ನ್ಯಾಷನಲ್ ಸ್ಟಾರ್ ಯಶ್ (Yash) ‘ಟಾಕ್ಸಿಕ್’ ಸಿನಿಮಾದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೆಲ್ಲದರ ನಡುವೆ ಬಾಲಿವುಡ್ ‘ರಾಮಾಯಣ’ (Ramayana) ಸಿನಿಮಾದ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಈ ಮೂಲಕ ರಾಕಿಂಗ್ ಸ್ಟಾರ್ ಯಶ್ ಫ್ಯಾನ್ಸ್‌ಗೆ ಸಿಹಿ ಸುದ್ದಿ ಸಿಕ್ಕಿದೆ. ಇದನ್ನೂ ಓದಿ:ಶೂಟಿಂಗ್ ಮುಗಿಸಿದ ದುಷ್ಯಂತ್, ಆಶಿಕಾ ನಟನೆಯ ‘ಗತವೈಭವ’ ಸಿನಿಮಾ
‘ಟಾಕ್ಸಿಕ್’ ಸಿನಿಮಾ ಕೆಲಸ ಭರದಿಂದ ನಡೆಯುತ್ತಿದೆ. ಮುಂಬೈ, ಗೋವಾ ಸೇರಿದಂತೆ ಹಲವೆಡೆ ಈ ಚಿತ್ರದ ಶೂಟಿಂಗ್ ಮಾಡಲಾಗುತ್ತಿದೆ. ಈ ಚಿತ್ರದ ಕೆಲಸದ ನಡುವೆ ಇದೀಗ ರಾವಣನಾಗಿ ಅಬ್ಬರಿಸಲು ಯಶ್ ತಯಾರಿ ಮಾಡಿಕೊಳ್ಳುತ್ತಿದ್ದಾರೆ.
ರಣ್‌ಬೀರ್ ಕಪೂರ್, ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಚಿತ್ರದಲ್ಲಿ ರಾವಣನಾಗಿ ನಟಿಸುವ ಬಗ್ಗೆ ಈಗಾಗಲೇ ಯಶ್ ಅಧಿಕೃತವಾಗಿ ತಿಳಿಸಿದ್ದಾರೆ. ಇದೇ ಮಾರ್ಚ್‌ನಲ್ಲಿ ಯಶ್ ‘ರಾಮಾಯಣ’ ಚಿತ್ರತಂಡವನ್ನು ಸೇರಿಕೊಳ್ಳಿದ್ದಾರೆ. ಅದಕ್ಕಾಗಿ ತೆರೆಮರೆಯಲ್ಲಿ ಭಾರೀ ತಯಾರಿ ನಡೆಯುತ್ತಿದೆ ಎಂದು ಮಾಧ್ಯಮವೊಂದು ತಿಳಿಸಿದೆ.
ಇನ್ನೂ ‘ರಾಮಾಯಣ’ ಸಿನಿಮಾಗೆ ಸಹ ನಿರ್ಮಾಪಕನಾಗಿಯೂ ಕೂಡ ಅವರು ಸಾಥ್ ನೀಡುತ್ತಿದ್ದಾರೆ. ಹಾಗಾಗಿ ಈ ಸಿನಿಮಾದ ಮೇಲೆ ಕೂಡ ಭಾರೀ ನಿರೀಕ್ಷೆಯಿದೆ.