Bengaluru City

ಕೆಜಿಎಫ್ 2 ಚಿತ್ರೀಕರಣದ ಫೋಟೋ ವೈರಲ್ 

Published

on

Share this

ಬೆಂಗಳೂರು: ಇಡೀ ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ ಕೆಜಿಎಫ್ ಚಾಪ್ಟರ್2 ಸಿನಿಮಾದ ಬಿಡುಗಡೆಗಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಈ ಸಿನಿಮಾ ಕುರಿತಾಗಿ ಏನೇ ಅಪ್‍ಡೇಟ್ ಬಂದರು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತದೆ. ಹೀಗಿರುವಾಗ ಈ ಸಿನಿಮಾ ಚಿತ್ರೀಕರಣದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈಗಾಗಲೇ ಕೆಜಿಎಫ್ ಚಾಪ್ಟರ್ 2 ತಂಡ ಶೂಟಿಂಗ್ ಮುಗಿಸಿಕೊಂಡಿದೆ. ಆದರೆ ಕೆಲವು ದೃಶ್ಯಗಳ ಪ್ಯಾಚ್ ವರ್ಕ್ ನಡೆಯುತ್ತಿರುವ ಸಾಧ್ಯತೆ ಇದೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದೆರಡು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಕೆಜಿಎಫ್2 ಚಿತ್ರೀಕರಣದ ಸೆಟ್‍ನಲ್ಲಿ ಕ್ಲಿಕ್ಕಿಸಲಾಗಿದ್ದು ಎಂಬಂತಿರುವ ಈ ಫೋಟೋಗಳನ್ನು ಅಭಿಮಾನಿಗಳು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ:  ನಾಳೆ ನೇರಳೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಕೆಜಿಎಫ್ ಚಾಪ್ಟರ್ 2 ಚಿತ್ರದ ಚೇಸಿಂಗ್ ದೃಶ್ಯಗಳ ಶೂಟಿಂಗ್ ನಡೆದಿದೆ ಎಂದು ಈ ಫೋಟೋಗಳಿಗೆ ಕ್ಯಾಪ್ಷನ್ ನೀಡಲಾಗಿದೆ. ಈ ಸಿನಿಮಾದಲ್ಲಿ ಕಥಾನಾಯಕ ರಾಕಿ ಭಾಯ್ ಮತ್ತು ಖಳನಾಯಕ ಅಧೀರನ ನಡುವೆ ಭರ್ಜರಿ ಚೇಸಿಂಗ್ ಸೀನ್ ಇರಬಹುದೇ ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ. ಆ ಬಗ್ಗೆ ಏನಾದರೂ ಮಾಹಿತಿ ಹೊರಬರಲಿ ಅಂತ ಕಾಯುತ್ತಿರುವ ಅಭಿಮಾನಿಗಳಿಗೆ ನಿರ್ದೇಶಕ ಪ್ರಶಾಂತ್ ನೀಲ್ ಅವರೇ ಪ್ರತಿಕ್ರಿಯೆ ನೀಡಿಬೇಕಿದೆ. ಇದನ್ನೂ ಓದಿ: ಡಿಎಪಿ,ಪೊಟ್ಯಾಷ್‍ಗಾಗಿ ರಾಜ್ಯದಿಂದ ಕೇಂದ್ರಕ್ಕೆ ಬೊಮ್ಮಾಯಿ ಮನವಿ

 

ಮುಂದಿನ ವರ್ಷ ಏಪ್ರಿಲ್ 14ರಂದು ಸಿನಿಮಾ ರಿಲೀಸ್ ಆಗಲಿದೆ. ಆದರೆ ಸಿನಿಮಾ ಕುರಿತಾಗಿ ಹೆಚ್ಚಿನ ನೀರಿಕ್ಷೆ ಇಟ್ಟುಕೊಂಡಿರುವ ಅಭಿಮಾನಿಗಳು ಆದಷ್ಟು ಬೇಗ ಈ ಚಿತ್ರದ ಬಗ್ಗೆ ಏನಾದರೂ ಅಪ್‍ಡೇಟ್ ಸಿಗಬಹುದೇ ನಿರೀಕ್ಷಿಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement
Advertisement