ನವದೆಹಲಿ: ಈ ಬಾರಿ ದೆಹಲಿಯಲ್ಲಿ (New Delhi) ಜಿ20 ಶೃಂಗಸಭೆ (G20 Summit) ನಡೆಯುವುದಕ್ಕೆ ಬಿಡಬೇಡಿ ಎಂದು ಕಾಶ್ಮೀರಿ ಮುಸ್ಲಿಮರಿಗೆ ಖಲಿಸ್ತಾನಿ ಪ್ರತ್ಯೇಕತಾವಾದಿ (Khalistani Separatist) ಮತ್ತು ಸಿಖ್ಸ್ ಫಾರ್ ಜಸ್ಟಿಸ್ (ಎಸ್ಎಫ್ಜೆ) ಸಂಸ್ಥಾಪಕ ಗುರುಪತ್ವಂತ್ ಸಿಂಗ್ ಪನ್ನುನ್ ಕರೆ ನೀಡಿದ್ದಾರೆ.
ಎರಡು ದಿನಗಳ ಶೃಂಗಸಭೆಯು ನವದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿದೆ. ಕಣಿವೆಯಲ್ಲಿ ನೆಲೆಸಿರುವ ಕಾಶ್ಮೀರಿ ಮುಸ್ಲಿಮರು ದೆಹಲಿಗೆ ಹೋಗಿ ಜಿ20 ಶೃಂಗಸಭೆಗೆ ಅಡ್ಡಿಪಡಿಸಿ ಎಂದು ಆಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ವಿರುದ್ಧ ಆಕ್ರೋಶ; ಆನ್ಲೈನ್ ಮೂಲಕ ದೂರು ದಾಖಲಿಸಲು ಮುಂದಾದ ಹಿಂದೂ ಸಂಘಟನೆಗಳು
Advertisement
Advertisement
ಶುಕ್ರವಾರದ ಪ್ರಾರ್ಥನೆಯ ನಂತರ ಶೃಂಗಸಭೆ ನಡೆಯುವ ಪ್ರಗತಿ ಮೈದಾನಕ್ಕೆ ಮೆರವಣಿಗೆ ನಡೆಸುವಂತೆ ಪನ್ನುನ್ ಜನರಿಗೆ ಕರೆ ನೀಡಿದ್ದಾರೆ. ಅಲ್ಲದೆ ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಖಲಿಸ್ತಾನಿ ಧ್ವಜ ಹಾರಿಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
Advertisement
ದೆಹಲಿಯಾದ್ಯಂತ ಹಲವಾರು ಮೆಟ್ರೋ ನಿಲ್ದಾಣಗಳನ್ನು ಖಲಿಸ್ತಾನ್ ಪರ ಗೀಚುಬರಹದಿಂದ ವಿರೂಪಗೊಳಿಸಿದ ಕೆಲವೇ ದಿನಗಳಲ್ಲಿ ಈ ಎಚ್ಚರಿಕೆ ಬಂದಿದೆ. ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದಕ್ಕೆ ಎಸ್ಎಫ್ಜೆಗೆ ಸಂಬಂಧಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಗುರುಪತ್ವಂತ್ ಸಿಂಗ್ ಪನ್ನುನ್ ಆದೇಶದ ಮೇರೆಗೆ ಈ ಘೋಷಣೆಗಳನ್ನು ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚಂದ್ರಯಾನ-3ರ ಕೌಂಟ್ಡೌನ್ಗೆ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ವಲರ್ಮತಿ ಹೃದಯಾಘಾತದಿಂದ ನಿಧನ
Advertisement
ದೆಹಲಿಯಲ್ಲಿ ಪಂಜಾಬಿ ಬಾಗ್, ಶಿವಾಜಿ ಪಾರ್ಕ್, ಮಾದಿಪುರ್, ಪಶ್ಚಿಮ ವಿಹಾರ್, ಉದ್ಯೋಗ್ ನಗರ್, ಮಹಾರಾಜ ಸೂರಜ್ಮಲ್ ಸ್ಟೇಡಿಯಂ ಮತ್ತು ನಂಗ್ಲೋಯ್ ಸೇರಿದಂತೆ ಮೆಟ್ರೋ ನಿಲ್ದಾಣಗಳ ಗೋಡೆಗಳ ಮೇಲೆ ‘ದೆಹಲಿ ಬನೇಗಾ ಖಲಿಸ್ತಾನ್’ ಮತ್ತು ‘ಖಾಲಿಸ್ತಾನ್ ರೆಫರೆಂಡಮ್ ಜಿಂದಾಬಾದ್’ ಎಂಬ ಘೋಷಣೆಗಳನ್ನು ಬರೆಯಲಾಗಿತ್ತು.
Web Stories