ಇಂದು ಸಂಜೆ 6.40ಕ್ಕೆ ಯಶ್ ನಟನೆಯ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಐದು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಹಾಗಾಗಿ ಐದು ಭಾಷೆಯಲ್ಲೂ ಏಕಕಾಲಕ್ಕೆ ಟ್ರೈಲರ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ
Advertisement
ತೆಲುಗಿನ ಖ್ಯಾತ ನಟ ರಾಮ್ ಚರಣ್ ತೇಜ ಕೆಜಿಎಫ್ 2 ತೆಲುಗು ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದರೆ, ತಮಿಳಿನ ಖ್ಯಾತ ನಟ ಸೂರ್ಯ ಕೆಜಿಎಫ್ 2 ತಮಿಳು ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಈ ಟ್ರೈಲರ್ ರಿಲೀಸ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಯಶ್ ಅಭಿಮಾನಿಗಳು ರಾಜ್ಯದ ನಾನಾ ಕಡೆ ಹಬ್ಬದಂತೆ ಆಚರಿಸುತ್ತಿದ್ದಾರೆ. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ
Advertisement
Advertisement
ಅವತ್ತು ಬೆಂಗಳೂರಿಗೆ ಪ್ರತಿಷ್ಠತ ಸ್ಟಾರ್ ಹೋಟೆಲ್ ನಲ್ಲಿ ಕೇವಲ ಮಾಧ್ಯಮ ಗೋಷ್ಠಿ ಮಾಡುವ ಮೂಲಕ ಟ್ರೇಲರ್ ಬಿಡುಗಡೆ ಆಗುತ್ತಿದ್ದು ಭಾರತೀಯ ಭಾಷೆಯ 180ಕ್ಕೂ ಹೆಚ್ಚು ಬೇರೆ ಭಾಷೆಯ ಪತ್ರಕರ್ತರು ಅಂದು ಟ್ರೇಲರ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಸಂಜೆ 6.45ಕ್ಕೆ ಟ್ರೇಲರ್ ಬಿಡುಗಡೆ ಆಗಲಿದ್ದು, ಚಿತ್ರತಂಡದ ಪ್ರಮುಖ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡದ ಹೆಸರಾಂತ ನಟರು ಹಾಗೂ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್ ಜೊತೆ ‘ಜೇಮ್ಸ್’ ವೀಕ್ಷಿಸಿದ ಶಿವಣ್ಣ ದಂಪತಿ – ಏನ್ ಹೇಳಲಿ ನನ್ನ ತಮ್ಮನ ಆ್ಯಕ್ಟಿಂಗ್ ಬಗ್ಗೆ
Advertisement
ಅತಿಥಿಗಳು ಯಾರು?
ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಶಿವರಾಜ್ ಕುಮಾರ್ ಆಗಮಿಸುತ್ತಿದ್ದು, ಸಿನಿಮಾದ ಕಲಾವಿದರಾದ ಬಾಲಿವುಡ್ ನಟ ಸಂಜಯ್ ದತ್, ಮಲಯಾಳಂ ಹೆಸರಾಂತ ನಟ ಪೃಥ್ವಿರಾಜ್, ಬಾಲಿವುಡ್ ನಟಿ ರವೀನಾ ಟಂಡನ್, ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ವೇದಿಕೆಯ ಮೇಲೆ ಇರಲಿದ್ದಾರೆ. ಇದನ್ನು ಓದಿ : ಮತ್ತೆ ನಟನೆಗೆ ಮರಳಿದ ಮಾಲಾಶ್ರೀ
7 ಸಾವಿರ ಚಿತ್ರಮಂದಿರದಲ್ಲಿ ಸಿನಿಮಾ ರಿಲೀಸ್
ಕೆಜಿಎಫ್ 2 ಸಿನಿಮಾ ಕನ್ನಡ, ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗುತ್ತಿದ್ದು ವಿಶ್ವದಾದ್ಯಂತ ಏಳು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಮಾಡಲಾಗಿದೆ ಅಂತಾರೆ ನಿರ್ಮಾಪಕ ವಿಜಯ್ ಕಿರಗಂದೂರು. ಕರ್ನಾಟಕದಲ್ಲೇ 450ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆದರೆ, ತಮಿಳಿನಲ್ಲಿ ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೆಜಿಎಫ್ 2 ಪ್ರದರ್ಶನ ಕಾಣಲಿದೆ. ಹಾಗೆಯೇ ವಿವಿಧ ಭಾಷೆಯ ಚಿತ್ರಮಂದಿರಗಳಲ್ಲಿ ಸಾವಿರ ಸಾವಿರ ಥಿಯೇಟರ್ ನಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿರುವುದು ವಿಶೇಷ.