-ದೇಶಾದ್ಯಂತ ಕೆಜಿಎಫ್ ಸಂಚಲನ
ಬೆಂಗಳೂರು: ರಾಕಿಂಗ್ ಸ್ಟಾರ್ ಅಭಿನಯದ ಕೆಜಿಎಫ್ ಸಿನಿಮಾ ಭಾರತದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಳ್ಳುವ ಮೂಲಕ ದೇಶಾದ್ಯಂತ ಸಂಚಲನ ಮೂಡಲಾರಂಭಿಸಿದೆ.
ಖ್ಯಾತ ಸಿನಿಮಾ ಡೇಟಾಬೇಸ್ ವೆಬ್‍ಸೈಟ್ ಇಂಟರ್ ನೆಟ್ ಮೂವಿ ಡೇಟಾ ಬೇಸ್(ಐಎಂಡಿಬಿ) ಪಟ್ಟಿಯಲ್ಲಿ ಕೆಜಿಎಫ್ ಎರಡನೇ ಸ್ಥಾನ ಪಡೆದುಕೊಳ್ಳುವ ಮೂಲಕ ಬಾಲಿವುಡ್ ಬಾದ್‍ಶಾ ಶಾರೂಖ್ ಖಾನ್ ಅಭಿನಯದ ಸಿನಿಮಾವನ್ನು ಹಿಂದಿಕ್ಕಿದೆ. ತೆಲುಗಿನ ವಿಜಯ್ ದೇವರಕೊಂಡ ಅಭಿನಯದ ಟ್ಯಾಕ್ಸಿವಾಲಾ ಮೂರನೇ ಸ್ಥಾನದಲ್ಲಿದೆ. ಝೀರೋ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ರಜಿನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅಭಿನಯದ 2.0 ಮೊದಲ ಸ್ಥಾನದಲ್ಲಿದೆ.
Advertisement
Advertisement
ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಕೆಜಿಎಫ್ ಒಟ್ಟು ಐದು ಭಾಷೆಗಳಲ್ಲಿ ನಿರ್ಮಾಣಗೊಂಡಿವೆ. ಡಿಸೆಂಬರ್ 21ರಂದು ಚಿತ್ರ ತೆರೆಕಾಣಲಿದೆ. ಶಾರೂಖ್ ಖಾನ್ ಅಭಿನಯದ ಝೀರೋ ಸಿನಿಮಾ ಸಹ ಡಿಸೆಂಬರ್ 21ರಂದು ತೆರೆಕಾಣಲಿದೆ. ಈಗಾಗಲೇ ಎರಡು ಚಿತ್ರಗಳು ಟ್ರೇಲರ್ ಮೂಲಕ ತನ್ನದೇ ಗುರುತನ್ನು ಸಿನಿ ಅಂಗಳದಲ್ಲಿ ಮೂಡಿಸುವ ಪ್ರಯತ್ನ ಮಾಡಿವೆ. ನವೆಂಬರ್ 9ರಂದು ಬಿಡುಗಡೆ ಆಗಿರುವ ಕನ್ನಡದ ಕೆಜಿಎಫ್ ಟ್ರೇಲರ್ ಇದೂವರೆಗೂ 71 ಲಕ್ಷಕ್ಕೂ ಅಧಿಕ ವ್ಯೂವ್ ಪಡೆದುಕೊಂಡಿದೆ. ತೆಲುಗು ಭಾಷೆಯ ಟ್ರೇಲರ್ 45 ಲಕ್ಷಕ್ಕೂ ಅಧಿಕ ಮತ್ತು ಹಿಂದಿ ಭಾಷೆಯ ಟ್ರೇಲರ್ 95 ಲಕ್ಷಕ್ಕೂ ಅಧಿಕ ವ್ಯೂವ್ ಪಡೆದುಕೊಂಡಿದೆ.
Advertisement
ನವೆಂಬರ್ 2ರಂದು ಬಿಡುಗಡೆ ಆಗಿರುವ ಝೀರೋ ಸಿನಿಮಾ ಇದೂವರೆಗೂ 8 ಕೋಟಿಗೂ ಅಧಿಕ ಬಾರಿ ವೀಕ್ಷಣೆಯಾಗಿದೆ. ಯಶ್ ಅಭಿನಯದ ಈ ಚಿತ್ರ ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್ ಅಭಿನಯದ ಝೀರೋ ಚಿತ್ರಕ್ಕೆದುರಾಗಿ ಬಿಡುಗಡೆಯಾಗಲಿದೆ ಎಂಬ ವಿಚಾರ ತಿಳಿಯುತ್ತಲೇ ಅನೇಕರು ಲೇವಡಿಯಾಡಿದ್ದೂ ಇದೆ. ಆದರೆ ಇದೀಗ ಕೆಜಿಎಫ್ ಟ್ರೇಲರ್ ಬಾಲಿವುಡ್ ಮಟ್ಟದಲ್ಲಿಯೂ ಸಂಚಲನ ಸೃಷ್ಟಿಸಿದೆ. ಇದುವೇ ಈ ಚಿತ್ರದ ಗೆಲುವಿನ ಭವಿಷ್ಯವನ್ನೂ ಹೇಳುತ್ತಿದೆ.
Advertisement
ಭೂಗತ ಲೋಕದ ಕರಾಳ ಸತ್ಯವನ್ನು ಕೆಜಿಎಫ್ ತೋರಿಸಲಿದೆ ಎಂಬುವುದನ್ನು ಟ್ರೇಲರ್ ಸಾರಿ ಸಾರಿ ಹೇಳುತ್ತಿದೆ. ಓರ್ವ ಕಥಾನಾಯಕನ ಜೀವನದ ಏರುಪೇರುಗಳನ್ನು ತುಂಬಾ ಸ್ಪಷ್ಟವಾಗಿ ಪ್ರಶಾಂತ್ ನೀಲ್ ತೋರಿಸುವ ಪ್ರಯತ್ನ ಟ್ರೇಲರ್ ನಲ್ಲಿ ಕಾಣುತ್ತಿದೆ. ಇನ್ನು ಟೀಸರ್ ಆರಂಭದಲ್ಲಿ ಕೇಳಿಬರುವ ಹಿನ್ನೆಲೆ ಧ್ವನಿ ಟ್ರೇಲರ್ ನಲ್ಲಿ ನೋಡುಗರಲ್ಲಿ ರೋಮ ರೋಮಗಳಲ್ಲಿ ರೋಮಾಂಚನ ಮಾಡುವಲ್ಲಿ ಯಶ್ವಸಿಯಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews