ಯಶ್ ನಟನೆಯ ಕೆಜಿಎಫ್ 2 ಸಿನಿಮಾದ ‘ತೂಫಾನ್’ ಹಾಡಿಗೆ ಅಭಿಮಾನಿಗಳು ಕಾದಿದ್ದರು. ಕೊನೆಗೂ ಅಂದುಕೊಂಡ ವೇಳೆಗೆ ಹಾಡನ್ನು ರಿಲೀಸ್ ಮಾಡಿದೆ ಹೊಂಬಾಳೆ ಫಿಲ್ಮಸ್. ಇದು ಕೆಜಿಎಫ್ 2 ಸಿನಿಮಾದ ಬಿಡುಗಡೆ ಆಗುತ್ತಿರುವ ಮೊದಲ ಹಾಡಾಗಿದ್ದರಿಂದ, ಯಾವ ರೀತಿಯ ಸಾಂಗ್ ಇರಬಹುದು ಎನ್ನುವ ಕುತೂಹಲ ಇದ್ದೇ ಇತ್ತು. ಅದಕ್ಕೀಗ ತೆರೆ ಬಿದ್ದಿದೆ.
ಇದೊಂದು ನಾಯಕನ ಬಿಲ್ಡ್ ಅಪ್ ರೀತಿಯ ಗೀತೆಯಾಗಿದ್ದು, ರವಿ ಬಸ್ರೂರು ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿದೆ. ರವಿ ಅವರೇ ಸಾಹಿತ್ಯ ಬರೆದದ್ದು ಮತ್ತೊಂದು ವಿಶೇಷ. ಮತ್ತೊಂದು ವಿಶೇಷ ಅಂದರೆ, ಇದೇ ಮೊದಲ ಬಾರಿಗೆ ಇಷ್ಟೊಂದು ಗಾಯಕರು ಒಟ್ಟಿಗೆ ಸೇರಿ ಸಿನಿಮಾ ಹಾಡೊಂದನ್ನು ಹಾಡಿದ್ದಾರೆ. ಇದನ್ನೂ ಓದಿ : ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು
ಸಂತೋಷ್ ವೆಂಕಿ, ಮೋಹನ್ ಕೃಷ್ಣ, ಸಚಿನ್ ಬಸ್ರೂರು, ಪುನೀರ್ ರುದ್ರನಾಗ್, ವರ್ಷ ಆಚಾರ್ಯ ಜತೆ ಬಾಲ ಗಾಯಕರಾದ ಗಿರಿಧರ್ ಕಾಮತ್, ಸಚಿನ್ ಕಾಮತ್, ನಿಶಾಂತ್ ಕಿಣಿ, ಭರತ್ ಭಟ್, ಅನಘ ನಾಯಕ್, ಅವಿನಿ ಭಟ್, ಸ್ವಾತಿ ಕಾಮತ್, ಶಿವಾನಂದ್ ನಾಯಕ್, ಕೀರ್ತನ್ ಬಸ್ರೂರು ಈ ಹಾಡಿಗೆ ಧ್ವನಿಯಾಗಿದ್ದಾರೆ. ಇದನ್ನೂ ಓದಿ: ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮ
ಸರ್ರಂತ ಸುಡುವ ಜ್ವಾಲಾಗ್ನಿ ಎಂದು ಶುರುವಾಗುವ ಈ ಗೀತೆಯು ನಾಯಕನ ಹೀರೋಯಿಸಂ ಅನ್ನು ಬಿಂಬಿಸುತ್ತಾ ಹೋಗುತ್ತದೆ. ಕಥಾ ನಾಯಕನ ಒಂದು ರೀತಿಯ ಚರಿತ್ರೆಯಾಗಿಯೂ ಈ ಹಾಡಿನಲ್ಲಿ ಕಟ್ಟಿ ಕೊಡುತ್ತಾ ಹೋಗಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್. ಲಹರಿ ಮ್ಯೂಸಿಕ್ ನಲ್ಲಿ ಈ ಹಾಡು ಬಿಡುಗಡೆ ಆಗಿದ್ದು, ರಿಲೀಸ್ ಆದ ಕೆಲವೇ ಗಂಟೆಗಳಲ್ಲೇ ಟ್ರೆಂಡ್ ಕ್ರಿಯೇಟ್ ಮಾಡಿದೆ. ಕನ್ನಡದಲ್ಲಿ ಮಾತ್ರವಲ್ಲ, ತಮಿಳು, ತೆಲುಗು, ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲೂ ಈ ಹಾಡು ರಿಲೀಸ್ ಆಗಿದೆ.