ಬೆಂಗಳೂರು: ಸ್ಯಾಂಡಲ್‍ವುಡ್ ನ ಬಹುನಿರೀಕ್ಷಿತ ‘ಕೆಜಿಎಫ್’ ಸಿನಿಮಾ ರಾಜ್ಯಾದ್ಯಂತ ತೆರೆಕಂಡಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಾಲಿವುಡ್ ಸಿನಿಮಾ ‘ಝೀರೋ’ ಸಿನಿಮಾವನ್ನು ಕೆಜಿಎಫ್ ಹಿಂದಿಕ್ಕಿ ಮುನ್ನುಗ್ಗುತ್ತಿದೆ.
ಬಾಲಿವುಡ್ ಬಾದ್ ಶಾ ಶಾರೂಕ್ ಖಾನ್ ಅಭಿನಯದ ‘ಝೀರೋ’ ಸಿನಿಮಾಗಿಂತಲೂ ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್’ ಸಿನಿಮಾಗೆ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕ ಲೈಕ್ಸ್ ಬಂದಿದೆ. ಬುಕ್ ಮೈ ಶೋದಲ್ಲಿ ‘ಕೆಜಿಎಫ್’ ಸಿನಿಮಾ 3 ಲಕ್ಷದ 57 ಸಾವಿರ ಲೈಕ್ಸ್ ಪಡೆದಿದೆ. ಇನ್ನು ಶಾರೂಕ್ ಖಾನ್ ನಟನೆಯ ‘ಝೀರೋ’ ಸಿನಿಮಾ 2 ಲಕ್ಷದ 59 ಸಾವಿರ ಲೈಕ್ಸ್ ಪಡೆದಿದೆ.
Advertisement
Advertisement
ಎಲ್ಲಾ ಅಡೆತಡೆಗಳನ್ನು ಮೀರಿ ದೇಶಾದ್ಯಂತ ಹವಾ ಎಬ್ಬಿಸಿದ್ದ ರಾಕಿಂಗ್ ಸ್ಟಾರ್ ಅಭಿನಯದ ಬಹುನಿರೀಕ್ಷಿತ ‘ಕೆಜಿಎಫ್’ ಸಿನಿಮಾ ತೆರೆಗೆ ಅಪ್ಪಳಿಸಿದ್ದು, ವಿಶ್ವಾದ್ಯಂತ 2 ಸಾವಿರಕ್ಕೂ ಹೆಚ್ಚು ಸ್ಕ್ರೀನ್‍ಗಳಲ್ಲಿ ಐದು ಭಾಷೆಗಳಲ್ಲಿ ತೆರೆ ಕಂಡಿದೆ.
Advertisement
ರಾಜ್ಯದೆಲ್ಲೆಡೆ 350 ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಿದ್ದು, ಯಶ್ ಅಭಿಮಾನಿಗಳು ಮಧ್ಯರಾತ್ರಿಯಿಂದ ಚಳಿಯಲ್ಲೇ ಕಾದು ಕುಳಿತಿದ್ದರು. ಆನ್‍ಲೈನ್ ಟಿಕೆಟ್ ಬುಕ್ಕಿಂಗ್‍ಗೆ ಭಾರೀ ಬೇಡಿಕೆ ಬಂದಿದ್ದು, ಈಗಾಗಲೇ ಟಿಕೆಟ್‍ಗಳು ಸೇಲ್ ಆಗುತ್ತಿದೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶದಲ್ಲೂ ಕೆಜಿಎಫ್ ರಿಲೀಸ್ ಆಗಿದೆ. ಬರೋಬ್ಬರಿ 2 ವರ್ಷಗಳ ಬಳಿಕ ಯಶ್ ಚಿತ್ರ ರಿಲೀಸ್ ಆಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv