ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ (Belagavi) ಡಿಸೆಂಬರ್ 2ರಿಂದ 11ರವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ (Winter Session) ದಿನಗಣನೆ ಆರಂಭವಾಗಿದ್ದು, ಈ ಬಾರಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಪೊಲೀಸ್ ಇಲಾಖೆ ಈಗಿನಿಂದಲೇ ಭರ್ಜರಿ ಸಿದ್ಧತೆ ಆರಂಭಿಸಿದೆ.
ಅಧಿವೇಶನದ ಸಂದರ್ಭದಲ್ಲಿ ರೈತರು, ಕಾರ್ಮಿಕರು ಸೇರಿದಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ, ಧರಣಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟಗಳು ನಡೆಯುವ ಸಾಧ್ಯತೆ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಸಿದ್ಧತೆ ನಡೆಸಲಾಗಿದೆ. ಇದನ್ನೂ ಓದಿ: ನಾಳೆ ಬೆಂಗಳೂರಿಗೆ ಮೋದಿ ಭೇಟಿ – ಹಲವೆಡೆ ವಾಹನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳ ಪ್ರಕಟ
ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕಮ್ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಈಗಾಗಲೇ ಭದ್ರತಾ ವ್ಯವಸ್ಥೆಯ ಪರಿಶೀಲನೆ ಆರಂಭಿಸಿದ್ದಾರೆ. ಖುದ್ದು ಪೊಲೀಸ್ ಆಯುಕ್ತರೇ ಸುವರ್ಣಸೌಧ ಸೇರಿದಂತೆ ಪ್ರತಿಭಟನೆಗಳು ನಡೆಯುವ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಸ್ಥಳದಲ್ಲಿ ಎಷ್ಟು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು, ಯಾವ ರೀತಿಯಲ್ಲಿ ಭದ್ರತಾ ವ್ಯವಸ್ಥೆ ರೂಪಿಸಬೇಕು, ಪ್ರತಿಭಟನಾಕಾರರ ನಿರ್ವಹಣೆ ಹೇಗಿರಬೇಕು ಎಂಬುದರ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.
ಈ ಬಾರಿಯ ಚಳಿಗಾಲದ ಅಧಿವೇಶನದ ಭದ್ರತೆಗಾಗಿ ಬರೋಬ್ಬರಿ 7 ಸಾವಿರ ಪೊಲೀಸರನ್ನು ನಿಯೋಜಿಸಲು ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಬೆಳಗಾವಿ ನಗರ ಹಾಗೂ ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆಗಳಿಂದಲೂ ಪೊಲೀಸ್ ಸಿಬ್ಬಂದಿಯನ್ನು ಕರೆಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಇದರ ಜೊತೆಗೆ 35 ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲು ಸಿದ್ಧತೆ ನಡೆಸಲಾಗಿದ್ದು, ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.ಇದನ್ನೂ ಓದಿ: ಕೊಲೆ ಆರೋಪಿ ದರ್ಶನ್ ಬೆನ್ನುನೋವು ಚಿಕಿತ್ಸಾ ವರದಿ ಇಂದು ಕೋರ್ಟ್ಗೆ ಸಲ್ಲಿಕೆ
ಸಿಸಿಟಿವಿ, ಡ್ರೋನ್ಗಳ ಮೂಲಕ ಪ್ರತಿಭಟನಾ ಸ್ಥಳಗಳ ಮೇಲೆ ನಿಗಾ:
ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆಗಳು ನಡೆಯುವ ಸ್ಥಳಗಳು, ಪ್ರಮುಖ ರಸ್ತೆ ಹಾಗೂ ಸುವರ್ಣಸೌಧದ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಹದ್ದಿನ ಕಣ್ಣಿಡಲು ತಂತ್ರಜ್ಞಾನಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈಗಾಗಲೇ ಇರುವ ಭದ್ರತಾ ವ್ಯವಸ್ಥೆಗೆ ಹೆಚ್ಚುವರಿಯಾಗಿ 600 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಸಿದ್ಧತೆ ನಡೆದಿದೆ. ಅಲ್ಲದೆ, ಪ್ರತಿಭಟನಾ ಸ್ಥಳಗಳು ಹಾಗೂ ಜನಸಂದಣಿ ಹೆಚ್ಚಾಗುವ ಪ್ರದೇಶಗಳ ಮೇಲೆ ನಿಗಾ ವಹಿಸಲು 10 ಡ್ರೋನ್ಗಳನ್ನು ಬಳಸಲು ಯೋಜಿಸಲಾಗಿದೆ. ಇದರಿಂದ ಪ್ರತಿಭಟನೆಗಳ ಚಲನವಲನ, ಜನಸಂದಣಿ ಹಾಗೂ ಭದ್ರತಾ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸಲು ಪೊಲೀಸ್ ಇಲಾಖೆ ಮುಂದಾಗಿದೆ.
