ಕೆಜಿಎಫ್ (KGF) ಸಿನಿಮಾ ಮೂಲಕ ಭಾರತೀಯ ಚಿತ್ರರಂಗದಲ್ಲಿ ಜನಪ್ರಿಯತೆ ಗಳಿಸಿರುವ ರಾಕಿಂಗ್ ಸ್ಟಾರ್ ಯಶ್ (Yash) ಹುಟ್ಟುಹಬ್ಬದ (Birthday) ಸಂಭ್ರಮದಲ್ಲಿದ್ದಾರೆ. ಭಾನುವಾರ (ಜ.8) ಯಶ್ ತಮ್ಮ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಕುಟುಂಬದ ಸದಸ್ಯರು ಹಾಗೂ ಆಪ್ತರ ಜೊತೆ ದುಬೈಗೆ (Dubai) ತೆರಳಿದ್ದು, ಎಂಜಾಯ್ ಮಾಡುತ್ತಿದ್ದಾರೆ.
ಪತ್ನಿ ರಾಧಿಕಾ ಪಂಡಿತ್ (Radhika Pandit), ಕುಟುಂಬದ ಸದಸ್ಯರು ಹಾಗೂ ಆಪ್ತರೊಂದಿಗೆ ದುಬೈನಲ್ಲಿ ಯಶ್ ಕಾಲ ಕಳೆಯುತ್ತಿದ್ದಾರೆ. ಯಶ್ ಕುಟುಂಬಸ್ಥರೊಡನೆ ದುಬೈನಲ್ಲಿರುವ ಫೋಟೋವನ್ನು ಆಪ್ತರು ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಎಂಟ್ರಿಯಿಂದ ವಿಜಯ್- ಸಂಗೀತಾ ದಾಂಪತ್ಯದಲ್ಲಿ ಕಲಹ?
ನೆಚ್ಚಿನ ನಟನ ಹುಟ್ಟುಹಬ್ಬಕ್ಕೆ ಹತ್ತಿರದಿಂದಲೇ ವಿಶ್ ಮಾಡಬೇಕು ಎಂದುಕೊಂಡಿದ್ದ ಅಭಿಮಾನಿಗಳಿಗೆ ಯಶ್ ಶಾಕ್ ಕೊಟ್ಟಿದ್ದರು. ಹುಟ್ಟುಹಬ್ಬದ ಸಂಭ್ರಮದ ದಿನ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ ಎಂದು ಕೆಲ ದಿನಗಳ ಹಿಂದೆಯಷ್ಟೇ ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದರು. ಆದಷ್ಟು ಬೇಗ ನಿಮಗೆ ಸಿಗುತ್ತೇನೆ. ನಿಮ್ಮ ಕಾಯುವಿಕೆಯನ್ನು ಅರ್ಥಪೂರ್ಣವಾಗಿಸುತ್ತೇನೆ ಎಂದು ಕುತೂಹಲ ಮೂಡಿಸಿದ್ದರು.
ಹುಟ್ಟುಹಬ್ಬದ ದಿನದಂದೇ 400 ಕೋಟಿ ಬಜೆಟ್ನಲ್ಲಿ ನಿರ್ಮಾಣವಾಗುತ್ತಿರುವ ಹೊಸ ಚಿತ್ರದ ಹೆಸರು ಘೋಷಣೆ ಮಾಡಲು ಮುಂದಾಗಿರುವುದು ಯಶ್ ಅಭಿಮಾನಿಗಳಿಗೆ ಡಬ್ಬಲ್ ಧಮಾಕ ನೀಡಿದಂತಾಗಿದೆ. ಇದನ್ನೂ ಓದಿ: ನೋರಾ ಫತೇಹಿ ಜೊತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ಪಾಕಿಸ್ತಾನ ನಟಿಯ ಜೊತೆ ಆರ್ಯನ್ ಖಾನ್ ಪಾರ್ಟಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k