪಾತ್ರಕ್ಕೆ ಸಂಜಯ್‌ರನ್ನು ಚಿತ್ರತಂಡ ಸಂಪರ್ಕಿಸಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ನಟನಾಗಲಿ, ಚಿತ್ರತಂಡದ ಕಡೆಯಿಂದ ಆಗಲಿ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಅದಷ್ಟೇ ಅಲ್ಲ, ಪ್ರಭಾಸ್ ನಟನೆಯ ರಾಜಾ ಸಾಬ್ ಸಿನಿಮಾದಲ್ಲೂ ಸಂಜಯ್ ದತ್ ವಿಲನ್ ಆಗಿ ನಟಿಸಿದ್ದಾರೆ ಎಂಬ ಸುದ್ದಿ ಕೂಡ ಇದೆ. ಚಿತ್ರತಂಡದ ಕಡೆಯಿಂದ ಅಫಿಷಿಯಲ್ ಅಪ್‌ಡೇಟ್ ಸಿಗುವವರೆಗೂ ಕಾದುನೋಡಬೇಕಿದೆ.
ಇನ್ನೂ ಕನ್ನಡದ ನಟ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸಂಜಯ್ ದತ್ ಪವರ್‌ಫುಲ್ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ರಿಲೀಸ್‌ಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ.