ಆರ್.ಆರ್.ಆರ್ ಸಿನಿಮಾದ ನಂತರ ದಕ್ಷಿಣದ ಮತ್ತೊಂದು ಸಿನಿಮಾ ಜಪಾನ್ ಭಾಷೆಯಲ್ಲಿ ರಿಲೀಸ್ ಆಗುತ್ತಿದೆ. ಯಶ್ (Yash) ಮತ್ತು ಪ್ರಶಾಂತ್ ನೀಲ್ (Prashant Neel) ಕಾಂಬಿನೇಷನ್ ನ ‘ಕೆಜಿಎಫ್ 1’ (KGF) ಹಾಗೂ ‘ಕೆಜಿಎಫ್ 2’ ಚಿತ್ರವು ಜಪಾನ್ (Japan) ಭಾಷೆಗೆ ಡಬ್ ಆಗಿದ್ದು, ಶೀಘ್ರದಲ್ಲೇ ಸಿನಿಮಾ ರಿಲೀಸ್ ಆಗಲಿದೆಯಂತೆ. ಅದಕ್ಕಾಗಿಯೇ ಯಶ್ ಜಪಾನ್ ಭಾಷೆಯಲ್ಲೇ ವಿಡಿಯೋವೊಂದನ್ನು ಮಾಡಿ, ಸಿನಿಮಾ ನೋಡುವಂತೆ ಅಲ್ಲಿನ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
Advertisement
ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಆರ್.ಆರ್.ಆರ್ ಸಿನಿಮಾ ಕೂಡ ಈ ಹಿಂದೆ ಜಪಾನ್ ಭಾಷೆಯಲ್ಲಿ ರಿಲೀಸ್ ಆಗಿತ್ತು. ನೂರು ಕೋಟಿಗೂ ಅಧಿಕ ಹಣವನ್ನು ಬಾಕ್ಸ್ ಆಫೀಸಿನಲ್ಲಿ ಲೂಟಿ ಮಾಡಿತ್ತು. ಆ ಸಿನಿಮಾ ಗೆಲುವು ಕಂಡ ಬೆನ್ನಲ್ಲೇ ಕೆಜಿಎಫ್ ಸಿನಿಮಾವನ್ನೂ ಜಪಾನ್ ಭಾಷೆಯಲ್ಲಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಇದೀಗ ಸಿನಿಮಾ ರಿಲೀಸ್ ಮಾಡಲು ಹೊರಟಿದೆ.
Advertisement
Advertisement
ಇದೇ ಜುಲೈ 14 ರಂದು ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾ ಕೂಡ ಜಪಾನ್ ಭಾಷೆಯಲ್ಲಿ ಡಬ್ ಆಗಿ ರಿಲೀಸ್ ಆಗುತ್ತಿದೆ. ಪಠಾಣ್ ಸಿನಿಮಾ ಕೂಡ ಈ ವರ್ಷ ಹಿಟ್ ಆದ ಬಾಲಿವುಡ್ ಸಿನಿಮಾಗಳಲ್ಲಿ ಮೊದಲ ಸ್ಥಾನದಲ್ಲಿದೆ. ಜಪಾನ್ ನಲ್ಲಿ ಶಾರುಖ್ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಶಾರುಖ್ ಖಾನ್ ಸಿನಿಮಾಗಳು ಜಪಾನ್ ಭಾಷೆಯಲ್ಲಿ ರಿಲೀಸ್ ಆಗುತ್ತಲೇ ಇರುತ್ತವೆ. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ
Advertisement
ಜಪಾನ್ ಭಾಷೆಯಲ್ಲಿ ರಿಲೀಸ್ ಆಗುತ್ತಿರುವ ಮೊದಲ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಕೆಜಿಎಫ್. ಈ ಹಿಂದೆ ಕೆಜಿಎಫ್ ಸಿನಿಮಾ 50ನೇ ದಿನದತ್ತ ದಾಪುಗಾಲಿಡುತ್ತಿರುವ ಸಂದರ್ಭದಲ್ಲಿ, ಜಪಾನ್‍ನ ಟೋಕಿಯೋದ ಚಿತ್ರಮಂದಿರವೊಂದರಲ್ಲಿ ಚಿತ್ರದ ಪ್ರದರ್ಶನ ನಡೆದಿತ್ತು. ಜಪಾನ್‍ನಲ್ಲೂ ಅಪಾರ ಕನ್ನಡ ಅಭಿಮಾನಿಗಳು ಇದ್ದು, ಅವರು ಕೆಜಿಎಫ್ ಸಿನಿಮಾ ವೀಕ್ಷಿಸಿದ್ದರು.
ಈ ವೇಳೆ ಅಲ್ಲಿನ ಕನ್ನಡಾಭಿಮಾನಿಗಳು ಯಶ್ ಜೊತೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಸಿನಿಮಾ ಚೆನ್ನಾಗಿದೆ, ಕನ್ನಡ ಭಾಷೆಯಲ್ಲಿ ನೋಡುತ್ತಿದ್ದೇವೆ ಎಂದು ಹೇಳಿ ಯಶ್ ಅವರಿಗೆ ಶುಭಾಶಯ ತಿಳಿಸಿದ್ದರು. ಅಲ್ಲದೇ ಇದೇ ವೇಳೆ ಅಭಿಮಾನಿಗಳು ಸಿನಿಮಾದ ಒಂದು ಡೈಲಾಗ್ ಹೇಳಿ ಎಂದು ಮನವಿ ಮಾಡಿಕೊಂಡಿದ್ದರು.
ಅಭಿಮಾನಿಗಳ ಒತ್ತಾಯದ ಮೇರೆಗೆ ಯಶ್ ಫೋನ್ ಮೂಲಕವೇ ಡೈಲಾಗ್ ಹೇಳಿದ್ದಾರೆ. ಯಶ್ ಡೈಲಾಗ್ ಹೇಳಿದ ಬಳಿಕ ಚಿತ್ರಮಂದಿರದಲ್ಲಿದ್ದ ಅಭಿಮಾನಿಯೊಬ್ಬರು, ಯಶ್ ನನ್ನ ರಕ್ತಾನೂ ಕೆಂಪಗೇ ಇದೆಯಲ್ಲಾ ಎಂದು ಹೇಳಿದ್ದಾರೆ.
Web Stories