ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಯಶ್ ನಟನೆಯ `ಕೆಜಿಎಫ್’ (KGF 1) ಸಿನಿಮಾಗೆ 4 ವರ್ಷಗಳ ಸಂಭ್ರಮವಾಗಿದ್ದು, ಈ ಸುದಿನದ ಬಗ್ಗೆ ಹೊಂಬಾಳೆ ಫಿಲ್ಮ್ಸ್(Homabale Films) ಮೆಲುಕು ಹಾಕಿದೆ. ಈ ಕುರಿತು ಹೊಂಬಾಳೆ ಸಂಸ್ಥೆ ವಿಶೇಷ ಪೋಸ್ಟ್‌ವೊಂದನ್ನ ಶೇರ್ ಮಾಡಿದ್ದಾರೆ. ಇದನ್ನೂ ಓದಿ: `ತೂತು ಮಡಿಕೆ’ ನಂತರ ಮತ್ತೆ ಆ್ಯಕ್ಷನ್ ಕಟ್ ಹೇಳೋಕೆ ಚಂದ್ರ ಕೀರ್ತಿ ರೆಡಿ
`ಉಗ್ರಂ’ ಚಿತ್ರದ ನಂತರ ಕೆಲ ವರ್ಷಗಳ ಸ್ಕ್ರಿಪ್ಸ್ ವರ್ಕ್ ಮಾಡಿ, ಮಾಸ್ಟರ್ ಮೈಂಡ್ ಪ್ರಶಾಂತ್ ನೀಲ್ ಕಲ್ಪನೆಯಂತೆ ಕೆಜಿಎಫ್ ಚಾಪ್ಟರ್ 1 ತೆರೆಯ ಮೇಲೆ ತೋರಿಸುವಲ್ಲಿ ಯಶಸ್ವಿಯಾಗಿದ್ದರು. ಡಿ. 21, 2018ರಂದು ತೆರೆಯ ಮೇಲೆ ಯಶ್ (Yash) ಸಿನಿಮಾ ಅಬ್ಬರಿಸಿತ್ತು. ಈ ವಿಶೇಷ ದಿನವನ್ನ ನೆನೆದು ಹೊಂಬಾಳೆ ಫಿಲ್ಮ್ಸ್ ಚಿತ್ರದ ಕುರಿತು ಪೋಸ್ಟ್ ಮಾಡಿದ್ದಾರೆ. ಸಿನಿಮಾ ಬೆಂಬಲಿಸಿದ, ಸಿನಿಮಾ ಕನಸಿಗೆ ಸಾಥ್ ಕೊಟ್ಟಿರುವ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದಲ್ಲೇ ಈ ಸಿನಿಮಾ ನೂರಾರು ಕೋಟಿ ಬಿಸ್ನೆಸ್ ಮಾಡಿತು. ಬಾಲಿವುಡ್‌ನಲ್ಲೂ ಈ ಸಿನಿಮಾ ರಿಲೀಸ್ ಮಾಡಲಾಯಿತು. ಹಿಂದಿಯಲ್ಲಿ ಈ ಚಿತ್ರ 44 ಕೋಟಿ ರೂಪಾಯಿ ಬಾಚಿತ್ತು. ಕನ್ನಡದ ಸಿನಿಮಾವೊಂದು ಬಾಲಿವುಡ್‌ನಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿದ್ದು ಅದೇ ಮೊದಲಾಗಿತ್ತು. ಹೀಗೆ ಈ ಚಿತ್ರದಿಂದ ದೊಡ್ಡ ಇತಿಹಾಸವೇ ಸೃಷ್ಟಿ ಆಯಿತು.
View this post on Instagram
ʻಕೆಜಿಎಫ್ʼ (Kgf) ಚಿತ್ರದಲ್ಲಿ ಯಶ್ ಪಾತ್ರ ಸಖತ್ ಹೈಲೈಟ್ ಆಯಿತು. ರಾಕಿ ಆಗಿ ಅವರು ಮಿಂಚಿದರು. ಶ್ರೀನಿಧಿ ಶೆಟ್ಟಿ (Srinidhi Shetty) ಅವರು ಚೊಚ್ಚಲ ಚಿತ್ರದಲ್ಲೇ ಗಮನ ಸೆಳೆದರು. ಈ ವಿಶೇಷ ದಿನಕ್ಕೆ ಈಗ ನಾಲ್ಕು ವರ್ಷ ತುಂಬಿದೆ. ಈ ವಿಶೇಷ ದಿನವನ್ನು ಹೊಂಬಾಳೆ ಫಿಲ್ಮ್ಸ್ ನೆನಪಿಸಿಕೊಂಡಿದೆ.