Connect with us

Bengaluru City

ಕೆಜಿಎಫ್ ಚಾಪ್ಟರ್-2 ಶುರುವಾಯ್ತು!

Published

on

ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ಲಾಂಛನದಲ್ಲಿ ಮೂಡಿಬಂದಿದ್ದ ಕೆಜಿಎಫ್ ಸಿನಿಮಾ ಇಡೀ ಭಾರತೀಯ ಚಿತ್ರರಂಗ ಮಾತ್ರವಲ್ಲ, ಜಾಗತಿಕ ಸಿನಿಮಾ ಜಗತ್ತು ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದು ಎಲ್ಲರಿಗೂ ತಿಳಿದಿರುವ ವಿಚಾರ. ಈ ಚಿತ್ರದ ತಾಂತ್ರಿಕ ಶ್ರೀಮಂತಿಕೆ, ಕ್ರಿಯಾಶೀಲತೆ, ಕಲಾವಿದರ ನೈಪುಣ್ಯತೆಯನ್ನು ಕಂಡು ಎಲ್ಲರೂ ಬೆರಗಾಗಿದ್ದರು.

ಕೆಜಿಎಫ್ ಚಿತ್ರವನ್ನು ಅಷ್ಟು ದೊಡ್ಡ ಮಟ್ಟಕ್ಕೆ ಕೊಂಡೊಯ್ದಿದ್ದ ನಿರ್ಮಾಪಕ ವಿಜಯ ಕಿರಗಂದೂರು ಅವರ ನಿರ್ಮಾಣದಲ್ಲಿ ಕೆ.ಜಿ.ಎಫ್ ಚಾಪ್ಟರ್ 2 ಇಂದು ಮುಹೂರ್ತ ಆಚರಿಸಿಕೊಂಡಿದೆ. ಮಹಾಲಕ್ಷ್ಮಿ ಲೇಔಟ್‍ನಲ್ಲಿರುವ ಕೋದಂಡರಾಮ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಕಂಠೀರವ ಸ್ಟುಡಿಯೋದಲ್ಲಿ ಕ್ಲಾಪ್ ಮಾಡುವ ಮಾಡುವ ಚಿತ್ರೀಕರಣ ಆರಂಭವಾಗಿದೆ. ನಿರ್ದೇಶಕ ಪ್ರಶಾಂತ್ ಅವರ ತಾಯಿ ಭಾರತಿ ಸುಭಾಷ್ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು. ನಿರ್ಮಾಪಕ ವಿಜಯ್ ಕಿರಗಂದೂರು ಅವರ ಸಹೋದರ ಮಂಜಣ್ಣ ಕ್ಲಾಪ್ ಮಾಡಿದರು. ಕೆ.ಜಿ.ಎಫ್ ಚಾಪ್ಟರ್ 2 ಚಿತ್ರ ಏಪ್ರಿಲ್ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

ಪ್ರಶಾಂತ್ ನೀಲ್ ಕಥೆ ಚಿತ್ರಕಥೆ, ನಿರ್ದೇಶನ, ಸಂಭಾಷಣೆ, ಚಂದ್ರಮೌಳಿ, ಕೆ.ಭುವನ್ ಛಾಯಾಗ್ರಹಣ, ರವಿ ಬಸ್ರೂರ್ ಸಂಗೀತ, ಶಿವಕುಮಾರ್ ಕಲಾ ನಿರ್ದೇಶನ ಇರುವ ಈ ಚಿತ್ರಕ್ಕೆ ಕಾರ್ತಿಕ್ ಮತ್ತು ರಾಮರಾವ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ, ಚಂಪಕಧಾಮ ಬಾಬು, ಕುಮಾರ್, ಗಗನ್ ಮೂರ್ತಿ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.

ತಾರಾಗಣದಲ್ಲಿ ರಾಕಿಂಗ್ ಸ್ಟಾರ್ ಯಶ್, ಅನಂತ್ ನಾಗ್, ಶ್ರೀನಿಧಿ ಶೆಟ್ಟಿ, ಮಾಳವಿಕಾ, ಮಾಸ್ಟರ್ ಅನಮೋಲ್, ನಾಗಾಭರಣ, ಗೋವಿಂದೇಗೌಡ, ಅವಿನಾಶ್, ರಾಮ್, ಲಕ್ಕಿ, ಅಯ್ಯಪ್ಪ ಶರ್ಮ ಮುಂತಾದವರಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Click to comment

Leave a Reply

Your email address will not be published. Required fields are marked *