7 ಸಾವಿರ ಪೊಲೀಸರಿಗೆ ಶಿಂದೊಳ್ಳಿಯಲ್ಲಿ ಟೆಂಟ್ ಟೌನ್ಶಿಪ್:
ಅಧಿವೇಶನದ ಭದ್ರತೆಗೆ ನಿಯೋಜನೆಗೊಳ್ಳುವ ಸಾವಿರಾರು ಪೊಲೀಸರ ವಾಸ್ತವ್ಯಕ್ಕೂ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಶಿಂದೊಳ್ಳಿ ಗ್ರಾಮದಲ್ಲಿ ಪೊಲೀಸರಿಗಾಗಿ ಟೆಂಟ್ ಟೌನ್ಶಿಪ್ ನಿರ್ಮಿಸಲು ಸಿದ್ಧತೆ ನಡೆಸಲಾಗಿದ್ದು, ಸುಮಾರು 7 ಸಾವಿರ ಪೊಲೀಸ್ ಸಿಬ್ಬಂದಿಗೆ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಚಳಿಗಾಲದ ಹಿನ್ನೆಲೆ ಪೊಲೀಸರಿಗೆ ಬಿಸಿನೀರು, ಹಾಸಿಗೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಜೊತೆಗೆ ಆರೋಗ್ಯ ಸಮಸ್ಯೆಗಳು ಎದುರಾದಲ್ಲಿ ತಕ್ಷಣ ಚಿಕಿತ್ಸೆ ದೊರೆಯುವಂತೆ ವೈದ್ಯಕೀಯ ವ್ಯವಸ್ಥೆಯನ್ನೂ ಕಲ್ಪಿಸಲು ಪೊಲೀಸ್ ಇಲಾಖೆ ಮುಂದಾಗಿದೆ.ಇದನ್ನೂ ಓದಿ:ಮೇ ಡಂ ಸೆಕ್ಸ್ ಅವೈಲೆಬಲ್ ಇದ್ಯಾ? – ಬೈಕ್ ಟ್ಯಾಕ್ಸಿ ಸವಾರನಿಂದ ಯುವತಿಗೆ ಲೈಂಗಿಕ ಕಿರುಕುಳ ಆರೋಪ
ಸುವರ್ಣಸೌಧದ ಸುತ್ತ ನಿಷೇಧಾಜ್ಞೆ ಜಾರಿ:
ಅಧಿವೇಶನದ ಹಿನ್ನೆಲೆ ಸುವರ್ಣಸೌಧದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸುವರ್ಣಸೌಧದ ಸುತ್ತಮುತ್ತ 2 ರಿಂದ 3 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ನವೆಂಬರ್ 15ರಿಂದ ಜನವರಿ 15ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ರೈತರು, ಕಾರ್ಮಿಕರು ಹಾಗೂ ವಿವಿಧ ಸಂಘಟನೆಗಳ ಪ್ರತಿಭಟನೆಗಳ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ.
ಜಿಲ್ಲಾಡಳಿತವೂ ಅಲರ್ಟ್, ಡಿಸಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ:
ಮತ್ತೊಂದೆಡೆ ಚಳಿಗಾಲದ ಅಧಿವೇಶನವನ್ನು ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತವೂ ಸಕಲ ಸಿದ್ಧತೆಗಳನ್ನು ಆರಂಭಿಸಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗಿದೆ. ಅಧಿವೇಶನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ಸಮಿತಿಗಳ ಕಾರ್ಯಚಟುವಟಿಕೆಗಳ ಕುರಿತು ಚರ್ಚೆ ನಡೆಸಿ, ಪ್ರತಿಯೊಂದು ಇಲಾಖೆಯ ಅಧಿಕಾರಿಗಳಿಗೂ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ.ಇದನ್ನೂ ಓದಿ: ಬಿಜೆಪಿ ಅವರು ರೀಲ್ಸ್ ರಾಜರು: ಪ್ರಿಯಾಂಕ್ ಖರ್ಗೆ ಕಿಡಿ
ಅಧಿವೇಶನದ ಸಂದರ್ಭದಲ್ಲಿ ಸಾರ್ವಜನಿಕರಿಗೆ, ಜನಪ್ರತಿನಿಧಿಗಳಿಗೆ ಹಾಗೂ ವಿವಿಧ ಸಂಘಟನೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಕುಡಿಯುವ ನೀರು, ಸ್ವಚ್ಛತೆ, ಸಾರಿಗೆ, ಆರೋಗ್ಯ ಸೇರಿದಂತೆ ಪ್ರತಿಯೊಂದು ಇಲಾಖೆಯೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸುವರ್ಣಸೌಧಕ್ಕೆ ಸ್ವಚ್ಛತೆಯ ಸ್ಪರ್ಶ:
ಇನ್ನು ಅಧಿವೇಶನಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ಸುವರ್ಣಸೌಧದ ಸೌಂದರ್ಯ ಹಾಗೂ ಸ್ವಚ್ಛತೆ ಕಾಪಾಡುವ ಕಾರ್ಯವೂ ಚುರುಕುಗೊಂಡಿದೆ. ಇತ್ತೀಚೆಗೆ ಸುರಿದ ಮಳೆಯಿಂದಾಗಿ ಸುವರ್ಣಸೌಧದ ಕಟ್ಟಡದ ಸುತ್ತಮುತ್ತ ಹಾಗೂ ಕೆಲವು ಭಾಗಗಳಲ್ಲಿ ಪಾಚಿ ಕಟ್ಟಿಕೊಂಡಿದ್ದು, ಇದೀಗ ಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ. ಅಧಿವೇಶನ ಆರಂಭಕ್ಕೂ ಮುನ್ನ ಸುವರ್ಣಸೌಧದ ಆವರಣವನ್ನು ಸಂಪೂರ್ಣ ಸ್ವಚ್ಛಗೊಳಿಸಿ ಸಿದ್ಧಪಡಿಸಲು ಜಿಲ್ಲಾಡಳಿತ ಮುಂದಾಗಿದೆ.ಇದನ್ನೂ ಓದಿ: ಜೀವ ಹೋದ್ರೂ ಪರವಾಗಿಲ್ಲ, ಮೋದಿ ಹೈ ತೋ ಮುಮ್ಕಿನ್ ಹೈ ಅಂತಾನೆ ಘೋಷಣೆ ಹಾಕಿ ಬಿಜೆಪಿಯವರು ಸಾಯೋದು: ಪ್ರಿಯಾಂಕ್ ಖರ್ಗೆ
