ಚಿತ್ರದುರ್ಗ: ಸ್ಯಾಂಡಲ್‍ವುಡ್ ನಟ ಯಶ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್2 ಚಿತ್ರದ ಟ್ರೈಲರ್ ರಿಲೀಸ್‍ಗೆ ಅಭಿಮಾನಿಗಳು ಕಾತುರರಾಗಿದ್ದಾರೆ. ಯಶ್ ಫ್ಯಾನ್ಸ್ ಹಲವು ಸಿದ್ಧತೆ ಮಾಡಿಕೊಂಡು ಕಾಯುತ್ತಿದ್ದರೆ, ಇತ್ತ ಕೋಟೆನಾಡು ಚಿತ್ರದುರ್ಗದಲ್ಲಿ ನಟ ಯಶ್ ಅಭಿಮಾನಿಗಳು ಕೊಂಚ ವಿಭಿನ್ನವಾಗಿ ಸೆಲೆಬ್ರೆಟ್ ಮಾಡುತ್ತಿದ್ದಾರೆ.
ಕೆಜಿಎಫ್2 ಚಿತ್ರದ ಟ್ರೈಲರ್ ರಿಲೀಸ್ ಆಗುತ್ತಿರುವ ಹಿನ್ನೆಲೆಯಲ್ಲಿ, ಕೋಟೆನಾಡು ಚಿತ್ರದುರ್ಗದಲ್ಲಿ ನಟ ಯಶ್ ಅಭಿಮಾನಿಗಳು, ನಗರದ ಆಂಜನೇಯ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. ಕೆಜಿಎಫ್2 ಪೋಸ್ಟರ್ ಹಿಡಿದು ವಿಶೇಷ ಪೂಜೆ ಸಲ್ಲಿಸಿ ಕೆಜಿಎಫ್2 ಚಿತ್ರಕ್ಕೆ ಶುಭ ಹಾರೈಸಿದ್ದಾರೆ.
ಸಂಜೆ ನಗರದ ಬಸವ ಮಂಟಪದಲ್ಲಿ ಕೆಜಿಎಫ್2 ಟ್ರೈಲರ್ ವೀಕ್ಷಣೆ ಮಾಡಲು ತಯಾರಿ ಮಾಡಿಕೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಸಂಘದಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇದನ್ನೂ ಓದಿ : ಕೆಜಿಎಫ್ 2 ಟ್ರೈಲರ್ ಬಿಡುಗಡೆಗೆ ಹೋಸ್ಟ್ ಮಾಡಲಿದ್ದಾರೆ ಕರಣ್ ಜೋಹಾರ್
ಬೆಂಗಳೂರಿನ ಒರಾಯನ್ ಮಾಲ್‍ನಲ್ಲಿರುವ ಪಿವಿಆರ್ ಥಿಯೇಟರ್‌ನಲ್ಲಿ ಕೆಜಿಎಫ್ 2 ಚಿತ್ರದ ಟ್ರೈಲರ್ ರಿಲೀಸ್ ಆಗಲಿದೆ. ನಟ ಶಿವರಾಜ್‍ಕುಮಾರ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಕರಣ್ ಅವರು ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ. ಚಿತ್ರದ ಹೀರೋ ಯಶ್, ನಾಯಕಿ ಶ್ರೀನಿಧಿ ಶೆಟ್ಟಿ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.