ಬಾಲಿವುಡ್ ನಟಿ ಮೌನಿ ರಾಯ್ (Mouni Roy) ಪತಿಯಿಂದಲೇ ಆರ್ಥಿಕವಾಗಿ ಮೋಸ ಹೋಗಿದ್ದಾರೆ. ಈ ಕಾರಣದಿಂದಲೇ ಅವರ ಸಂಬಂಧದ ನಡುವೆ ಬಿರುಕು ಮೂಡಿದೆ ಎಂದು ಹೇಳಲಾಗುತ್ತಿದೆ.
ಬಾಲಿವುಡ್ ನಟಿ ಮೌನಿ ರಾಯ್ ಮತ್ತು ಉದ್ಯಮಿ ಸೂರಜ್ ನಂಬಿಯಾರ್ (Suraj Nambiar) ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ಇಬ್ಬರೂ ಇನ್‌ಸ್ಟಾಗ್ರಾಂನಲ್ಲಿ ಪರಸ್ಪರ ಅನ್‌ಫಾಲೋ ಮಾಡಿಕೊಂಡಿದ್ದು, ಮೌನಿ ತಮ್ಮ ಪತಿಯೊಂದಿಗಿನ ಹಳೆಯ ಫೋಟೋಗಳನ್ನು ಡಿಲೀಟ್ ಮಾಡಿರುವುದು ಈ ವದಂತಿಗಳಿಗೆ ಮತ್ತಷ್ಟು ಬಲ ನೀಡಿದೆ.

ಕೆಲವು ಮಾಧ್ಯಮ ವರದಿಗಳ ಪ್ರಕಾರ, ಸೂರಜ್ ನಂಬಿಯಾರ್ ಮೌನಿಯನ್ನು ಆರ್ಥಿಕವಾಗಿ ದುರುಪಯೋಗ ಮಾಡಿಕೊಂಡಿದ್ದಾರೆ ಹಾಗೂ ಖ್ಯಾತಿಗಾಗಿ ಅವರನ್ನು ಬಳಸಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಇಬ್ಬರೂ ಈಗ ಒಟ್ಟಿಗೆ ವಾಸಿಸುತ್ತಿಲ್ಲ ಎಂಬ ಸುದ್ದಿಯೂ ಹರಿದಾಡುತ್ತಿದೆ. ಆದರೆ ಈ ಎಲ್ಲ ಆರೋಪಗಳು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.
ಈ ಕುರಿತು ಮೌನಿ ಅಥವಾ ಸೂರಜ್ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಊಹಾಪೋಹಗಳ ನಡುವೆ ಮೌನಿ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ನಮಗೆ ಸ್ವಲ್ಪ ಗೌಪ್ಯತೆ ಮತ್ತು ಸಮಯ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಅಭಿಮಾನಿಗಳು ಗಮನಿಸಿದ ಮತ್ತೊಂದು ವಿಚಾರವೆಂದರೆ, ಸೂರಜ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯನ್ನೇ ಅಳಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಮೌನಿ ಅವರ ಪ್ರೊಫೈಲ್‌ನಲ್ಲೂ ಮದುವೆ ಹಾಗೂ ಜೋಡಿಯ ಫೋಟೋಗಳು ಕಾಣಿಸದಿರುವುದು ಚರ್ಚೆಗೆ ಕಾರಣವಾಗಿದೆ.

ಮೌನಿ ರಾಯ್ ಮತ್ತು ಸೂರಜ್ ನಂಬಿಯಾರ್ 2022ರ ಜನವರಿ 27ರಂದು ಗೋವಾದಲ್ಲಿ ಮದುವೆಯಾಗಿದ್ದರು. ಮಲಯಾಳಿ ಹಾಗೂ ಬಂಗಾಳಿ ಸಂಪ್ರದಾಯದಂತೆ ನಡೆದ ಈ ಮದುವೆ ಸಾಕಷ್ಟು ಗಮನ ಸೆಳೆದಿತ್ತು. ಇಬ್ಬರೂ ಮದುವೆಗೆ ಮೊದಲು ಸುಮಾರು ಮೂರು ವರ್ಷಗಳ ಕಾಲ ಡೇಟಿಂಗ್ ಮಾಡುತ್ತಿದ್ದರು.
ಟಿವಿ ಕ್ಷೇತ್ರದಲ್ಲಿ ಖ್ಯಾತಿ ಪಡೆದಿರುವ ಮೌನಿ, ‘ನಾಗಿನ್’, ‘ದೇವೋನ್ ಕೆ ದೇವ್ ಮಹಾದೇವ್’ ಸೇರಿದಂತೆ ಹಲವು ಧಾರಾವಾಹಿಗಳ ಮೂಲಕ ಜನಪ್ರಿಯತೆ ಗಳಿಸಿದ್ದಾರೆ. ಜೊತೆಗೆ ‘ಗೋಲ್ಡ್’, ‘ಮೇಡ್ ಇನ್ ಚೈನಾ’ ಸಿನಿಮಾಗಳಲ್ಲೂ ನಟಿಸಿದ್ದಾರೆ ಕೆಜಿಎಫ್ ಸಿನಿಮಾದಲ್ಲಿಯೂ ಸಹ ಇವರು ‘ಗಲಿ ಗಲಿ ಮೇ’ ಸಾಂಗ್‌ಗೆ ಹೆಜ್ಜೆ ಹಾಕಿದ್ದರು.

