ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಿತ್ರ ಸೆನ್ಸಾರ್ ನಲ್ಲಿ ಪಾಸಾಗಿದ್ದು, ಸೆನ್ಸಾರ್ ಮಂಡಳಿ ಯಾವುದೇ ಕತ್ತರಿ ಪ್ರಯೋಗ ಮಾಡದೇ ಯು/ಎ ಸರ್ಟಿಫಿಕೇಟ್ ನೀಡಿದೆ. ಈ ಚಿತ್ರ ಇದೇ ತಿಂಗಳ 21ಕ್ಕೆ ವಿಶ್ವಾದ್ಯಂತ ತೆರೆಗೆ ಬರಲಿದೆ.
ಬಹು ನಿರೀಕ್ಷಿತ ಕೆಜಿಎಫ್ ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಕನ್ನಡ, ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳ ಹೀಗೆ 5 ಭಾಷೆಗಳಲ್ಲಿ ಬಿಡುಗಡೆಯಾಗ್ತಿದ್ದು, ಈ ಮೂಲಕ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗುವ ಪ್ರಥಮ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
Advertisement
Advertisement
ಕೆಜಿಎಫ್ ಚಿತ್ರದ ಒಂದು ಟೀಸರ್, 2 ಟ್ರೇಲರ್ ಹಾಗೂ 1 ಹಾಡು ಬಿಡುಗಡೆಯಾಗಿದ್ದು, ಸದ್ದು ಮಾಡುವ ಮೂಲಕ ಈಗಾಗಲೇ ಭಾರತೀಯ ಸಿನಿ ಅಂಗಳದಲ್ಲಿ ಸಂಚಲನ ಸೃಷ್ಟಿಸಿದೆ. ಸತತ ಎರಡೂವರೆ ವರ್ಷಗಳಿಂದ ಸಿದ್ಧಗೊಂಡಿರುವ ಕೆಜಿಎಫ್ ಒಟ್ಟು 2 ಭಾಗಗಳಲ್ಲಿ ತೆರೆಕಾಣಲಿದೆ. ಇದರ ಮೊದಲ ಭಾಗ ಇದೇ 21ರಂದು ಬಿಡುಗಡೆಯಾಗುತ್ತಿದೆ. ಹೀಗಾಗಿ ಸಿನಿ ಪ್ರೇಕ್ಷಕರಲ್ಲಿ ಒಂದು ರೀತಿಯ ವಿಭಿನ್ನ ಕುತೂಹಲ ಹುಟ್ಟಿಸಿದೆ.
Advertisement
ತೆಲುಗಿನ ಬಾಹುಬಲಿ ಸಿನಿಮಾದ ಬಳಿಕ ಇಷ್ಟೊಂದು ಕ್ರೇಜ್ ಹುಟ್ಟುಹಾಕಿರುವ ಸಿನಿಮಾ ಕನ್ನಡದ ಕೆಜಿಎಫ್ ಆಗಿದೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ `ಸಲಾಮ್ ರಾಕಿ ಭಾಯ್’ ಲಿರಿಕಲ್ ವಿಡಿಯೋ ಒಬ್ಬ ಸಾಮಾನ್ಯ ಹುಡುಗ ಮುಂಬೈ ಭೂಗತ ಲೋಕದ ಅಧಿಪತಿಯಾದ ಕಥೆಯನ್ನು ಹೇಳಿತ್ತು. 70ರ ದಶಕದಲ್ಲಿ ಮುಂಬೈ ಅಧಿಪತಿಯಾಗುವ ರಾಕಿಯ ತಾಕತ್ತನ್ನು ಸಲಾಮ್ ರಾಕಿ ಭಾಯ್ ಹಾಡಿನ ಪದಗಳು ವರ್ಣನೆ ಮಾಡಿದ್ದವು. ಎರಡನೇಯ ಟ್ರೇಲರ್ ಕೂಡ ರಿವೀಲ್ ಆಗಿದ್ದು, ಚಿತ್ರದ ಮತ್ತೊಂದು ಶೇಡ್ ಇದರಲ್ಲಿ ತೋರಿಸಲಾಗಿತ್ತು.
Advertisement
ಕೋಲಾರದ ಕೆಜಿಎಫ್ ನಲ್ಲಿ ಹುಟ್ಟುವ ಮಗು ಮುಂಬೈನಲ್ಲಿ ತನ್ನ ಹೆಜ್ಜೆಯನ್ನು ಮೂಡಿಸುತ್ತಾನೆ. ನೀನು ಹೇಗೆ ಬಾಳ್ತಿಯಾ ನನಗೆ ಗೊತ್ತಿಲ್ಲ. ಆದ್ರೆ ಸಾಯುವ ಮುನ್ನ ನೀನೊಬ್ಬ ಶ್ರೀಮಂತ, ಅತ್ಯಂತ ಶಕ್ತಿಯುಳ್ಳವನಾಗಿರಬೇಕು ಎಂದು ಮಗನಿಂದ ಮಾತು ಪಡೆದುಕೊಳ್ಳುವ ತಾಯಿ. ಮುಂಬೈ ಸೇರಿದ ಮೇಲೆ ಬದಲಾಗುವ ಬದುಕು. ಮತ್ತೆ ಕೋಲಾರ ಸೇರುವ ಹುಡುಗ. ಹೀಗೆ ಕಥೆಯ ಒಂದೊಂದು ಎಳೆಯನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ. ಅದೇ ರೀತಿಯಲ್ಲಿ ಇತರೆ ಕಲಾವಿದರ ಪಾತ್ರವನ್ನು ಇಲ್ಲಿ ಪರಿಚಯಿಸಲಾಗಿದೆ.
ಕೆಜಿಎಫ್ ಮೊದಲ ಭಾಗದಲ್ಲಿ ನಟಿ ಶ್ರೀನಿಧಿ ಶೆಟ್ಟಿ, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಅನಂತ್ ನಾಗ್ ಹಾಗೂ ವಸಿಷ್ಠ ಸಿಂಹ ನಟಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv