KGF ನ ಬಿಇಎಂಎಲ್ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್: ಮುರುಗೇಶ್‌ ನಿರಾಣಿ

Public TV
2 Min Read
murugesh nirani 2

ಬೆಳಗಾವಿ: ಕೆಜಿಎಫ್‌ನ (KGF) ಬಿಇಎಂಎಲ್ (BEML) ಸಂಸ್ಥೆ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್ (Industrial Township) ಮಾಡುವ ಕುರಿತು ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ (Murugesh Nirani) ವಿಧಾನಪರಿಷತ್ತಿಗೆ ತಿಳಿಸಿದರು.

industry

ಸದಸ್ಯ ಗೋವಿಂದರಾಜು ಪರವಾಗಿ ಕೆ.ಎ.ತಿಪ್ಪೇಸ್ವಾಮಿ ಅವರು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಜಿಎಫ್  (KGF) ತಾಲೂಕಿನ ಬಂಗಾರದ ಗಣಿ ಗ್ರಾಮದಲ್ಲಿ ರಾಜ್ಯ ಸರ್ಕಾರವು BEML ಕಾರ್ಖಾನೆ ಸ್ಥಾಪಿಸಲು ಸುಮಾರು 1870.30 ಎಕರೆ ಜಮೀನು ಉದ್ದೇಶಿತ ಸಂಸ್ಥೆಗೆ ಜಮೀನು ಉಪಯೋಗಿಸಿಕೊಂಡು ಬಾಕಿ ಉಳಿದಿರುವ 971.33 ಎಕರೆ ಜಮೀನನ್ನು ಕರ್ನಾಟಕ ಭೂ ಮಂಜುರಾತಿ ಅನ್ವಯ ಎಲ್ಲಾ ಋಣ ಭಾರದಿಂದ ಮುಕ್ತಗೊಳಿಸಿ ಕಂದಾಯ ಇಲಾಖೆಗೆ ವಶಪಡಿಸಿಕೊಳ್ಳಲು ಕೋಲಾರ (Kolara) ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಎಂದು ನಿರಾಣಿ ಹೇಳಿದರು.

INDUSTRY INDIA

ಕೆಜಿಎಫ್‍ನಲ್ಲಿನ (KGF) 13 ಸಾವಿರ ಎಕರೆ ಜಮೀನನ್ನು ಚಿನ್ನದ ಗಣಿಗಾರಿಕೆಗಾಗಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರ ಮಾಡಲಾಗಿತ್ತು. ಈಗ ಗಣಿ ಕಾರ್ಯನಿರ್ವಹಣೆ ಮಾಡುತ್ತಿಲ್ಲ. ಹೆಚ್ಚುವರಿಯಾಗಿ ಉಳಿದಿರುವ ಭೂಮಿಯನ್ನು ವಾಪಾಸ್ ಪಡೆದುಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸಂವಹನ ನಡೆಸಲಾಗಿತ್ತು. ಆರಂಭದಲ್ಲಿ 3,500 ಎಕರೆಯನ್ನು ಮರಳಿಕೊಡುತ್ತೇವೆ ಎಂದು ಕೇಂದ್ರ ತಿಳಿಸಿತ್ತು. ಅದಕ್ಕೆ ಪೂರಕವಾಗಿ ಸ್ಪಷ್ಟವಾದ ಚಕ್ಕುಬಂದಿ ತಿಳಿಸಲು ಸೂಚಿಸಲಾಗಿತ್ತು. ರಾಜ್ಯ ಸರ್ಕಾರ ಸರ್ವೇ ನಡೆಸಿದಾಗ ಬಹಳಷ್ಟು ಭೂಮಿ ಒತ್ತುವರಿಯಾಗಿರುವುದು ಕಂಡುಬಂದಿತು ಎಂದು ಸಚಿವ ನಿರಾಣಿ ಹೇಳಿದರು.

