ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ (Delhi) ಸುತ್ತಮುತ್ತಲಿನ ಪ್ರದೇಶಗಳಲ್ಲಿ ಖಲಿಸ್ತಾನಿ ಉಗ್ರರ ಸ್ಲೀಪರ್ ಸೆಲ್‍ಗಳು (Khalistani Sleeper Cells) ಸಕ್ರಿಯವಾಗಿದೆ ಎಂದು ಗುಪ್ತಚರ ಇಲಾಖೆ (Intelligence Agencies) ಮೂಲಗಳಿಂದ ಮಾಹಿತಿ ಬಂದಿರುವ ಬಗ್ಗೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
Advertisement
ಪಶ್ಚಿಮ ದೆಹಲಿಯ ಹಲವು ಪ್ರದೇಶಗಳಲ್ಲಿ ಇತ್ತೀಚೆಗೆ ಖಲಿಸ್ತಾನಿ ಪರ ಪೋಸ್ಟರ್‌ಗಳು, ಖಲಿಸ್ತಾನಿ ಉಗ್ರರ ಗೋಡೆ ಬರಹಗಳು (Khalistani Poster) ಕಾಣಿಸಿಕೊಳ್ಳುತ್ತಿವೆ. ವಿಕಾಸಪುರಿ, ಜನಕಪುರಿ, ಪಶ್ಚಿಮ ವಿಹಾರ್, ಪೀರಗರ್ಹಿಯಲ್ಲಿ ಖಲಿಸ್ತಾನಿ ಪರ ಬರಹಗಳು ಪತ್ತೆಯಾಗಿತ್ತು. ಈ ಬೆನ್ನಲ್ಲೇ ಗುಪ್ತಚಾರ ಇಲಾಖೆ ಸ್ಫೋಟಕ ಮಾಹಿತಿ ನೀಡಿದೆ. ಖಲಿಸ್ತಾನಿ ಉಗ್ರರು ದೊಡ್ಡ ಮಟ್ಟಿನ ದಾಳಿಗೆ ಸಂಚು ರೂಪಿಸಿರುವ ಬಗ್ಗೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: India-China Border Row: 1962ರಲ್ಲೇ ಚೀನಾ ಭೂಪ್ರದೇಶ ಆಕ್ರಮಿಸಿತ್ತು – ರಾಗಾ ಟೀಕೆಗೆ ಜೈಶಂಕರ್ ತಿರುಗೇಟು
Advertisement
Advertisement
ಇತ್ತೀಚೆಗೆ ದೆಹಲಿ ಮತ್ತು ಪಂಜಾಬ್‍ನಲ್ಲಿ (Punjab) ಖಲಿಸ್ತಾನಿ ಉಗ್ರರ ಹಾವಳಿ ಹೆಚ್ಚಾಗಿದೆ. ಪಂಜಾಬ್‍ನಲ್ಲಿ ಭದ್ರತಾ ಪಡೆ ಕಚೇರಿಯನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡಲಾಗುತ್ತಿದ್ದು, ಪ್ರತಿ ದಾಳಿಯ ಹಿಂದೆ ಖಲಿಸ್ತಾನಿ ಉಗ್ರರ ಕೈವಾಡ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೆಲ ತಿಂಗಳ ಹಿಂದೆ ಪಶ್ಚಿಮ ದೆಹಲಿಯ ವಿಕಾಸಪುರಿ, ಜನಕಪುರಿ, ಪಶ್ಚಿಮ ವಿಹಾರ್, ಪೀರಗರ್ಹಿ ಮತ್ತು ಇತರ ಕಡೆಗಳಲ್ಲಿ, ಖಲಿಸ್ತಾನಿ ಪರ ಬರಹಗಳು ಮತ್ತು ಕೋಡ್‍ಗಳು ಕಾಣಿಸಿಕೊಂಡಿದ್ದವು. ಆ ಬಳಿಕ ಈ ಬಗ್ಗೆ ಎಚ್ಚರಿಕೆ ವಹಿಸಿಕೊಂಡಿರುವ ಪೊಲೀಸ್ ಇಲಾಖೆ ಮತ್ತು ಗುಪ್ತಚರ ಇಲಾಖೆ ಖಲಿಸ್ತಾನಿ ಉಗ್ರರ ಸಂಚಿನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್‌ನ ಹತಾಶೆಯು ಅವರು ಬಳಸುವ ಭಾಷೆಯಲ್ಲಿ ವ್ಯಕ್ತವಾಗ್ತಿದೆ: ಬೊಮ್ಮಾಯಿ
Advertisement
ಈ ನಡುವೆ ದೆಹಲಿಯಲ್ಲಿ ಕಾಣಿಸಿಕೊಂಡಿದ್ದ ಪೋಸ್ಟರ್‌ಗಳನ್ನು ಪೊಲೀಸರು ಕಿತ್ತೆಸೆದು, ಬರಹಗಳನ್ನು ಅಳಿಸಿ ಹಾಕಿದ್ದಾರೆ. ಪೋಸ್ಟರ್ ಅಂಟಿಸಿದವರು ಮತ್ತು ಗೋಡೆ ಬರಹ ಬರೆದವರ ಪತ್ತೆಗೆ ಮುಂದಾಗಿದ್ದಾರೆ. ಸ್ಥಳೀಯ ಸಿಸಿಟಿವಿಗಳಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಇತ್ತ ಗುಪ್ತಚರ ಇಲಾಖೆ ನೀಡಿದ ಮಾಹಿತಿಯನ್ನೂ ಭದ್ರತಾ ಪಡೆ ಸಿಬ್ಬಂದಿ ಗಂಭೀರವಾಗಿ ಪರಿಗಣಿಸಿ ಎಲ್ಲೆಡೆ ಅಲರ್ಟ್ ಆಗಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k