industry icons

ಕೆಲವರು ಅಲ್ಲಿ ಮನೆಗಳನ್ನು ನಿರ್ಮಿಸಿರೋದನ್ನ ಜಿಲ್ಲಾಧಿಕಾರಿ ಗುರುತಿಸಿದ್ದಾರೆ. ಸರ್ವೇ ವರದಿಯನ್ನು ಕೇಂದ್ರಕ್ಕೆ ಕಳುಹಿಸಿದಾಗ ಅಲ್ಲಿನ ಸಮಿತಿ ಚರ್ಚೆ ನಡೆಸಿ, ಕೇವಲ 3,500 ಎಕರೆಯನ್ನಷ್ಟೇ ಅಲ್ಲ ಪೂರ್ತಿ ಭೂಮಿಯನ್ನು ವಾಪಾಸ್ ನೀಡುತ್ತೇವೆ. ಸಾಲದ ಹೊಣೆಗಾರಿಕೆಯೊಂದಿಗೆ ಭೂಮಿಯನ್ನು ವಾಪಾಸ್ ತೆಗೆದುಕೊಳ್ಳಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ ಎಂದು ನಿರಾಣಿ ಹೇಳಿದರು. ಇದನ್ನೂ ಓದಿ: ನನಗೆ ನಿದ್ದೆಯಿಲ್ಲ, ಆರೋಗ್ಯದಲ್ಲಿ ಸಮಸ್ಯೆ ಇದೆ: ಹೆಚ್‌ಡಿಕೆ

Murgesh nirani

ಭೂಮಿಯ ಮೌಲ್ಯಕ್ಕಿಂತ ಸಾಲವೇ ಹೆಚ್ಚಿದೆ. ಅದಕ್ಕಾಗಿ ಒಮ್ಮೆಲೇ ಎಲ್ಲಾಭೂಮಿ ಬೇಡ. ಮೊದಲ ಹಂತದಲ್ಲಿ 3,500 ಎಕರೆ ಮಾತ್ರ ನೀಡಿ. ನಂತರ 2ನೇ ಹಂತದಲ್ಲಿ ಉಳಿದ ಭೂಮಿ ಪಡೆದುಕೊಳ್ಳುತ್ತೇವೆ ಎಂದು ರಾಜ್ಯ ಸರ್ಕಾರ ಸಲಹೆ ನೀಡಿದೆ. ಈ ಸಂವಹನದ ನಂತರ ಕೇಂದ್ರದಿಂದ ಪ್ರತಿಕ್ರಿಯೆ ಬಂದಿಲ್ಲ ಎಂದು ನಿರಾಣಿ ಸ್ಪಷ್ಟ ಪಡಿಸಿದರು. ಇದನ್ನೂ ಓದಿ: ಮದುವೆ ಅನ್ನೋದು ಒಂದು ಜವಾಬ್ದಾರಿ: ಎರಡನೇ ಮದುವೆ ಬಗ್ಗೆ ನಟಿ ಅಪೂರ್ವ ಮಾತು

ಬೆಮೆಲ್‍ನಲ್ಲಿ ಹೆಚ್ಚುವರಿಯಾಗಿ 967 ಎರಕೆ ಭೂಮಿ ಕಂದಾಯ ಇಲಾಖೆ ಅಧೀನದಲ್ಲಿದೆ. ಅದನ್ನು ವಾಪಾಸ್ ಪಡೆದು ಕೈಗಾರಿಕೆಗಳಿಗೆ ಹಂಚಿಕೆ ಮಾಡಲು ಸರ್ಕಾರ ಸಿದ್ಧವಿದೆ. ಆದರೆ ಕಂದಾಯ ಇಲಾಖೆಯಿಂದ ಈವರೆಗೂ ಭೂಮಿ ಹಸ್ತಾಂತರವಾಗಿಲ್ಲ. ಭೂಮಿ ನಮ್ಮ ಇಲಾಖೆಗೆ ಬರುತ್ತಿದ್ದಂತೆ ಕೈಗಾರಿಕೆಗಳಿಗೆ ಹಂಚಿಕೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ನಿರಾಣಿ ಹೇಳಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *